ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ಯೋಗ ಮೇಳ, 73 ಜನ ಆಯ್ಕೆ

Last Updated 28 ಡಿಸೆಂಬರ್ 2019, 9:57 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ನಗರದ ವಾಪಸಂದ್ರದಲ್ಲಿರುವ ಜಚನಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸಹಯೋಗದಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿತ್ತು.

ಮೇಳದಲ್ಲಿ 10 ಕಂಪನಿಗಳು ಭಾಗವಹಿಸಿದ್ದವು. ಮೇಳದಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ (ಸ್ನಾತಕೋತ್ತರ ಮತ್ತು ಬಿಇ ಪದವಿ ಹೊರತುಪಡಿಸಿ) ಉತ್ತೀರ್ಣರಾದ ಮತ್ತು ಟೈಲರಿಂಗ್ ಅನುಭವವುಳ್ಳ 203 ಜನರು ಭಾಗವಹಿಸಿದ್ದರು. ಈ ಪೈಕಿ 58 ಪುರುಷರು ಮತ್ತು 15 ಮಹಿಳೆಯರು ಸೇರಿ ಒಟ್ಟು 73 ಜನರು ಉದ್ಯೋಗ ಗಿಟ್ಟಿಸಿಕೊಂಡರು.

ಕಾಲೇಜಿನ ಆಡಳಿತಾಧಿಕಾರಿ ಶಿವಜ್ಯೋತಿ, ಉದ್ಯೋಗಾಧಿಕಾರಿ ಎಂ.ಪ್ರಸಾದ್, ಕಾಲೇಜಿನ ಪ್ರಾಂಶುಪಾಲ ಶ್ರೀನಿವಾಸ್ ಮೇಳದಲ್ಲಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT