ಇಂದಿರಾ ಕ್ಯಾಂಟೀನ್‌ನಲ್ಲಿ ಶುಚಿತ್ವ ಕಾಪಾಡಲು ಸೂಚನೆ

ಗೌರಿಬಿದನೂರು: ನಗರದ ಬಿ.ಎಚ್.ರಸ್ತೆಯಲ್ಲಿರುವ ಇಂದಿರಾ ಕ್ಯಾಂಟೀನ್‌ಗೆ ಬುಧವಾರ ಬೆಳಿಗ್ಗೆ ನಗರಸಭೆ ಅಧ್ಯಕ್ಷೆ ಕೆ.ಎಂ.ಗಾಯತ್ರಿ ಬಸವರಾಜ್ ಭೇಟಿ ನೀಡಿ ಅಲ್ಲಿನ ಶುಚಿತ್ವ ಹಾಗೂ ಆಹಾರದ ಗುಣಮಟ್ಟವನ್ನು ಪರಿಶೀಲಿಸಿದರು.
‘ಸಾರ್ವಜನಿಕರ ಅನುಕೂಲಕ್ಕಾಗಿ ಮಾಡಿರುವ ಇಂದಿರಾ ಕ್ಯಾಂಟೀನ್‌ನಲ್ಲಿ ನಿತ್ಯ ಗುಣಮಟ್ಟದ ಮತ್ತು ಶುಚಿತ್ವವುಳ್ಳ ಆಹಾರವನ್ನು ನೀಡಬೇಕಾಗಿದೆ. ಇದರಿಂದ ಜನರು ನೆಮ್ಮದಿಯಿಂದ ಕ್ಯಾಂಟೀನ್‌ಗೆ ಬಂದು ಆಹಾರ ಸೇವನೆ ಮಾಡಲು ಸಹಾಯವಾಗುತ್ತದೆ. ಜತೆಗೆ ನಗರಸಭೆಯ ಪೌರಕಾರ್ಮಿಕರು ಕ್ಯಾಂಟೀನ್ ಸುತ್ತಲಿನ ಪ್ರದೇಶವನ್ನು ಶುಚಿಗೊಳಿಸಲು ಮುಂದಾಗಬೇಕಾಗಿದೆ’ ಎಂದರು.
‘ಆಹಾರ ತಯಾರಿಕೆಗೂ ಮುನ್ನ ಪಾತ್ರೆಗಳನ್ನು ಸ್ವಚ್ಛವಾಗಿ ತೊಳೆದು ಶುಭ್ರಗೊಳಿಸುವ ಬಗ್ಗೆ ಇಲ್ಲಿನ ಸಿಬ್ಬಂದಿ ಕಾಳಜಿ ವಹಿಸಬೇಕಾಗಿದೆ. ಯಾವುದೇ ಕಾರಣಕ್ಕೂ ನಾಗರಿಕರಿಂದ ಇಲ್ಲಿನ ಆಹಾರದ ಗುಣಮಟ್ಟ ಹಾಗೂ ಶುಚಿತ್ವದ ಬಗ್ಗೆ ಯಾವುದೇ ದೂರುಗಳು ಬರದಂತೆ ನೋಡಿಕೊಳ್ಳಬೇಕಾಗಿದೆ’ ಎಂದು ಹೇಳಿದರು. ಗಾಯತ್ರಿಯವರು ಕ್ಯಾಂಟೀನ್‌ನಲ್ಲಿಯೇ ಬೆಳಗಿನ ಉಪಾಹಾರ ಸೇವಿಸಿದರು.
ನಗರಸಭೆಯ ಆರೋಗ್ಯ ನಿರೀಕ್ಷಕರಾದ ಸುರೇಶ್ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.