ಬುಧವಾರ, ಜುಲೈ 6, 2022
21 °C

ಐಪಿಎಲ್ ಬೆಟ್ಟಿಂಗ್: ಒಬ್ಬನ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಂತಾಮಣಿ: ನಗರದ ಬಂಬೂಬಜಾರ್‌ ಮಟನ್ ಸ್ಟಾಲ್ ರಸ್ತೆಯಲ್ಲಿ ಡೆಲ್ಲಿ ಕ್ಯಾಪಿಟಲ್ ಮತ್ತು ಪಂಜಾಬಿ ಕಿಂಗ್ಸ್ ಇಲೆವನ್‌ ತಂಡದ ನಡುವಿನ ಐಪಿಎಲ್‌ ಕ್ರಿಕೆಟ್ ಆಟವನ್ನು ಮೊಬೈಲ್‌ನಲ್ಲಿ ವೀಕ್ಷಿಸಿ ಬೆಟ್ಟಿಂಗ್ ನಡೆಸುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. 

ಅಮ್ಜದ್ ಖಾನ್ ಬಂಧಿತ. ಬಬ್ಲೂ ಎಂಬಾತ ಪರಾರಿಯಾಗಿದ್ದು, ಈ ಇಬ್ಬರೂ ಶ್ರೀನಿವಾಸಪುರ ತಾಲ್ಲೂಕಿನ ಗೌನಿಪಲ್ಲಿ ಗ್ರಾಮದವರು. ಸ್ಥಳೀಯ ಮಾಂಸದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಪ್ರತಿದಿನ ಮೊಬೈಲ್ ಲಿಂಕ್ ಮೂಲಕ ಹಣ ಕಟ್ಟಿ ಬೆಟ್ಟಿಂಗ್‌ ದಂಧೆಯಲ್ಲಿ ತೊಡಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯಿಂದ ₹ 500 ನಗದು ಮತ್ತು ಮೊಬೈಲ್ ವಶಪಡಿಸಿಕೊಳ್ಳಲಾಗಿದೆ.

ಇನ್‌ಸ್ಪೆಕ್ಟರ್ ವೈ.ಆರ್. ರಂಗಶಾಮಯ್ಯ ನೇತೃತ್ವದಲ್ಲಿ ಸಿಬ್ಬಂದಿಯಾದ ಕೃಷ್ಣಪ್ಪ, ಸುರೇಶ್, ವೇಣು ತಂಡ ದಾಳಿ ನಡೆಸಿದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು