ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೋಷಣೆ ಮುಕ್ತಕ್ಕೆ ಕಾನೂನು ಅರಿವು ಅಗತ್ಯ

Last Updated 9 ಮಾರ್ಚ್ 2021, 3:21 IST
ಅಕ್ಷರ ಗಾತ್ರ

ಶಿಡ್ಲಘಟ್ಟ: ‘ಕಾನೂನಿನ ವಿವೇಚನೆ ಇಲ್ಲದೆ ಆಗುವ ಅನಾಹುತ ತಡೆಗಟ್ಟಲು ಮತ್ತು ಶೋಷಣೆಯಿಂದ ಮುಕ್ತರಾಗಲು ಮಹಿಳೆಯರು ಕಾನೂನಿನ ಅರಿವು ಪಡೆಯಬೇಕು’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಡಿ.ಆರ್. ಮಂಜುನಾಥ್ ಸಲಹೆ ನೀಡಿದರು.

ನಗರದ ಸ್ತ್ರೀಶಕ್ತಿ ಭವನದಲ್ಲಿ ಸೋಮವಾರ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಆಶ್ರಯದಲ್ಲಿ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬಾಲ್ಯವಿವಾಹ, ಮಕ್ಕಳ ಕಳ್ಳ ಸಾಗಾಣಿಕೆ, ಹೆಣ್ಣುಮಕ್ಕಳ ಶೋಷಣೆ, ದೌರ್ಜನ್ಯ ನಡೆಸುವವರಿಗೆ ಕಾನೂನಿನಡಿ ಶಿಕ್ಷೆ ಇದೆ. ಇಂತಹ ಪ್ರಕರಣಗಳನ್ನು ಸಮಾಜದಲ್ಲಿ ತಡೆ ಹಿಡಿಯಬೇಕು. ಮಕ್ಕಳ ಮತ್ತು ಮಹಿಳೆಯರ ಅಮೂಲ್ಯವಾದ ಹಕ್ಕುಗಳನ್ನು ನಾವು ನೀವು ಕಾಪಾಡಬೇಕು ಎಂದು ಹೇಳಿದರು.

ಮಕ್ಕಳು ಮತ್ತು ಮಹಿಳೆಯರ ಮೇಲೆ ದೌರ್ಜನ್ಯ ನಡೆದರೆ ಧೈರ್ಯವಾಗಿ ಮುಂದೆ ಬಂದು ಕಾನೂನಿನ ನೆರವು ಪಡೆದುಕೊಳ್ಳಬೇಕು. ಮಕ್ಕಳಿಗೆ ಮತ್ತು ಮಹಿಳೆಯರ ರಕ್ಷಣೆಗಾಗಿ ಹಲವಾರು ಕಾನೂನುಗಳನ್ನು ಜಾರಿಗೆ ತರಲಾಗಿದೆ. ಇದರ ಬಗ್ಗೆ ತಿಳಿದುಕೊಂಡರೆ ಮುಂದೆ ಯಾರಿಗಾದರೂ ಅನ್ಯಾಯವಾದಾಗ ಅವರಿಗೆ ನೀವು ಸಹಾಯ ಮಾಡಬಹುದು ಎಂದು ಹೇಳಿದರು.

ಪೋಷಣ್ ಅಭಿಯಾನದಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಮೇಲ್ವಿಚಾರಕಿಯರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಪ್ರಶಂಸಾ ಪತ್ರ ನೀಡಲಾಯಿತು.

ಪ್ರಧಾನ ಸಿವಿಲ್ ನ್ಯಾಯಾಧೀಶ ಸಂಜುಕುಮಾರ್ ಎ. ಪಚ್ಚಾಪುರೆ, ವಕೀಲರ ಸಂಘದ ತಾಲ್ಲೂಕು ಉಪಾಧ್ಯಕ್ಷ ಎಸ್.ಎನ್. ಚಂದ್ರಶೇಖರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ನಾಗವೇಣಿ, ಮಹಿಳಾ ಸಾಂತ್ವನ ಕೇಂದ್ರದ ಅಧ್ಯಕ್ಷೆ ವಿಜಯ ವೆಂಕಟರಾಮ್, ಭಾರತಿ, ಎಸಿಡಿಪಿಒ ಮಹೇಶ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT