ಗುರುವಾರ , ಫೆಬ್ರವರಿ 20, 2020
24 °C

ಆತ್ಮಾವಲೋಕನಕ್ಕೆ ಇದು ಸೂಕ್ತ ಸಮಯ: ಡಾ.ಕೆ.ಸುಧಾಕರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ನಮ್ಮನ್ನು ಅನರ್ಹಗೊಳಿಸಿದ ಹಿಂದಿನ ಸಭಾಧ್ಯಕ್ಷ ಕೆ.ಆರ್‌.ರಮೇಶ್‌ ಕುಮಾರ್ ಅವರು ಆತ್ಮಾವಲೋಕನ ಮಾಡಿಕೊಳ್ಳಲು ಇದು ಸೂಕ್ತ ಸಮಯ’ ಎಂದು ನೂತನ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು.

ನಗರದ ಹೊರವಲಯದ ಮುದ್ದೇನಹಳ್ಳಿ ರಸ್ತೆಯ ಬಂಡಹಳ್ಳಿ ಕ್ರಾಸ್ ಬಳಿ ಎಚ್‌.ಎನ್‌.ವ್ಯಾಲಿ ನೀರಾವರಿ ಯೋಜನೆಗೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ‘ಸ್ಪೀಕರ್‌ ರಮೇಶ್‌ ಕುಮಾರ್‌, ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿ ವರ್ತಿಸಿದರು. ಜನರ ತೀರ್ಪನ್ನು ಧಿಕ್ಕರಿಸಿ ಪಕ್ಷಪಾತಿಯಾಗಿ ನಡೆದುಕೊಂಡು ನಮ್ಮನ್ನು ಅನರ್ಹಗೊಳಿಸಿದರು. ಆದರೆ, ಸುಪ್ರೀಂ ಕೋರ್ಟ್‌ ನಮ್ಮ ಪರ ತೀರ್ಪು ನೀಡಿತು. ಮೈತ್ರಿ ಸರ್ಕಾರದ ಅವಧಿಯಲ್ಲಿ ಕಾಂಗ್ರೆಸ್ ನಾಯಕರು ನನಗೆ ಮೋಸ ಮಾಡಿ, ನನ್ನ ಮೇಲೆ ದೌರ್ಜನ್ಯ ನಡೆಸಿದ್ದರು ಎಂದು ಕಿಡಿಕಾರಿದರು.

ನನ್ನ ಮೇಲೆ ನಂಬಿಕೆ ಇಟ್ಟು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರು ಸಚಿವ ಸ್ಥಾನ ನೀಡಿದ್ದಾರೆ. ಅವರ ನಂಬಿಕೆಯಂತೆ ಕೆಲಸ ಮಾಡುತ್ತೇನೆ. ಕ್ಷೇತ್ರದ ಅಭಿವೃದ್ಧಿಗೆ ಮತ್ತಷ್ಟು ಶ್ರಮ ವಹಿಸುತ್ತೇನೆ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು