ಭಾನುವಾರ, 4 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಂತಾಮಣಿ: ಜೈನ್ ವಿ.ವಿ ವಿರುದ್ಧ ಕ್ರಮಕ್ಕೆ ಒತ್ತಾಯ

ಚಿಂತಾಮಣಿಯಲ್ಲಿ ದಲಿತ ಸಂಘಟನೆಗಳ ಪ್ರತಿಭಟನೆ
Last Updated 17 ಫೆಬ್ರವರಿ 2023, 5:04 IST
ಅಕ್ಷರ ಗಾತ್ರ

ಚಿಂತಾಮಣಿ: ‘ದಲಿತ ಮಹಿಳೆ ಮತ್ತು ಸಂವಿಧಾನಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಬಗ್ಗೆ ಉದ್ದೇಶ ಪೂರ್ವಕವಾಗಿ ವ್ಯಂಗ್ಯ ಮಾಡಿದ ಜೈನ್ ವಿವಿಯ ಅನುಮತಿಯನ್ನು ಹಿಂಪಡೆಯಬೇಕು’ ಎಂದು ಒತ್ತಾಯಿಸಿ ನಗರದಲ್ಲಿ ಗುರುವಾರ ದಲಿತ ಸಂಘಟನೆಗಳ ಐಕ್ಯತಾ ಚಾಲನಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು.

‘ಬೆಂಗಳೂರಿನ ಜಯನಗರದ 9ನೇ ಬ್ಲಾಕ್ ನಲ್ಲಿರುವ ಜೈನ್ ವಿಶ್ವ ವಿದ್ಯಾಲಯದ ಆಡಳಿತ ಮಂಡಳಿ, ಶಿಕ್ಷಕರ ವೃಂದ ಆಯೋಜನೆ ಮಾಡಿದ ನಾಟಕದಲ್ಲಿ ದಲಿತ ಮಹಿಳೆ ಜಾತಿ ಹಾಗೂ ಸಂವಿಧಾನ ಶಿಲ್ಪಿ ಬಿ.ಆರ್. ಅಂಬೇಡ್ಕರ್ ಬಗ್ಗೆ ಅವಹೇಳನ ಮಾಡಿರುವುದು ಖಂಡನೀಯ. ಅಂಬೇಡ್ಕರ್ ಅವರನ್ನು ಇಡೀ ವಿಶ್ವವೇ ಜ್ಞಾನದ ಸಂಕೇತ ಎಂದು ಪರಿಗಣಿಸಿದೆ. ಇಂತಹ ಘನತೆಯುಳ್ಳ ವ್ಯಕ್ತಿ ಬಗ್ಗೆ ಜೈನ್ ವಿವಿ ವಿದ್ಯಾರ್ಥಿಗಳು ನಾಟಕದಲ್ಲಿ ಅಪಮಾನಿಸಿದ್ದಾರೆ. ಇದಕ್ಕೆ ಆಡಳಿತ ಮಂಡಳಿ, ಉಪನ್ಯಾಸಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಚಪ್ಪಾಳೆ ತಟ್ಟಿ ನಕ್ಕಿರುವುದು ಶೋಚನೀಯ. ಇದು ಪೂರ್ವ ನಿಯೋಜಿತ ಕೃತ್ಯ’ ಎಂದು ಮುಖಂಡ ಕವಾಲಿ ವೆಂಕಟರವಣಪ್ಪ ತಿಳಿಸಿದರು.

‘ಸಂಘ ಪರಿವಾರದ ಒಬ್ಬ ಚಡ್ಡಿ ಪುಡಾರಿ ಗಾಂಧಿಯನ್ನು ಗೂಡ್ಸೆ ಗುಂಡಿಕ್ಕಿ ಕೊಂದಂತೆ, ನಾನೂ ಅಂಬೇಡ್ಕರ್ ಅವರನ್ನು ಗುಂಡಿಕ್ಕಿ ಕೊಲ್ಲುತ್ತಿದ್ದೆ ಎಂದಿರುವವನ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗದಿರಲು ಕಾರಣವೇನು ಎಂದು ಪ್ರಶ್ನಿಸಿದರು.

ಜೈನ್ ವಿಶ್ವ ವಿದ್ಯಾಲಯದ ಅನುಮತಿ ಹಿಂಪಡೆಯುವಂತೆ ಒತ್ತಾಯಿಸಿ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ದಲಿತ ಸಂಘಟನೆಗಳ ಐಕ್ಯತಾ ಚಾಲನಾ ಸಮಿತಿ ಪದಾಧಿಕಾರಿಗಳು ನಗರದ ಪ್ರವಾಸಿ ಮಂದಿರದಿಂದ ಆರಂಭವಾದ ಪ್ರತಿಭಟನಾ ಜಾಥಾ ಪ್ರಮುಖ ಬೀದಿಗಳಲ್ಲಿ ಸಾಗಿತು.

ಜೈನ್ ವಿಶ್ವ ವಿದ್ಯಾಲಯ ಹಾಗೂ ಸರ್ಕಾರದ ವಿರುದ್ಧ ದಿಕ್ಕಾರ ಕೂಗಲಾಯಿತು.

ದಲಿತ ಮುಖಂಡರಾದ ಕವಾಲಿ ವೆಂಕಟರವಣಪ್ಪ, ಜಿ. ನಾರಾಯಣಸ್ವಾಮಿ, ದೇವಮ್ಮ, ಲಕ್ಷ್ಮಿನಾರಾಯಣ, ರಾಮಕೃಷ್ಣ, ಎಂ. ಆನಂದ, ಶ್ರೀರಂಗಪ್ಪ ಸೇರಿದಂತೆ ನೂರಾರು ಜನರು ಭಾಗಿಯಾಗಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT