ಚಿಂತಾಮಣಿ: ನಗರದ ಝಾನ್ಸಿರಾಣಿ ಕ್ರೀಡಾಂಗಣದಲ್ಲಿ ಎಂಸಿಎಸ್ ಅಭಿಮಾನಿ ಬಳಗದಿಂದ ಶನಿವಾರ ಹಮ್ಮಿಕೊಳ್ಳಲಾಗಿದ್ದ ಹಿರಿಯ ನಾಗರಿಕರ ಕ್ರೀಡಾಕೂಟಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ. ಸುಧಾಕರ್ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಝಾನ್ಸಿರಾಣಿ ಕ್ರೀಡಾಂಗಣದ ಅಭಿವೃದ್ಧಿಗಾಗಿ ₹9 ಕೋಟಿ ವಿಶೇಷ ಅನುದಾನ ಮಂಜೂರಾಗಿದ್ದು, ಆಡಳಿತಾತ್ಮಕ ಅನುಮೋದನೆ ದೊರೆತಿದೆ ಎಂದರು.

ಕ್ರೀಡಾಂಗಣದ ಅಭಿವೃದ್ಧಿಗಾಗಿ ಯೋಜನೆ ರೂಪಿಸಲಾಗಿದ್ದು, ಹಂತ ಹಂತವಾಗಿ ವಿವಿಧ ಅಭಿವೃದ್ಧಿ ಕಾಮಗಾರಿ ಅನುಷ್ಠಾನಗೊಳಿಸಲಾಗುವುದು. ಉನ್ನತ ಶಿಕ್ಷಣ ಇಲಾಖೆಯಿಂದ ₹9 ಕೋಟಿ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಆರಂಭವಾಗಿದೆ. 2-3 ತಿಂಗಳಿನಲ್ಲಿ ಕಾಮಗಾರಿ ಆರಂಭವಾಗಲಿದೆ. ಸಿಂಥೆಟಿಕ್ ಟ್ರ್ಯಾಕ್, ಫುಟ್ಬಾಲ್ ಕ್ರೀಡಾಂಗಣ ನಿರ್ಮಿಸಲಾಗುವುದು ಎಂದರು.

ಕ್ರೀಡಾಂಗಣದ ಸಮಿತಿ ನಿಧಿಯಿಂದ ₹30 ಲಕ್ಷ ವೆಚ್ಚದಲ್ಲಿ ಶಿಥಿಲಗೊಂಡ ಕ್ರೀಡಾಂಗಣದ ಪೆವಿಲಿಯನ್ ಮೇಲ್ಚಾವಣಿ ಮತ್ತು ವಿದ್ಯುತ್ ಅಲಂಕಾರ ಅಭಿವೃದ್ಧಿಪಡಿಸಲಾಗುವುದು. ಕ್ರೀಡಾಂಗಣದ ಸುತ್ತಲೂ ಅಂಗಡಿ ನಿರ್ಮಿಸಲಾಗಿದೆ. ಇಡೀ ರಾಜ್ಯದಲ್ಲಿ ಸ್ವಂತ ಸಂಪನ್ಮೂಲ ಹೊಂದಿರುವ ಏಕೈಕ ಕ್ರೀಡಾಂಗಣವಾಗಿದೆ ಎಂದರು ತಿಳಿಸಿದರು.

ನಗರದ ಲೋಕೋಪಯೋಗಿ ಇಲಾಖೆ ಕಚೇರಿ ಮುಂಭಾಗದಲ್ಲಿ ಕ್ರಿಕೆಟ್ ಕ್ರೀಡಾಂಗಣಕ್ಕಾಗಿ 9 ಎಕರೆ ಜಾಗ ಮಂಜೂರು ಮಾಡಿಸಿ ಯುವಜನಸೇವಾ ಇಲಾಖೆಗೆ ನೀಡಲಾಗಿದೆ. ಅದರ ಅಭಿವೃದ್ಧಿಗಾಗಿ ₹7 ಕೋಟಿ ಅನುದಾನ ಮಂಜೂರು ಮಾಡಿಸಿದ್ದೇನೆ. ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ. ನ್ಯಾಚುರಲ್ ಟರ್ಫ್ ಕ್ರಿಕೆಟ್ ಕ್ರೀಡಾಂಗಣ ಮಾಡಲಾಗುವುದು ಎಂದು ಭರವಸೆ ನೀಡಿದರು.

ರಾಜ್ಯದ ಪ್ರಥಮ ಮೂರು ಸರ್ಕಾರಿ ಪಾಲಿಟೆಕ್ನಿಕ್ಗಳಲ್ಲಿ ಒಂದಾದ ನಗರದ ಸರ್ಕಾರಿ ಪಾಲಿಟೆಕ್ನಿಕ್ಗೆ 76 ವರ್ಷವಾಗಿದೆ. ಅದರ ಅಭಿವೃದ್ಧಿಗಾಗಿ ₹76 ಕೋಟಿ ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಾಗಿದೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಕಾಲೇಜು, ಸರ್ಕಾರಿ ಮಹಿಳಾ ಕಾಲೇಜುಗಳ ಕಟ್ಟಡಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ರಾಮಕುಂಟೆ ಪ್ರದೇಶದಲ್ಲಿ ಕ್ರೀಡಾ ಚಟುವಟಿಕೆಗಳಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಹೇಳಿದರು.

ನಗರಸಭೆ ಅಧ್ಯಕ್ಷ ಆರ್. ಜಗನ್ನಾಥ್, ಹಿರಿಯ ನಾಗರಿಕ ಸಂಘದ ಪದಾಧಿಕಾರಿಗಳು, ಅಮರ್, ನಾರಾಯಣಸ್ವಾಮಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.