ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಂಚೇನಹಳ್ಳಿ; ಜನತಾ ದರ್ಶನದಲ್ಲಿ 55 ಅರ್ಜಿ ಸ್ವೀಕಾರ

Published 6 ಜುಲೈ 2024, 14:26 IST
Last Updated 6 ಜುಲೈ 2024, 14:26 IST
ಅಕ್ಷರ ಗಾತ್ರ

ಮಂಚೇನಹಳ್ಳಿ: ಮಂಚೇನಹಳ್ಳಿ ತಾಲ್ಲೂಕಿಗೆ ಸಂಬಂಧಿಸಿದಂತೆ ಶನಿವಾರ ಮಂಚೇನಹಳ್ಳಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಜನತಾ ದರ್ಶನದಲ್ಲಿ ಒಟ್ಟು 55 ಅರ್ಜಿಗಳು ಸ್ವೀಕಾರವಾದವು.

ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರ ನೇತೃತ್ವದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ, ಜಿಲ್ಲಾಡಳಿತ ಮತ್ತು ತಾಲ್ಲೂಕು ಆಡಳಿತ ಅಧಿಕಾರಿಗಳು  ಸಾರ್ವಜನಿಕರ ಅಹವಾಲು, ದೂರುಗಳನ್ನು ಆಲಿಸಿದರು. ಕೆಲವು ಸಮಸ್ಯೆಗಳಿಗೆ  ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸಿದರು.

ಸಾರ್ವಜನಿಕರು ಅಹವಾಲು ಅರ್ಜಿಗಳನ್ನು ಅಧಿಕಾರಿಗಳಿಗೆ ನೀಡಿ ಪರಿಹಾರಕ್ಕಾಗಿ ಮನವಿ ಸಲ್ಲಿಸಿದರು. ಕಂದಾಯ ಇಲಾಖೆಯಡಿ 45 ಅರ್ಜಿಗಳು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದ 4, ಸಮಾಜ ಕಲ್ಯಾಣ ಇಲಾಖೆ 3, ಒಳಾಡಳಿತ ಇಲಾಖೆಯ 1, ಕರ್ನಾಟಕ ಕೈಗಾರಿಕ ಅಭಿವೃದ್ಧಿ ಮಂಡಳಿಗೆ ಸಂಬಂಧಿಸಿದ 1 ಅರ್ಜಿ, ಕೆ.ಎಸ್.ಆರ್.ಟಿ.ಸಿ ಗೆ ಸಂಬಂಧಿಸಿದ 1 ಅರ್ಜಿ ಸ್ವೀಕಾರವಾಯಿತು. 

ಜನತಾ ದರ್ಶನದಲ್ಲಿ ಸ್ವೀಕಾರವಾದ 55  ಅರ್ಜಿಗಳನ್ನು ಇತ್ಯರ್ಥಪಡಿಸಲು ಸಂಬಂಧಪಟ್ಟ ಇಲಾಖೆಗಳಿಗೆ ವರ್ಗಾಯಿಸಲಾಯಿತು. 

ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರಕಾಶ್ ಜಿ.ಟಿ. ನಿಟ್ಟಾಲಿ ಅರ್ಜಿಗಳನ್ನು ಪರಿಶೀಲಿಸಿದರು. 

ಬಾಬು ಜಗಜೀವನರಾಂ ಅವರ 38 ನೇ ಪುಣ್ಯಸ್ಮರಣೆಯ ಅಂಗವಾಗಿ ಜನತಾ ದರ್ಶನದ ಸಭೆಯಲ್ಲಿ ಬಾಬೂಜಿ ಅವರ ಭಾವಚಿತ್ರಕ್ಕೆ ಅಧಿಕಾರಿಗಳು ಪುಷ್ಪ ನಮನ ಸಲ್ಲಿಸಿದರು.

ಉಪವಿಭಾಗಾಧಿಕಾರಿ ಡಿ.ಎಚ್.ಅಶ್ವಿನ್, ತಹಶೀಲ್ದಾರ್ ವೆಂಕಟೇಶ್, ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT