ಗೌರಿಬಿದನೂರು: ಸಂಸದ ಡಾ.ಕೆ.ಸುಧಾಕರ್ ಕಾಂಗ್ರೆಸ್ ಸೇರುತ್ತಾರೆ ಎನ್ನುವುದು ಊಹೆ. ಅವರು ಅಧಿಕಾರಕ್ಕಾಗಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದರು. ಈಗ ಅಧಿಕಾರ ಉಳಿಸಿಕೊಳ್ಳಲು ತಂತ್ರಗಾರಿಕೆ ಮಾಡುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾಸರಿ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು.

ತಾಲ್ಲೂಕಿನ ಹೊಸೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾರಣದಲ್ಲಿ ಹಲವು ಸಂದರ್ಭದಲ್ಲಿ ರಾಜಕೀಯ ವ್ಯಕ್ತಿಗಳು ಹಲವು ರೀತಿಯ ನಿರ್ಧಾರ ತೆಗೆದುಕೊಳ್ಳುತ್ತಾರೆ. ಬಿಜೆಪಿಯಲ್ಲಿ ಆಂತರಿಕ ಭಿನ್ನಾಭಿಪ್ರಾಯ ಹೆಚ್ಚಿದೆ. ಅದು ನಮ್ಮ ಜಿಲ್ಲೆಯಲ್ಲಿಯೂ ಇದೆ ಎಂದರು.

ಡಾ.ಕೆ.ಸುಧಾಕರ್ ಕಾಂಗ್ರೆಸ್ ಬಿಡುವ ವೇಳೆ ಪಕ್ಷ ಬಿಡುವುದು ಬೇಡ ಎಂದು ಸಿದ್ದರಾಮಯ್ಯ ಅವರು ಹೇಳಿದ್ದರು. ಅದನ್ನು ಈಗ ನೆನಪಿಸಿಕೊಂಡಿದ್ದಾರೆ. ಅದಕ್ಕೆ ಬೇರೆಯ ಅರ್ಥ ಕಲ್ಪಿಸುವುದು ಬೇಡ. ಅವರು ಸಂಸದರಾಗಿದ್ದಾರೆ. ಯಾವ ರಾಜಕಾರಣಿಯೂ ಅಧಿಕಾರ ಬಿಟ್ಟು ಬರುವ ಸನ್ನಿವೇಶ ಈಗ ಇಲ್ಲ. ಬಿಜೆಪಿಯ ಮೇಲೆ ಒತ್ತಡ ಹಾಕುವ ಕೆಲಸವಷ್ಟೇ ಎಂದು ಹೇಳಿದರು.

ಸರ್ಕಾರ ಉಳಿಯಬೇಕು ಎಂದು ಆಂಧ್ರಪ್ರದೇಶ ಮತ್ತು ಬಿಹಾರಕ್ಕೆ ಕೇಂದ್ರ ಸರ್ಕಾರ ಹೆಚ್ಚು ಆದ್ಯತೆ ನೀಡುತ್ತಿದೆ. ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ಪಾವತಿಸುತ್ತಿರುವ ಎರಡನೇ ರಾಜ್ಯ ಕರ್ನಾಟಕ. ನಮ್ಮ ತೆರಿಗೆ ಬೇಕು. ಆದರೆ ಅಭಿವೃದ್ಧಿ ಕೆಲಸಗಳನ್ನು ಮಾಡುವ ಇಚ್ಛೆ ಕೇಂದ್ರ ಸರ್ಕಾರಕ್ಕೆ ಇಲ್ಲ ಎಂದು ಹೇಳಿದರು.

ಜಲಜೀವನ್, ಪಿ.ಎಂ.ಕುಸುಮ್ ಸೇರಿದಂತೆ ಹಲವು ಯೋಜನೆಗಳಿಗೆ ರಾಜ್ಯ ಸರ್ಕಾರವು ಶೇ 50ರಷ್ಟು ಹಣ ನೀಡುತ್ತಿದೆ. ಆದರೆ ಹೆಸರು ಮಾತ್ರ ಬದಲಾವಣೆ ಮಾಡುವಂತಿಲ್ಲ. ಕಾರ್ಯಕ್ರಮವನ್ನು ಕೇಂದ್ರ ಸರ್ಕಾರ ರೂಪಿಸಿದರೆ ಅದಕ್ಕೆ ಹಣವನ್ನು ನೀಡುತ್ತಿರುವುದು ರಾಜ್ಯ ಸರ್ಕಾರ. ಆದರೆ ಕೇಂದ್ರ ಸರ್ಕಾರವು ಇವು ತನ್ನ ಯೋಜನೆಗಳು ಎಂದು ಬಿಂಬಿಸಿಕೊಳ್ಳುತ್ತಿದೆ ಎಂದು ಟೀಕಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.