ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಯಿಂದ ಪ್ರಜಾಪ್ರಭುತ್ವಕ್ಕೆ ಧಕ್ಕೆ: ಜೀತೂ ಪಟವಾರಿ ಆಕ್ರೋಶ

ಮಧ್ಯಪ್ರದೇಶ ಶಿಕ್ಷಣ ಸಚಿವ
Last Updated 12 ಮಾರ್ಚ್ 2020, 22:18 IST
ಅಕ್ಷರ ಗಾತ್ರ

ಬೆಂಗಳೂರು: ‘ನಮ್ಮ ಪಕ್ಷದ (ಕಾಂಗ್ರೆಸ್‌) ಶಾಸಕರನ್ನು ಬಿಜೆಪಿಯವರು ಇಲ್ಲಿಗೆ ಕರೆದುಕೊಂಡು ಬಂದು ರೆಸಾರ್ಟ್‌ನಲ್ಲಿ ಕೂಡಿ ಹಾಕಿದ್ದಾರೆ. ನಾವು ಅವರನ್ನು ಭೇಟಿ ಮಾಡುವ ಪ್ರಯತ್ನ ಮಾಡಿದೆವು. ಆದರೆ, ಅದಕ್ಕೆ ಅವಕಾಶ ನೀಡಲಿಲ್ಲ’ ಎಂದು ಮಧ್ಯಪ್ರದೇಶದ ಶಿಕ್ಷಣ ಸಚಿವ ಜೀತೂ ಪಟವಾರಿ ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್‌ ರಾಜ್ಯ ಘಟಕದ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರದಲ್ಲಿರುವ ನಿವಾಸದಲ್ಲಿ ಗುರುವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಜೀತೂ, ‘ಬಿಜೆಪಿಯವರು ಪ್ರಜಾಪ್ರಭುತ್ವದಲ್ಲಿ ಅರಾಜಕತೆಗೆ ಅವಕಾಶ ಮಾಡಿಕೊಟ್ಟಿದ್ದಾರೆ. ನಾನು ಶಿಕ್ಷಣ ಸಚಿವನಾಗಿದ್ದರೂ ಬಂಧಿಸುವ ಪ್ರಯತ್ನ ಮಾಡಿದ್ದಾರೆ. ಪೊಲೀಸರು ನಮ್ಮ‌ ಮೇಲೆ ಹಲ್ಲೆ ನಡೆಸಿದ್ದಾರೆ. ಇದು ಕಾನೂ‌ನುಬಾಹಿರ ಚಟುವಟಿಕೆ. ಮಗನನ್ನು ಭೇಟಿ ಮಾಡಲು ತಂದೆಗೆ ಅವಕಾಶ ಇಲ್ಲದಂತಾಗಿದೆ’ ಎಂದೂ ಕಿಡಿಕಾರಿದರು.

‘ಕಾಂಗ್ರೆಸ್ ಸಿದ್ಧಾಂತದ ಮೇಲೆ ನಾವು ಅಧಿಕಾರಕ್ಕೆ ಬಂದವರು. ಮಧ್ಯಪ್ರದೇಶದಲ್ಲಿ ಮತದಾರರು ನಮ್ಮನ್ನು ಆರಿಸಿ ವಿಧಾನಸಭೆಗೆ ಕಳುಹಿಸಿದ್ದಾರೆ. ಜನಪರ ಸರ್ಕಾರ ಕೆಡವಲು ಯತ್ನಿಸಿರುವ ಬಿಜೆಪಿ ನಾಯಕರು ಪ್ರಜಾಪ್ರಭುತ್ವವನ್ನೇ ಹಾಳು ಮಾಡುತ್ತಿದ್ದಾರೆ’ ಎಂದು ಕಿಡಿಕಾರಿದರು.

ರೆಸಾರ್ಟ್‌ನಲ್ಲಿರುವ ಶಾಸಕ ಮನೋಜ್ ಚೌಧರಿ ಅವರ ತಂದೆ ನಾರಾಯಣ ಚೌಧರಿ ಮಾತನಾಡಿ, ‘ನನ್ನ ಮಗನನ್ನು ಬಿಜೆಪಿಯವರು ಬಲವಂತವಾಗಿ ಇಲ್ಲಿಗೆ ಕರೆದುಕೊಂಡು ಬಂದು ರೆಸಾರ್ಟ್‌ನಲ್ಲಿ‌ ಕೂಡಿ ಹಾಕಿದ್ದಾರೆ. ಆದರೆ, ಮಗನ ಭೇಟಿಗೆ ಪೊಲೀಸರು ಅವಕಾಶ ನೀಡುತ್ತಿಲ್ಲ. ಇದು ಯಾವ ನ್ಯಾಯ’ ಎಂದು ಪ್ರಶ್ನಿಸಿದರು.

ಡಿ.ಕೆ. ಶಿವಕುಮಾರ್ ಮಾತನಾಡಿ, ‘ಬಿಜೆಪಿಯವರು ರೆಸಾರ್ಟ್‌ನಲ್ಲಿ ಕೂಡಿಹಾಕಿರುವ ತಮ್ಮ ಪಕ್ಷದ ಶಾಸಕರನ್ನು ಭೇಟಿ ಮಾಡಲು ಪಟವಾರಿಬಂದಿದ್ದಾರೆ. ಆದರೆ, ಅದಕ್ಕೆ ಪೊಲೀಸರುಅನುಮತಿ ನೀಡಿಲ್ಲ. ನಾನು ನನ್ನ ಎಲ್ಲ ಪ್ರಯತ್ನ ಮಾಡುತ್ತೇನೆ. ಬಿಜೆಪಿಯವರು ಏನೇನು ಮಾಡಿಕೊಂಡಿದ್ದಾರೆ ಎಂಬುದೂ ನನಗೆ ಗೊತ್ತಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT