ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸವಾಲು ಎದುರಿಸಲು ಪರಿಶ್ರಮ ಅಗತ್ಯ

Last Updated 9 ಅಕ್ಟೋಬರ್ 2019, 15:54 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ಇವತ್ತಿನ ಸ್ಪರ್ಧಾತ್ಮಕ ಯುಗದಲ್ಲಿ ಏನಾದರೂ ಸಾಧನೆ ಮಾಡಬೇಕಾದರೆ ಶ್ರಮಪಟ್ಟು ಓದಲೇಬೇಕು. ವಿದ್ಯಾರ್ಥಿಗಳು ಶಾಲಾ, ಕಾಲೇಜು ಹಂತದಲ್ಲಿಯೇ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಕೌಶಲ ಬೆಳೆಸಿಕೊಳ್ಳಬೇಕು’ ಎಂದುಎಂದು ಪಂಚಗಿರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಚ್.ವಿ. ಸುಬ್ರಹ್ಮಣ್ಯ ತಿಳಿಸಿದರು.

ನಗರದ ಪೂರ್ಣಪ್ರಜ್ಞ ವಿದ್ಯಾಸಂಸ್ಥೆಯಲ್ಲಿ ಬುಧವಾರ ಆಯೋಜಿಸಿದ್ದ ವಿವಿಧ ತರಗತಿಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ವಿದ್ಯಾರ್ಥಿ ದೆಸೆಯಲ್ಲಿ ಮೆದುಳಿಗೆ ಅಪಾರವಾದ ಸ್ಮರಣ ಶಕ್ತಿ ಸಂಗ್ರಹಿಸುವ ಸಾಮರ್ಥ್ಯವಿರುತ್ತದೆ. ಶಾಲಾ, ಕಾಲೇಜು ಹಂತದಲ್ಲಿಯೇ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ವಿದ್ಯಾರ್ಥಿಗಳು ಒಲವು ಬೆಳೆಸಿಕೊಳ್ಳುವುದರಿಂದ ಪರೀಕ್ಷೆಗಳನ್ನು ಸುಲಭವಾಗಿ ಎದುರಿಸಲು ಮತ್ತು ಉನ್ನತ ಸಾಧನೆ ಮಾಡಲು ಸಾಧ್ಯವಾಗುತ್ತದೆ’ ಎಂದು ಹೇಳಿದರು.

ಶಾಲಾ ಆಡಳಿತ ಮಂಡಳಿ ಅಧ್ಯಕ್ಷೆ ಶೈಲಜಾ, ಪ್ರಾಂಶುಪಾಲೆ ವಿಜಯಲಕ್ಷ್ಮಿ, ಮುಖ್ಯ ಶಿಕ್ಷಕ ಶ್ರೀನಾಥ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT