ಸೋಮವಾರ, ಅಕ್ಟೋಬರ್ 21, 2019
23 °C

ಜಾಲಪ್ಪ ಸೋದರಳಿಯ ಜಿ.ಎಚ್.ನಾಗರಾಜ್ ಮನೆ ಜಾಲಾಡುತ್ತಿರುವ ಐಟಿ ಅಧಿಕಾರಿಗಳು

Published:
Updated:

ಚಿಕ್ಕಬಳ್ಳಾಪುರ: ನಗರದ ಪ್ರಶಾಂತ್ ನಗರದಲ್ಲಿರುವ ಕೇಂದ್ರದ ಮಾಜಿ ಸಚಿವ ಆರ್.ಎಲ್.ಜಾಲಪ್ಪ ಅವರ ಸೋದರಳಿಯ ಜಿ.ಎಚ್. ನಾಗರಾಜ್ ಅವರ ಮನೆ ಮೇಲೆ ಗುರುವಾರ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಮನೆಯಲ್ಲಿ ತಪಾಸಣೆ ಕಾರ್ಯ ನಡೆಸುವ ಜತೆಗೆ ನಾಗರಾಜ್ ಅವರ ವಿಚಾರಣೆಯನ್ನೂ ಮಾಡುತ್ತಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಮುಖಂಡರಾಗಿರುವ ನಾಗರಾಜ್ ಅವರು ಆರ್.ಎಲ್.ಜಾಲಪ್ಪ ಆಸ್ಪತ್ರೆಯ ಕಾರ್ಯದರ್ಶಿಯೂ ಆಗಿದ್ದಾರೆ.

ಐಟಿ ಅಧಿಕಾರಿಗಳು ನಾಗರಾಜ್ ಅವರ ಹಣಕಾಸು ವ್ಯವಹಾರ, ಆದಾಯ, ತೆರಿಗೆ ಪಾವತಿಗೆ ಸಂಬಂಧಿಸಿದ ದಾಖಲೆಪತ್ರಗಳನ್ನು ಕಲೆ ಹಾಕುತ್ತಿದ್ದಾರೆ. ನಾಗರಾಜ್ ಕುಟುಂಬದವರು ತನಿಖೆಗೆ ಸಹಕಾರ ನೀಡದ ಕಾರಣ ಐಟಿ ಅಧಿಕಾರಿಗಳು ನಗರದ ಕೀ ರಿಪೇರಿ ಮಾಡುವ ವ್ಯಕ್ತಿಯೊಬ್ಬನನ್ನು ಮನೆಗೆ ಕರೆಯಿಸಿಕೊಂಡರು ಎಂದು ತಿಳಿದುಬಂದಿದೆ.

ಇನ್ನಷ್ಟು... 

ಆರ್.ಎಲ್.ಜಾಲಪ್ಪ ಒಡೆತನದ ಶಿಕ್ಷಣ ಸಂಸ್ಥೆ, ಆಸ್ಪತ್ರೆ ಮೇಲೆ ಐಟಿ ದಾಳಿ
ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್‌ಗೂ ಐಟಿ ಶಾಕ್ 
ಜಾಲಪ್ಪ ಪುತ್ರನ ಮನೆಯಲ್ಲಿ ಐಟಿ ಅಧಿಕಾರಿಗಳಿಂದ ದಾಖಲೆ ಪರಿಶೀಲನೆ
 

 

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

Post Comments (+)