ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಚುನಾವಣೆ | ಜೆ.ಪಿ.ನಡ್ಡಾ ಭೇಟಿಯಾದ ಕೆ.ಸುಧಾಕರ್

Published 30 ಜನವರಿ 2024, 15:57 IST
Last Updated 30 ಜನವರಿ 2024, 15:57 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಮಾಜಿ ಸಚಿವ ಡಾ.ಕೆ.ಸುಧಾಕರ್ ಮಂಗಳವಾರ ನವದೆಹಲಿಯಲ್ಲಿ ಭೇಟಿ ಮಾಡಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ನ ಪ್ರಬಲ ಆಕಾಂಕ್ಷಿ ಆಗಿರುವ ಡಾ.ಕೆ.ಸುಧಾಕರ್ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿ ಮಾಡಿರುವ ಚಿತ್ರಗಳು ಬಿಜೆಪಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ. ಈ ಬಗ್ಗೆ ಚರ್ಚೆ ಸಹ ನಡೆದಿದೆ. 

ಇತ್ತೀಚೆಗೆ ಡಾ.ಕೆ.ಸುಧಾಕರ್, ಪಕ್ಷದ ಬಿ.ಎಲ್.ಸಂತೋಷ್ ಅವರನ್ನು ಸಹ ಭೇಟಿ ಮಾಡಿದ್ದರು. ಬಿಜೆಪಿ ಟಿಕೆಟ್‌ನ ಪ್ರಮುಖ ಆಕಾಂಕ್ಷಿ ಆಗಿರುವ ಡಾ.ಕೆ.ಸುಧಾಕರ್ ಈಗಾಗಲೇ ಪಕ್ಷದ ರಾಷ್ಟ್ರ ಮತ್ತು ರಾಜ್ಯ ಮುಖಂಡರನ್ನು ಭೇಟಿ ಮಾಡುತ್ತಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಪ್ರಬಲ ನಾಯಕರಾಗಿರುವ ಅವರಿಗೆ ಟಿಕೆಟ್ ನೀಡಬೇಕು ಎನ್ನುವ ಒತ್ತಾಯವೂ ಕಮಲ ಪಾಳಯದಲ್ಲಿ ಜೋರಾಗಿದೆ.

ಈ ಕುರಿತು ‘ಎಕ್ಸ್‌’ ಮಾಡಿರುವ ಡಾ.ಕೆ.ಸುಧಾಕರ್, ‘ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ದಾ ಅವರನ್ನು ಭೇಟಿಯಾಗಿ ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಲಾಯಿತು. ಅಧ್ಯಕ್ಷರಾಗಿ ನಾಲ್ಕು ವರ್ಷ ಪೂರೈಸಿರುವ ಅವರು ದೇಶದ ಉದ್ದಗಲಕ್ಕೂ ಬಿಜೆಪಿ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಪಕ್ಷವನ್ನು ಅತ್ಯಂತ ಯಶಸ್ವಿಯಾಗಿ ಮುನ್ನಡೆಸಿದ್ದಾರೆ.

ನಮ್ಮೆಲ್ಲರ ನೆಚ್ಚಿನ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು, ಕರ್ನಾಟಕದದಿಂದ ಮತ್ತಷ್ಟು ಬಲ ತುಂಬುವ ನಿಟ್ಟಿನಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ರಾಜ್ಯದ ಎಲ್ಲಾ 28 ಸ್ಥಾನಗಳಲ್ಲಿ ಜಯ ಸಾಧಿಸಲು ರೂಪಿಸಬೇಕಾದ ಕಾರ್ಯತಂತ್ರ, ಜೆಡಿಎಸ್ ಜೊತೆಗಿನ ಹೊಂದಾಣಿಕೆ, ಸೇರಿದಂತೆ ಹಲವು ವಿಷಯಗಳ ಬಗ್ಗೆ ನಡ್ಡಾ ಅವರು ಸಲಹೆ, ಸೂಚನೆ, ಮಾರ್ಗದರ್ಶನ ನೀಡಿದರು ಎಂದು ಹೇಳಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT