ಚಿಂತಾಮಣಿ: ರಾಜ್ಯದಲ್ಲಿ ಜೆಡಿಎಸ್ ಸಂಘಟನೆ ಮಾಡಲು ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ರಾಜ್ಯದಾದ್ಯಂತ ಸಂಚರಿಸುತ್ತಿದ್ದು ಚಿಂತಾಮಣಿಗೆ ಜುಲೈ 11ರಂದು ಆಗಮಿಸಲಿದ್ದಾರೆ ಎಂದು ಮಾಜಿ ಶಾಸಕ ಎಂ.ಕೃಷ್ಣಾರೆಡ್ಡಿ ತಿಳಿಸಿದರು.

ನಗರದ ಜೆಡಿಎಸ್ ಕಾರ್ಯಾಲಯ ಜೆ.ಕೆ.ಭವನದಲ್ಲಿ ಶನಿವಾರ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

ಜೆಡಿಎಸ್ ಪರಿಣಾಮಕಾರಿಯಾಗಿ ಸಂಘಟನೆ ಮಾಡಿ ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ತರಲು ಅವರು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಂಚರಿಸಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಹುರಿದುಂಬಿಸುತ್ತಿದ್ದಾರೆ. ನಗರದ ಹೊರವಲಯದ ಮದನಪಲ್ಲಿ ರಸ್ತೆಯಲ್ಲಿರುವ ಜೆ.ಕೆ.ಭವನದಲ್ಲಿ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಕಾರ್ಯಕರ್ತರ ಸಮಾವೇಶ ನಡೆಯಲಿದೆ ಎಂದು ತಿಳಿಸಿದರು.

ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಬೈರೆಡ್ಡಿ, ನಗರಸಭೆ ಸದಸ್ಯ ಮುರಳಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಗುಡೇ ಶ್ರೀನಿವಾಸರೆಡ್ಡಿ ಸೇರಿದಂತೆ ಕ್ಷೇತ್ರದ ಸ್ಥಳೀಯ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.