ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ: ಮಕ್ಕಳ ಕಲಿಕೆಗೆ ಅಂತರ್ಜಾಲ ನೆರವು

Last Updated 10 ನವೆಂಬರ್ 2020, 4:27 IST
ಅಕ್ಷರ ಗಾತ್ರ

ಬಾಗೇಪಲ್ಲಿ: ‘ಇಂದಿನ ಮಾಹಿತಿ ತಂತ್ರಜ್ಞಾನದ ಯುಗದಲ್ಲಿ ಮಕ್ಕಳ ಕಲಿಕೆಗೆ ಅಂತರ್ಜಾಲದ ಬಳಕೆ ಪೂರಕವಾಗಿದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಹಮದ್ ಖಲೀಲ್ ಅಭಿಪ್ರಾಯಪಟ್ಟರು.

ಪಟ್ಟಣದ ಸರ್ಕಾರಿ ಬಾಲಕಿಯರ ಶಾಲಾ ಆವರಣದಲ್ಲಿ ಸೋಮವಾರ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಗ್ರಾಮೀಣ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಕನ್ನಡ ಮಾಧ್ಯಮದಲ್ಲಿ ಅಂತರ್ಜಾಲ ಶಿಕ್ಷಣ ವ್ಯವಸ್ಥೆಯಡಿ ‘ಜ್ಞಾನ ತಾಣ’ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಾಹಿತಿ ತಂತ್ರಜ್ಞಾನ ದಿನೇ ದಿನೇ ಬೆಳೆಯುತ್ತಿದೆ. ಹಾಗಾಗಿ, ಮಕ್ಕಳ ಕಲಿಕೆಗೆ ಅಂತರ್ಜಾಲದ ಬಳಕೆಯೂ ಅನಿವಾರ್ಯವಾಗಿದೆ. ಉನ್ನತ ಶಿಕ್ಷಣ ಹಾಗೂ ಹುದ್ದೆಗಳು ಸಿಗಬೇಕಾದರೆ ಕಂಪ್ಯೂಟರ್ ಶಿಕ್ಷಣ ಗೊತ್ತಿರಬೇಕು. ದೇಶ, ವಿದೇಶದ ಕಂಪನಿಗಳಲ್ಲಿ ಕೆಲಸ ಮಾಡಲು ಅಂತರ್ಜಾಲ ಬಳಕೆಯ ಜ್ಞಾನ ಇರಬೇಕು ಎಂದು ಹೇಳಿದರು.

ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎ.ಜಿ. ಸುಧಾಕರ್ ಮಾತನಾಡಿ, ‘ಡಾ.ವೀರೇಂದ್ರ ಹೆಗ್ಗಡೆ ಅವರು ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಯೋಜನೆ ರೂಪಿಸಿದ್ದಾರೆ. ಗ್ರಾಮೀಣರ ಆರ್ಥಿಕ, ಸಾಮಾಜಿಕ, ಆರೋಗ್ಯ, ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತಿರುವುದು ಸಂತಸ ತಂದಿದೆ’ ಎಂದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಟ್ಯಾಬ್ ಮತ್ತು ಲ್ಯಾಪ್‌ಟಾಪ್ ವಿತರಿಸಲಾಯಿತು. ತಹಶೀಲ್ದಾರ್ ಎಂ. ನಾಗರಾಜು ಕಾರ್ಯಕ್ರಮ ಉದ್ಘಾಟಿಸಿದರು. ಹಿರಿಯ ವಕೀಲ ಬಿ.ಆರ್. ನರಸಿಂಹನಾಯ್ಡು, ಧರ್ಮದರ್ಶಿ ಕೆ.ಎಂ. ನಾಗರಾಜು, ಶ್ರೀಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲ್ಲೂಕು ಯೋಜನಾಧಿಕಾರಿ ಗಿರೀಶ್, ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಜಯರಾಂ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಆರ್. ಹನುಮಂತ ರೆಡ್ಡಿ, ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಫಕ್ರುದ್ದೀನ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT