ಕೈವಾರ(ಚಿಂತಾಮಣಿ): ತಾಲ್ಲೂಕಿನಲ್ಲಿ ಕೈವಾರ ಮತ್ತು ಮಸ್ತೇನಹಳ್ಳಿ ಗ್ರಾಮ ಪಂಚಾಯಿತಿಗಳನ್ನು ಸೇರಿಸಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕೈವಾರ ಪಟ್ಟಣ ಪಂಚಾಯಿತಿಯಲ್ಲಿ ಕುಡಿಯುವ ನೀರು, ಸ್ವಚ್ಛತೆ ಹಾಗೂ ಬೀದಿ ದೀಪಗಳಿಗೆ ಆದ್ಯತೆ ನೀಡಲಾಗುವುದು ಎಂದು ಪ್ರಭಾರ ಮುಖ್ಯಾಧಿಕಾರಿ ಜಿ.ಎನ್.ಚಲಪತಿ ಹೇಳಿದರು.

ಬುಧವಾರ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಕೈವಾರ ಮತ್ತು ಮಸ್ತೇನಹಳ್ಳಿ ಗ್ರಾಮ ಪಂಚಾಯಿತಿಗಳನ್ನು ಸೇರಿಸಿ ನೂತನ ಪಟ್ಟಣ ಪಂಚಾಯಿತಿ ಅಸ್ತಿತ್ವಕ್ಕೆ ಬಂದಿದೆ. ಅಗತ್ಯ ಪ್ರಕ್ರಿಯೆಯನ್ನು ಕೈಗೊಳ್ಳಲು ಚಿಂತಾಮಣಿ ನಗರಸಭೆ ಪೌರಾಯುಕ್ತ ಜಿ.ಎನ್.ಚಲಪತಿ ಅವರನ್ನು ತಾತ್ಕಾಲಿಕವಾಗಿ ಮುಖ್ಯಾಧಿಕಾರಿಯನ್ನಾಗಿ ನೇಮಕ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಎರಡು ಗ್ರಾಮ ಪಂಚಾಯಿತಿಗಳ ಸಮಗ್ರ ಕಡತ ಹಾಗೂ ದಾಖಲೆಗಳನ್ನು ಹಸ್ತಾಂತರಿಸಿಕೊಳ್ಳಲು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ ಎಂದರು.

ಎರಡು ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಅಧಿಕಾರಿಗಳ ಸಭೆ ನಡೆಸಿ ಕಡತಗಳು ಮತ್ತು ದಾಖಲೆಗಳನ್ನು ಹಸ್ತಾಂತರಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸೂಕ್ತ ಸಲಹೆ ನೀಡಿದರು.

ಒಂದು ಪಂಚಾಯಿತಿಯಲ್ಲಿ ಪಟ್ಟಣ ಪಂಚಾಯಿತಿಯ ಕಚೇರಿ ತೆರೆಯಲಾಗುವುದು. ನೂತನ ಪಟ್ಟಣ ಪಂಚಾಯಿತಿ ಅಭಿವೃದ್ಧಿಗಾಗಿ ಶ್ರಮಿಸಲಾಗುವುದು. ಸಿಬ್ಬಂದಿಯ ಕೊರತೆಯನ್ನು ಜಿಲ್ಲಾಧಿಕಾರಿ ಗಮನಕ್ಕೆ ತರಲಾಗಿದೆ. ಪ್ರತಿ ಹಳ್ಳಿಗೂ ಭೇಟಿ ನೀಡಿ ಸಮಸ್ಯೆಗಳನ್ನು ಸ್ಥಳದಲ್ಲೆ ಬಗೆಹರಿಸಲು ಪ್ರಯತ್ನಿಸುತ್ತೇನೆ. ಕಂದಾಯ ವಸೂಲಿ ಮತ್ತು ಇ–ಖಾತಾ ಕಾರ್ಯಕ್ರಮ ಚುರುಕುಗೊಳಿಸಲಾಗುವುದು ಎಂದು ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕಿ ಕವಿತಾ, ಎರಡು ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.