ಬಾಗೇಪಲ್ಲಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರನ್ನು ನಿಂದಿಸಿದ ಆರೋಪದ ಮೇಲೆ ಜೆಡಿಎಸ್ ಯುವ ಬ್ರಿಗ್ರೇಡ್ ರಾಜ್ಯ ಸಂಘಟನಾ ಕಾರ್ಯದರ್ಶಿ ಮುದ್ದಲಪಲ್ಲಿ ಎಂ.ಎನ್.ರಾಜಾರೆಡ್ಡಿಯನ್ನು ಬಾಗೇಪಲ್ಲಿ ಪೊಲೀಸರು ಬಂಧಿಸಿದ್ದಾರೆ.

ಸುಬ್ಬಾರೆಡ್ಡಿ ವಿರುದ್ಧ ಮುದ್ದಲಪಲ್ಲಿಎಂ.ಎನ್.ರಾಜಾರೆಡ್ಡಿ, ಕಡೇಹಳ್ಳಿ ಆನಂದ್ ಹಾಗೂ ನಾರೇಪಲ್ಲಿ ಶ್ರೀನಿವಾಸ್ ಅವಾಚ್ಯ ಶಬ್ದಗಳನ್ನು ಬಳಸಿರುವ ವಿಡಿಯೊಗಳು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು.

ಈ ಸಂಬಂಧ ಶಾಸಕರ ಆಪ್ತಸಹಾಯ ಬಾಗೇಪಲ್ಲಿ ಠಾಣೆಗೆ ದೂರು ನೀಡಿದ್ದರು. ಪ್ರಕರಣ ಸಂಬಂಧ ಬಾಗೇಪಲ್ಲಿ ಸಿವಿಲ್ ನ್ಯಾಯಾಲಯದಿಂದ ಮೂರು ಬಾರಿ ಜಾಮೀನು ರಹಿತ ವಾರೆಂಟ್ ಜಾರಿ ಆಗಿತ್ತು. ಆದರೂ ಅವರು ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಆದ್ದರಿಂದ ಪೊಲೀಸರು ರಾಜಾರೆಡ್ಡಿಯನ್ನು ಬಂಧಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.