ಶಿಡ್ಲಘಟ್ಟ: ತಮ್ಮ ಊರು, ಗ್ರಾಮಗಳಲ್ಲಿನ ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯ ಒದಗಿಸಲು ಹಿರಿಯ ವಿದ್ಯಾರ್ಥಿಗಳು, ಆರ್ಥಿಕವಾಗಿ ಸಶಕ್ತವಾಗಿರುವವರು, ಜನಪ್ರತಿನಿಧಿಗಳು ಮುಂದಾಗಬೇಕೆಂದು ಜೆಎಂಎಫ್ಸಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಮೊಹಮ್ಮದ್ ರೋಷನ್ ಷಾ ಗ್ರಾಮಸ್ಥರಲ್ಲಿ ಮನವಿ ಮಾಡಿದರು.

ತಾಲ್ಲೂಕಿನ ವೈ.ಹುಣಸೇನಹಳ್ಳಿಯ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ಶಾಲೆಯ ಗೋಡೆ, ಚಾವಣಿ ಹಾಗೂ ನೆಲಹಾಸು ಹಾಳಾಗಿರುವುದರೊಂದಿಗೆ ಸುಣ್ಣ ಬಣ್ಣ ಕಳೆದುಕೊಂಡ ಗೋಡೆಗಳು ಶಾಲೆಯ ವಾತಾವರಣವನ್ನೇ ಕೆಡಸಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದರು.

ಶಾಲೆಯ ಎಸ್ಡಿಎಂಸಿ ಅಧ್ಯಕ್ಷರು, ಸದಸ್ಯರು, ಪೋಷಕರಲ್ಲದೆ ಸ್ಥಳದಲ್ಲಿದ್ದ ಗ್ರಾಮಸ್ಥರೊಂದಿಗೆ ಶಾಲೆಯ ಸ್ಥಿತಿಗತಿ ಬಗ್ಗೆ ಚರ್ಚಿಸಿದರು.

ಶಾಲೆಗೆ ಮೂಲಸೌಕರ್ಯಗಳನ್ನು ಕಲ್ಪಿಸಿ ಅಭಿವೃದ್ಧಿಪಡಿಸಿ ಕಲಿಕೆಗೆ ಪೂರಕ ವಾತಾವರಣ ನಿರ್ಮಿಸುವುದು ಸರ್ಕಾರದ ಜವಾಬ್ದಾರಿ. ಹಾಗಂತ ಎಲ್ಲದಕ್ಕೂ ಸರ್ಕಾರದ ಮೇಲೆ ಅವಲಂಬನೆ ಸರಿಯಲ್ಲ. ನಾವು ಏನಾದರೂ ಮಾಡಬಹುದಲ್ಲಾ ಎಂದು ಪ್ರಶ್ನಿಸಿದರು.

ಈ ಶಾಲೆಯಲ್ಲಿ ಓದಿದ ಅನೇಕರು ಸಮಾಜದಲ್ಲಿ ಉನ್ನತ ಸ್ಥಾನ ಮಾನದಲ್ಲಿರುತ್ತೀರಿ. ಸರ್ಕಾರಿ ನೌಕರಿ, ಸ್ವಯಂ ಉದ್ಯೋಗ, ಉದ್ದಿಮೆದಾರರಾಗಿರಬಹುದು ಅಥವಾ ರಾಜಕಾರಣಿ, ಸಮಾಜ ಸೇವಕರೂ ಆಗಿರಬಹುದು. ಎಲ್ಲರೂ ಕೈಜೋಡಿಸಿದರೆ ಈ ಶಾಲೆಗೆ ಹೊಸರೂಪ ನೀಡಬಹುದಲ್ಲವೇ ಎಂದರು.

ಸ್ಥಳದಲ್ಲಿದ್ದ ಕೆಲ ಮುಖಂಡರು, ಶಾಸಕರ ಗಮನಕ್ಕೆ ತಂದು ಸರಿಪಡಿಸುತ್ತೇವೆ ಎಂದರು. ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು ಬೇಡ ಎಲ್ಲ ಭಾರವನ್ನೂ ಶಾಸಕರ ಮೇಲೆ ಹಾಕುವುದು ಬೇಡ. ಅವರು ಸರ್ಕಾರದಿಂದ ಬರುವ ಸವಲತ್ತುಗಳನ್ನು ಒದಗಿಸಿಕೊಡುತ್ತಾರೆ. ಸ್ಥಳೀಯರು ಒಬ್ಬೊಬ್ಬರು ಒಂದೊಂದು ಜವಾಬ್ದಾರಿ ತೆಗೆದುಕೊಳ್ಳಿ. ಕೈಲಾದಷ್ಟು ನೆರವು ನೀಡಿ ಎಂದರು.

ನ್ಯಾಯಾಧೀಶರ ಮಾತಿಗೆ ಓಗೂಟ್ಟ ಗ್ರಾಮಸ್ಥರು, ಎರಡು ತಿಂಗಳು ಸಮಯ ಕೊಡಿ. ಶಾಲೆಗೆ ಸುಣ್ಣ ಬಣ್ಣ ಬಳಿದು ನೆಲ ಹಾಸು ಸರಿಪಡಿಸುವಂತ ಕಾರ್ಯವನ್ನು ಮಾಡುತ್ತೇವೆಂದು ಭರವಸೆ ನೀಡಿದರು.

ವಕೀಲರ ಸಂಘದ ಅಧ್ಯಕ್ಷ ಎ.ನಾರಾಯಣಸ್ವಾಮಿ, ಬೂಸಾ ನಾರಾಯಣಸ್ವಾಮಿ, ಕದಿರಿನಾಯಕನಹಳ್ಳಿ ರವಿಕುಮಾರ್, ಬಸವನಪರ್ತಿ ವೆಂಕಟೇಶ್, ಬೇಕರಿ ಗೌಡ, ಎಸ್.ಡಿ.ಎಂ.ಸಿ ಅಧ್ಯಕ್ಷೆ ಚೈತ್ರ, ಬಿಆರ್ಪಿ ಮಂಜುನಾಥ್, ಶಿಕ್ಷಕಿ ಹಂಸವೇಣಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.