ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾಲಪ್ಪ ಸೋದರಳಿಯ ಜಿ.ಎಚ್.ನಾಗರಾಜ್ ಮನೆ ಜಾಲಾಡುತ್ತಿರುವ ಐಟಿ ಅಧಿಕಾರಿಗಳು

Last Updated 11 ಅಕ್ಟೋಬರ್ 2019, 5:44 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ನಗರದ ಪ್ರಶಾಂತ್ ನಗರದಲ್ಲಿರುವ ಕೇಂದ್ರದ ಮಾಜಿ ಸಚಿವ ಆರ್.ಎಲ್.ಜಾಲಪ್ಪ ಅವರ ಸೋದರಳಿಯ ಜಿ.ಎಚ್. ನಾಗರಾಜ್ ಅವರ ಮನೆ ಮೇಲೆ ನಡೆದಿರುವ ಐಟಿ ಅಧಿಕಾರಿಗಳ ದಾಳಿ ಎರಡನೇ ದಿನವು ಮುಂದುವರಿದಿದೆ.

ಮೂರು ವಾಹನಗಳಲ್ಲಿ ಬಂದಿರುವ 9 ಮಂದಿ ಐಟಿ ಅಧಿಕಾರಿಗಳ ತಂಡ ಗುರುವಾರ ಬೆಳಿಗ್ಗೆಯಿಂದ ಮನೆಯಲ್ಲಿ ತಪಾಸಣೆ ಕಾರ್ಯ ನಡೆಸುತ್ತಿದೆ.

ಈ ಪೈಕಿ ಆರು ಅಧಿಕಾರಿಗಳು ತಡರಾತ್ರಿ ನಾಗರಾಜ್ ಅವರ ಮನೆಯಿಂದ ತೆರಳಿ ಬೆಳಿಗ್ಗೆ ವಾಪಾಸಾದರು. ನಾಗರಾಜ್ ಅವರ ಮನೆಗೆ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.

ಶುಕ್ರವಾರ ಬೆಳಿಗ್ಗೆ ಮನೆಯ ಆವರಣದಲ್ಲಿ ಕಾಣಿಸಿಕೊಂಡ ನಾಗರಾಜ್ ಅವರು ಮನೆಯ ಕಾಂಪೌಂಡ್ ಆಚೆ ನೆರೆದಿದ್ದ ಸುದ್ದಿಗಾರರನ್ನು ಉದ್ದೇಶಿಸಿ, ‘ನಮ್ಮ ಎಲ್ಲಾ ವ್ಯವಹಾರ ಪಾರದರ್ಶಕವಾಗಿದೆ. ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತಿದ್ದೇವೆ’ ಎಂದು ಚುಟುಕಾಗಿ ಉತ್ತರಿಸಿದರು.

ಆರ್.ಎಲ್. ಜಾಲಪ್ಪ ಆಸ್ಪತ್ರೆಯ ಕಾರ್ಯದರ್ಶಿಯೂ ಆಗಿರುವ ನಾಗರಾಜ್ ಅವರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್‌ನಪ್ರಬಲ ಆಕಾಂಕ್ಷಿಗಳಲ್ಲಿ ಒಬ್ಬರಾಗಿದ್ದಾರೆ. ಹೀಗಾಗಿಯೇ ರಾಜಕೀಯ ಪ್ರೇರಿತವಾಗಿ ಈ ದಾಳಿ ನಡೆಸಲಾಗಿದೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT