ಗೌರಿಬಿದನೂರು/ಮಂಚೇನಹಳ್ಳಿ: ಗೌಬಿದನೂರು ತಾಲ್ಲೂಕಿನ 296 ಗ್ರಾಮಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ₹102 ಕೋಟಿ ಅನುದಾನದಲ್ಲಿ ಜಲಜೀವನ್ ಮಿಷನ್ ಜಾರಿಯಾಗಿದೆ. ಹಳ್ಳಿಗಳಿಗೆ ನೀರು ನೀಡುವುದು ನಮ್ಮ ಆದ್ಯತೆ ಎಂದು ಸಂಸದ ಡಾ.ಕೆ.ಸುಧಾಕರ್ ಹೇಳಿದರು.

ತಾಲ್ಲೂಕಿನ ನಕ್ಕಲಹಳ್ಳಿಯಲ್ಲಿ ₹87 ಲಕ್ಷ ವೆಚ್ಚದಲ್ಲಿ ನಡೆಯುತ್ತಿರುವ ಜಲಜೀವನ್ ಮಿಷನ್ ಕಾಮಗಾರಿಯನ್ನು ಮಂಗಳವಾರ ವೀಕ್ಷಿಸಿದರು. ಇದೇ ವೇಳೆ ನಕ್ಕಲಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯಾಲಯದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೌರಿಬಿದನೂರಿನಲ್ಲಿ ಪ್ರತಿ ಹಳ್ಳಿಗಳಿಗೆ ಜಲಜೀವನ್ ಮಿಷನ್ನಿಂದ ನೀರು ಸಿಗಲಿದೆ. ಮನೆಗಳಿಗೆ ಕೊಳಾಯಿ ನೀರು ಸಿಗುವುದರಿಂದ ಬಡಜನರ ಸಂಕಷ್ಟ ತಪ್ಪಲಿದೆ. ತಾಲ್ಲೂಕಿನ ಅಮೃತ್ ಯೋಜನೆಗೆ ₹66 ಕೋಟಿ ಮೊತ್ತದ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿದೆ. ಕುಡಿಯುವ ನೀರಿನ ಯೋಜನೆಗಳಿಗೆ ಹೆಚ್ಚು ಆದ್ಯತೆ ನೀಡಲಾಗಿದೆ ಎಂದು ಹೇಳಿದರು.

ಗೌರಿಬಿದನೂರು–ಹಿಂದೂಪುರ ರಸ್ತೆಯಲ್ಲಿರುವ ರೈಲ್ವೆ ಲೆವೆಲ್ ಕ್ರಾಸಿಂಗ್ ಬಳಿ ಕೇಂದ್ರ ಸರ್ಕಾರದ ‘ಸೇತು ಬಂಧನ್’ ಯೋಜನೆಯಡಿ ಕೈಗೆತ್ತಿಕೊಂಡಿರುವ ರೈಲ್ವೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ಪರಿಶೀಲಿಸಿದರು.

ರೈಲ್ವೆ ಮೇಲ್ಸೇತುವೆಗೆ ₹100 ಕೋಟಿ ಅಂದಾಜು ವೆಚ್ಚ ಎಂದು ಪ್ರಸ್ತಾವದಲ್ಲಿ ಹೇಳಲಾಗಿದೆ. ಈ ಕಾಮಗಾರಿ ನಡೆದರೆ ಗೌರಿಬಿದನೂರಿನ ಜನರಿಗೆ ಬಹಳ ಪ್ರಯೋಜನವಾಗಲಿದೆ. ಇದನ್ನು ಜಾರಿ ಮಾಡುವ ಸಂಪೂರ್ಣ ಜವಾಬ್ದಾರಿ ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದರು.

ಗೌರಿಬಿದನೂರಿನ ಕೇಂದ್ರೀಯ ವಿದ್ಯಾಲಯ ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ₹25 ಕೋಟಿ ಮಂಜೂರು ಮಾಡಿದ್ದು ಈ ಕಾಮಗಾರಿ ಪರಿಶೀಲಿಸಿದರು.

ಮಂಚೇನಹಳ್ಳಿ ತಾಲ್ಲೂಕು ಜರಬಂಡಹಳ್ಳಿ ಪಂಚಾಯಿತಿ ವ್ಯಾಪ್ತಿಯ ಗೊಲ್ಲಹಳ್ಳಿ ಗ್ರಾಮದ ಬಳಿ ಅತಿವೃಷ್ಟಿಯಿಂದ ಹಾನಿಗೊಳಗಾಗಿರುವ ಕೃಷಿ ಜಮೀನುಗಳಿಗೆ ಭೇಟಿ ನೀಡಿ ರಾಗಿ ಬೆಳೆ ಹಾನಿ ಪರಿಶೀಲಿಸಿದರು.

ನೆರೆಯಿಂದಾಗಿ ರೈತರು ಅಪಾರ ನಷ್ಟ ಅನುಭವಿಸಿದ್ದಾರೆ. ಸ್ಥಳೀಯ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರು ಸರ್ಕಾರವನ್ನು ಒತ್ತಾಯಿಸಿ ಈ ಕೂಡಲೇ ಬೆಳೆ ಹಾನಿ ಸಮೀಕ್ಷೆ ನಡೆಸಿ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಅತಿಯಾದ ಮಳೆಯಿಂದಾಗಿ ರಾಗಿ ಬೆಳೆಗೆ ಹಾನಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ರಾಗಿಗೆ ಬೆಂಬಲ ಬೆಲೆ ನೀಡಿದ್ದಾರೆ. ಇದು ಕರ್ನಾಟಕಕ್ಕೆ ಹೆಚ್ಚು ಅನುಕೂಲವಾಗಿದೆ. ಒಂದು ಎಕರೆಗೆ ₹400 ವಿಮೆಯನ್ನು ರೈತರು ಕಟ್ಟುತ್ತಾರೆ. ಈ ಬಗ್ಗೆ ಕೃಷಿ ಇಲಾಖೆಯ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಅಧಿಕಾರಿಗಳು ನೀಡುವ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿ ಆದಷ್ಟು ಬೇಗ ವಿಮೆ ಪರಿಹಾರ ಕೊಡಿಸುತ್ತೇನೆ ಎಂದರು.

ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ, ಮುಖಂಡರಾದ ರವಿನಾರಾಯಣರೆಡ್ಡಿ, ಶಶಿಧರ್ ಮತ್ತಿತರರು ಈ ವೇಳೆ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.