ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಕ್ಕುಗಳ ಪರ ಧ್ವನಿ; ಕಾನೂನು ಅರಿವು ಅಗತ್ಯ

Last Updated 9 ಮಾರ್ಚ್ 2021, 3:15 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಮಹಿಳೆಯು ಎಲ್ಲ ಕ್ಷೇತ್ರಗಳಲ್ಲಿ ಪುರುಷರ ಸಮಾನವಾಗಿ ಧ್ವನಿ ಎತ್ತಬೇಕಾದರೆ ಹಾಗೂ ಸರ್ವಾಂಗೀಣ ಅಭಿವೃದ್ಧಿಗೆ ಕಾನೂನಿನ ಅರಿವು ಬಹಳ ಮುಖ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಎಚ್. ದೇವರಾಜು ತಿಳಿಸಿದರು.

ನಗರದ ಸ್ತ್ರೀಶಕ್ತಿ ಭವನದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಹಿಂದಿನ ಕಾಲದಲ್ಲಿ ಹಿರಿಯರು ಮಹಿಳೆಯರ ರಕ್ಷಣೆ ದೃಷ್ಟಿಯಿಂದ ಹಾಗೂ ಸಾಮಾಜಿಕ ಮೂಢನಂಬಿಕೆಗಳ ಕಾರಣದಿಂದ ಪುರುಷರಿಗೆ ಸರಿಸಮಾನ ಅಧಿಕಾರ, ಹಕ್ಕುಗಳನ್ನು ಮಹಿಳೆಯರಿಗೆ ನೀಡಿರಲಿಲ್ಲ. ಅಂತಹ ಸ್ಥಿತಿ ಈ ಆಧುನಿಕ ಜಗತ್ತಿನಲ್ಲಿ ಇಲ್ಲ. ಮಹಿಳೆಯು ಎಲ್ಲ ರಂಗಗಳಲ್ಲೂ ಮುಕ್ತವಾಗಿ ತೊಡಗಿಸಿಕೊಳ್ಳಲು ಸಾಕಷ್ಟು ಅವಕಾಶಗಳಿವೆ ಎಂದು ಹೇಳಿದರು.

ಶಿಕ್ಷಣ, ಉದ್ಯೋಗ, ರಾಜಕೀಯ, ಉದ್ಯಮ ಹೀಗೆ ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಕಾಣುತ್ತಿದ್ದೇವೆ. ಈ ರೀತಿಯ ಪಾಲ್ಗೊಳ್ಳುವಿಕೆ ಹೆಚ್ಚಿನ ಮಟ್ಟದಲ್ಲಿ ಆಗಬೇಕಿದ್ದು ಸರ್ಕಾರಗಳು ಯೋಜನೆಗಳನ್ನು ರೂಪಿಸಬೇಕಿದೆ ಎಂದರು.

ಸಂಪನ್ಮೂಲ ವ್ಯಕ್ತಿ ಡಿ. ಲಲಿತಮ್ಮ, ಆಧುನಿಕ ಸಮಾಜದಲ್ಲಿ ಮಹಿಳೆಯು ತನ್ನ ಬೆಳವಣಿಗೆಗೆ ಯಾವ ಕ್ರಮಗಳನ್ನು ಅನುಸರಿಸಬೇಕು ಎಂಬ ಕುರಿತು ಅರಿವು ನೀಡಿದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ನೌತಾಜ್‍ ಅಧ್ಯಕ್ಷತೆವಹಿಸಿದ್ದರು. ‌ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT