ಚಿಕ್ಕಬಳ್ಳಾಪುರ: ನಾಯಕರನ್ನು ಸೃಷ್ಟಿಸುವ ಶಕ್ತಿ ಇದ್ದರೆ ಅದು ಜೆಡಿಎಸ್ ಕಾರ್ಯಕರ್ತರಿಗೆ ಮಾತ್ರ. ಇದನ್ನು 20 ವರ್ಷಗಳಿಂದ ಸಾಬೀತು ಮಾಡಿದ್ದೀರಿ. ಪಕ್ಷ ತೊರೆದವರ ಬಗ್ಗೆ ಚಿಂತೆ ಬೇಡ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

ನಗರದಲ್ಲಿ ಬುಧವಾರ ನಡೆದ ‘ಜನರೊಂದಿಗೆ ಜನತಾದಳ’ ಕಾರ್ಯಕ್ರಮದಲ್ಲಿ ಮಾತನಾಡಿದರು.

2028ರ ವಿಧಾನಸಭೆ ಚುನಾವಣೆಯಲ್ಲಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ನಾವು ಗೆಲ್ಲಬೇಕು ಎಂದು ಹೇಳಿದರು.

ಹಳ್ಳಿಗಳಿಗೆ ತೆರಳಿ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳು, ಹಗರಣಗಳ ಬಗ್ಗೆ ತಿಳಿಸಬೇಕು. ಸಂಘಟನೆ ಸುಲಭದ ಮಾತಲ್ಲ. ಬದ್ಧತೆ ಮತ್ತು ಸಾಮಾಜಿಕ ಕಾಳಜಿ ಬೇಕು. ಕಾರ್ಯಕರ್ತರು ಯಾವುದೇ ಕಾರಣಕ್ಕೂ ಧೃತಿಗೆಡಬಾರದು ಎಂದು ಕಿವಿಮಾತು ಹೇಳಿದರು.

ಪಕ್ಷ ಸಂಘಟನೆಗೆ ನಿಖಿಲ್ ಕುಮಾರಸ್ವಾಮಿ ಬಂದಾಗ ಎರಡು ಮೂರು ಗಂಟೆ ಅಬ್ಬರಿಸಿ ಆ ಮೇಲೆ ಮಲಗುವುದಲ್ಲ. ದಿನಕ್ಕೆ ಮೂರರಿಂದ ನಾಲ್ಕು ಗಂಟೆ ಪಕ್ಷಕ್ಕೆ ಕೆಲಸ ಮಾಡಬೇಕು. ಪ್ರತಿ ಪಂಚಾಯಿತಿಗೆ ಮುಖಂಡರು, ಕಾರ್ಯಕರ್ತರು ತೆರಳಬೇಕು. ಒಬ್ಬರು 30ರಿಂದ 35 ಜನರಿಗೆ ಮಿಸ್ಕಾಲ್ ಕೊಡಿಸಿ ಸದಸ್ಯರನ್ನಾಗಿ ಮಾಡಬೇಕು ಎಂದು ಹೇಳಿದರು.

ರಾಜ್ಯ ಸರ್ಕಾರದಲ್ಲಿ ದುರಾಡಳಿತ, ಭ್ರಷ್ಟಾಚಾರ ಹೆಚ್ಚಿದೆ. ಆ ಪಕ್ಷದ ಶಾಸಕರೇ ಈ ಬಗ್ಗೆ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ಶಾಸಕರಿಗೆಯೇ ₹10 ಅನುದಾನ ಸಹ ದೊರೆಯುತ್ತಿಲ್ಲ ಎಂದರು.

ಚಿಕ್ಕಬಳ್ಳಾಪುರವನ್ನು ಜಿಲ್ಲಾ ಕೇಂದ್ರವಾಗಿ ಘೋಷಿಸಿದ್ದು ಎಚ್.ಡಿ.ಕುಮಾರಸ್ವಾಮಿ. ಅವರಿಗೆ ಚಿಕ್ಕಬಳ್ಳಾಪುರದ ಮೇಲೆ ವಿಶೇಷ ಪ್ರೀತಿ, ಅಭಿಮಾನ ಇದೆ. ಲೋಕಸಭೆ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ನಮ್ಮ ಪಕ್ಷದ ಕಾರ್ಯಕರ್ತರು ಪ್ರಾಮಾಣಿಕವಾಗಿ ಎನ್ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸಿದ್ದೀರಿ. ಆ ಮೂಲಕ ಪಕ್ಷದ ಗೌರವ ಎತ್ತಿ ಹಿಡಿದಿದ್ದಿರಿ ಎಂದು ಪ್ರಶಂಸಿಸಿದರು.

ಜೆಡಿಎಸ್ ಕಾರ್ಯಕರ್ತರು, ವರಿಷ್ಠರು ಇಲ್ಲದಿದ್ದರೆ ನಾನು ಸಂಸದನಾಗಿ ಆಯ್ಕೆಯಾಗಲು ಆಗುತ್ತಿರಲಿಲ್ಲ ಎಂದು ಡಾ.ಕೆ.ಸುಧಾಕರ್ ನನ್ನ ಬಳಿ ಹೇಳಿದ್ದಾರೆ. ಅವರನ್ನು ಸಂಸದರನ್ನಾಗಿಸುವಲ್ಲಿ ಜೆಡಿಎಸ್ ಕಾರ್ಯಕರ್ತರ ಶ್ರಮ ಅಪಾರ ಎಂದು ನಿಖಿಲ್ ತಿಳಿಸಿದರು.

ಸುಧಾಕರ್ ಸಹ ಈ ವಿಚಾರವನ್ನು ಸ್ಮರಿಸುತ್ತಾರೆ. 2019ರ ಲೋಕಸಭೆ ಚುನಾವಣೆಯ ವೇಳೆ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಆಗಿತ್ತು. ಆಗ ಕಾಂಗ್ರೆಸ್ ಮಂಡ್ಯ ಮತ್ತು ತುಮಕೂರಿನಲ್ಲಿ ನಮ್ಮ ಬೆನ್ನಿಗೆ ಚೂರಿ ಹಾಕಿತು ಎಂದು ಟೀಕಿಸಿದರು.

ಶಾಸಕ ಎ.ಮಂಜು, ಬಿ.ಎನ್.ರವಿಕುಮಾರ್, ವಿಧಾನ ಪರಿಷತ್ ಮಾಜಿ ಸದಸ್ಯ ತೂಪಲ್ಲಿ ಚೌಡರೆಡ್ಡಿ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮುನಿಯಪ್ಪ, ಕಾರ್ಯಾಧ್ಯಕ್ಷ ಕೆ.ಆರ್.ರೆಡ್ಡಿ, ಪ್ರಭಾ ನಾರಾಯಣ ಗೌಡ, ರೋಷನ್ ಅಬ್ಬಾಸ್, ಸಾದಿಕ್ ಪಾಷ, ಅನ್ವರ್, ಮೇಲೂರು ಅಮರ್, ಕೊಳವನಹಳ್ಳಿ ಮುನಿರಾಜು, ಅರುಣಾ ಶ್ರೀನಿವಾಸ್, ಕಿಸಾನ್ ಕೃಷ್ಣಪ್ಪ, ಯಲುವಳ್ಳಿ ಸೊಣ್ಣೇಗೌಡ ಮತ್ತಿತರರು ಪಾಲ್ಗೊಂಡಿದ್ದರು.

‘ನಮ್ಮ ಕಾರ್ಯಕರ್ತರ ಶ್ರಮ ಸ್ಮರಿಸುವ ಸುಧಾಕರ್’

ಜೆಡಿಎಸ್ ಕಾರ್ಯಕರ್ತರು ವರಿಷ್ಠರು ಇಲ್ಲದಿದ್ದರೆ ನಾನು ಸಂಸದನಾಗಿ ಆಯ್ಕೆಯಾಗಲು ಆಗುತ್ತಿರಲಿಲ್ಲ ಎಂದು ಡಾ.ಕೆ.ಸುಧಾಕರ್ ನನ್ನ ಬಳಿ ಹೇಳಿದ್ದಾರೆ. ಅವರನ್ನು ಸಂಸದರನ್ನಾಗಿಸುವಲ್ಲಿ ಜೆಡಿಎಸ್ ಕಾರ್ಯಕರ್ತರ ಶ್ರಮ ಅಪಾರ ಎಂದು ನಿಖಿಲ್ ತಿಳಿಸಿದರು. ಸುಧಾಕರ್ ಸಹ ಈ ವಿಚಾರವನ್ನು ಸ್ಮರಿಸುತ್ತಾರೆ. 2019ರ ಲೋಕಸಭೆ ಚುನಾವಣೆಯ ವೇಳೆ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಆಗಿತ್ತು. ಆಗ ಕಾಂಗ್ರೆಸ್ ಮಂಡ್ಯ ಮತ್ತು ತುಮಕೂರಿನಲ್ಲಿ ನಮ್ಮ ಬೆನ್ನಿಗೆ ಚೂರಿ ಹಾಕಿತು ಎಂದು ಟೀಕಿಸಿದರು.

ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ನಾಯಕತ್ವ ಶೀಘ್ರ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಜೆಡಿಎಸ್ ಪ್ರೀತಿಸುವ ದೊಡ್ಡ ವರ್ಗವಿದೆ. 2004ರಿಂದ ಇಲ್ಲಿಯವರೆಗಿನ ಚುನಾವಣೆಗಳನ್ನು ನೋಡುವುದಾದರೆ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷಕ್ಕೆ 50 ಸಾವಿರ ಮತಗಳ ಇಡಗಂಟು ಇದೆ. ಇಲ್ಲಿನ ಒಂದು ಕೊರತೆ ಅಂದರೆ ನಿಮ್ಮ ಜೊತೆ ಒಬ್ಬ ಸಮರ್ಥ ದಂಡನಾಯಕ ಇಲ್ಲ. ಶೀಘ್ರದಲ್ಲಿಯೇ ಇಲ್ಲಿಗೆ ಪಕ್ಷದಿಂದ ಒಬ್ಬ ನಾಯಕನನ್ನು ನೀಡಲಾಗುವುದು ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.

ದೇಶಕ್ಕೆ ಮೋದಿ ರಾಜ್ಯಕ್ಕೆ ಕುಮಾರಣ್ಣ

‘ದೇಶಕ್ಕೆ ನರೇಂದ್ರ ಮೋದಿ ರಾಜ್ಯಕ್ಕೆ ಕುಮಾರಣ್ಣ ಅವರ ನಾಯಕತ್ವ ಎನ್ನುವ ಚರ್ಚೆ ನಾನು ಭೇಟಿ ನೀಡಿದ ಕಡೆಗಳಲ್ಲೆಲ್ಲ ಕೇಳಿ ಬರುತ್ತಿದೆ. ಇದು ಜೆಡಿಎಸ್ ಕಾರ್ಯಕರ್ತರ ಭಾವನೆಯಲ್ಲ. ರಾಜ್ಯದ ಎಲ್ಲ ಭಾಗಗಳಲ್ಲಿನ ಜನರ ಭಾವನೆ’ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ಜೆಡಿಎಸ್ ಹಳೆ ಮೈಸೂರು ಪ್ರಾಂತ್ಯಕ್ಕೆ ಸೀಮಿತವಾದ ಪಕ್ಷವಲ್ಲ. ನಮ್ಮ ಪಕ್ಷದ ಶಾಸಕರಲ್ಲಿ ಶೇ 40ರಿಂದ 50ರಷ್ಟು ಮಂದಿ ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕದ ಭಾಗಗಳಿಂದ ಆಯ್ಕೆ ಆಗುತ್ತಾರೆ. ಈ ಭಾಗಗಳಿಗೆ ನಾನು ನಿರಂತವಾಗಿ ಭೇಟಿ ನೀಡುತ್ತೇನೆ ಎಂದು ಹೇಳಿದರು. ಈ ಪ್ರವಾಸದಿಂದ ನಿಖಿಲ್ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷರಾಗಲು ವೇದಿಕೆ ಸಿದ್ಧವಾಗುತ್ತಿದೆ ಎನ್ನುವ ಮಾತುಗಳು ಕೇಳುತ್ತಿವೆ. ಆದರೆ ನನಗೆ ಆ ಆಸೆ ಇಲ್ಲ. ಎಲ್ಲಕ್ಕಿಂತ ಮುಖ್ಯವಾಗಿ ಪಕ್ಷ ಸಂಘಟನೆ ಆಗಬೇಕು. ಯಾವುದೇ ಕಾರಣಕ್ಕೂ ಜೆಡಿಎಸ್ ಅನ್ನು ಸುಲಭವಾಗಿ ತೆಗೆದುಹಾಕಲು ಸಾಧ್ಯವಿಲ್ಲ ಎಂದು ಗುಡುಗಿದರು. ಪಕ್ಷದಿಂದ ಹೆಚ್ಚು ಶಾಸಕರು ಆಯ್ಕೆಯಾಗುತ್ತಿಲ್ಲ. ವಿಧಾನಸಭೆ ಚುನಾವಣೆ ಐದಾರು ತಿಂಗಳು ಇದೆ ಎನ್ನುವಾಗ ಎಚ್.ಡಿ. ಕುಮಾರಸ್ವಾಮಿ ಅವರು ನಾಲ್ಕು ಟ್ರಿಪ್ ಮಾಡಿದರೆ ಮತ ಹಾಕುತ್ತಾರೆ ಎನ್ನುವ ಭಾವನೆ ಇದೆ. ಆದರೆ ಆ ರೀತಿ ಆಗುವುದಿಲ್ಲ. ವಿಧಾನಸಭೆ ಚುನಾವಣೆಗೆ ಕೇವಲ 1 ಸಾವಿರ ದಿನಗಳ ಮಾತ್ರ ಬಾಕಿ ಇವೆ. ಈಗಲೇ ಪಕ್ಷ ಸಂಘಟನೆ ಮಾಡಬೇಕು ಎಂದರು. ಬಿಜೆಪಿ ಜೆಡಿಎಸ್ ಮೈತ್ರಿ ಶಾಶ್ವತವಾಗಿ ಮುಂದುವರಿಯುತ್ತದೆ. ಇದರಲ್ಲಿ ಯಾರಿಗೂ ಅನುಮಾನವೇ ಬೇಡ ಎಂದು ಹೇಳಿದರು.

ಜೆಡಿಎಸ್ ಸದಸ್ಯತ್ವ ಅಭಿಯಾನ

ಗೌರಿಬಿದನೂರು: ‘ನಮಗೆ ಚುನಾವಣೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ, ಪಕ್ಷವನ್ನು ಕಟ್ಟಿ ಬೆಳೆಸಿ ಜನರೊಂದಿಗೆ ಇರುವುದು ಮುಖ್ಯ’ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

ನಗರದ ನದಿದಡ ಆಂಜನೇಯ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಬುಧವಾರ ಜೆಡಿಎಸ್ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

‘ತಾಲ್ಲೂಕಿನ ಜನರು ಜೆಡಿಎಸ್ ಮೇಲೆ ಹೆಚ್ಚಿನ ಅಭಿಮಾನ ಇಟ್ಟಿದ್ದಾರೆ. ಜನರೊಂದಿಗೆ ಜನತಾದಳ ಕಾರ್ಯಕ್ರಮದ ಹೆಸರಿನಲ್ಲಿ ಪ್ರವಾಸ ಕೈಗೊಂಡಿದ್ದೇವೆ. ಮುಂಬರುವ ತಾ.ಪಂ ಮತ್ತು ಜಿ.ಪಂ ಚುನಾವಣೆಗಳಲ್ಲಿ ಪಕ್ಷದಿಂದ ಅತಿ ಹೆಚ್ಚು ಸ್ಥಾನಗಳನ್ನು ಪಡೆಯಲು ಎಲ್ಲರೂ ಬೆಂಬಲಿಸಬೇಕು’ ಎಂದರು.

‘ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದ ನಂತರ ಸರ್ಕಾರ ನಡೆಸಲು ಅನುದಾನವಿಲ್ಲದೆ ಹಲವು ಸಮಸ್ಯೆ ಎದುರಿಸುತ್ತಿದೆ. ಹಲವು ಮಂತ್ರಿಗಳು ಅಕ್ರಮದಲ್ಲಿ ತೊಡಗಿದ್ದಾರೆ. ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ ಎಂದು ಕಾಂಗ್ರೆಸ್ ಶಾಸಕರೇ ತಿಳಿಸುತ್ತಿದ್ದಾರೆ’ ಎಂದರು.

‘ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ರೈತರ ಸ್ವಾಭಿಮಾನದ ಬದುಕಿಗೆ ಸೌಲಭ್ಯಗಳನ್ನು ಒದಗಿಸುವಲ್ಲಿ ಸರ್ಕಾರ ವಿಫಲವಾಗಿದೆ. ಕೃಷಿ ಚುಟುವಟಿಕೆಗಳಿಗೆ ಎಚ್.ಎನ್ ವ್ಯಾಲಿ ಮತ್ತು ಕೆ.ಸಿ ವ್ಯಾಲಿಯ ಕೊಳಚೆ ನೀರನ್ನು ಶುದ್ಧೀಕರಿಸಿ ಹರಿಸಲಾಗುವುದು ಎಂದು ತಿಳಿಸುತ್ತಿದ್ದಾರೆ. ರಾಜ್ಯದ ಜನರಿಗೆ ಜೆಡಿಎಸ್ ಸಾಲ ಮನ್ನಾದಂತಹ ಶಾಶ್ವತ ಯೋಜನೆ ನೀಡಿದೆ. ರೈತರ ವಿಚಾರಗಳನ್ನು ಪಕ್ಷ ಗಂಭೀರವಾಗಿ ತೆಗೆದುಕೊಳ್ಳುತ್ತದೆ’ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಸಿ.ಆರ್.ನರಸಿಂಹಮೂರ್ತಿ ಮಾತನಾಡಿ, ‘ರಾಜ್ಯದಲ್ಲಿ ರೈತರು ಉಳಿಯಬೇಕೆಂದರೆ ಜನರು ಜೆಡಿಎಸ್ ಬೆಂಬಲಿಸಬೇಕು. ಜೆಡಿಎಸ್ ಅಧಿಕಾರದಲ್ಲಿದ್ದಾಗ ಲಾಟರಿ ನಿಷೇಧ, ರೈತರ ಸಾಲ ಮನ್ನಾದಂತಹ ಯೋಜನೆಗಳನ್ನು ಜಾರಿ ಮಾಡಿ ರೈತರ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಿದ್ದರು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ಯಾರಂಟಿ ಜಾರಿಗೆ ತಂದಿದ್ದಾರೆ. ಗಂಡಸರಿಂದ ಹಣ ಪಡೆದು ಹೆಂಗಸರಿಗೆ ನೀಡುತ್ತಿದ್ದಾರೆ. ಆದರೆ ಅವು ಸಹ ಜನರಿಗೆ ಸರಿಯಾಗಿ ತಲುಪುತ್ತಿಲ್ಲ. ಕಾಂಗ್ರೆಸ್ ಕೇವಲ ಆಮಿಷಗಳನ್ನು ತೋರಿಸಿ ಚುನಾವಣೆ ಗೆಲ್ಲುತ್ತಿದ್ದಾರೆ’ ಎಂದರು.

‘ತಾಲ್ಲೂಕಿನ ಕುಡುಮಲಕುಂಟೆ ಕೈಗಾರಿಕಾ ಪ್ರದೇಶವಾಗಿ ಘೋಷಣೆಯಾಗಿದೆ. ಆದರೆ ಇಲ್ಲಿ ಸ್ಥಳೀಯರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸಲು ಕೈಗಾರಿಕಾ ಸಚಿವ ಕುಮಾರಸ್ವಾಮಿ ಮೂಲಕ ಕ್ರಮಕೈಗೊಳ್ಳಬೇಕು’ ಎಂದು ಮನವಿ ಮಾಡಿದರು.

ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಸಿ.ಮಂಜುನಾಥರೆಡ್ಡಿ ಮಾತನಾಡಿ, ‘ಜಿಲ್ಲೆಯಲ್ಲಿ ಹೆಚ್ಚು ಪ್ರಾಬಲ್ಯ ಹೊಂದಿರುವ ಪಕ್ಷ ಜೆಡಿಎಸ್ ಆಗಿದೆ. ಕ್ಷೇತ್ರದಲ್ಲಿ ನಾವು ಗೆಲ್ಲಬೇಕಾದರೆ ಮೊದಲಿಗೆ ಬಿಜೆಪಿ ಮತ್ತು ಜೆಡಿಎಸ್ ನಡುವೆ ಸಮನ್ವಯ ಸಭೆ ಮಾಡಿ ಜತೆಯಲ್ಲಿ ಹೋದಾಗ ಈ ಕ್ಷೇತ್ರ ಎನ್ಡಿಎ ಪಾಲಾಗುತ್ತದೆ’ ಎಂದು ಹೇಳಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ತೂಪಲ್ಲಿ ಚೌಡರೆಡ್ಡಿ, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ರೋಶನ್ ಅಬ್ಬಾಸ್, ಯುವ ಜನತಾದಳ ರಾಜ್ಯ ಉಪಾಧ್ಯಕ್ಷ ರವೀಂದ್ರ ರೆಡ್ಡಿ, ಜಿಲ್ಲಾ ಜೆಡಿಎಸ್ ಪಕ್ಷದ ಅಧ್ಯಕ್ಷ ಮುಕ್ತ ಮುನಿಯಪ್ಪ, ತಾಲ್ಲೂಕು ಜೆಡಿಎಸ್ ಘಟಕದ ಕಾರ್ಯಾಧ್ಯಕ್ಷ ನಟರಾಜ್, ಉಪಾಧ್ಯಕ್ಷ ಶ್ರೀನಿವಾಸರೆಡ್ಡಿ, ಜೆಡಿಎಸ್ ಕಾರ್ಯಕರ್ತರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.