ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಂದವಾರ ಕೆರೆಯಲ್ಲಿ ಪ್ಲೋಟಿಂಗ್‌

Last Updated 16 ಆಗಸ್ಟ್ 2020, 7:11 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಕಂದವಾರ ಕೆರೆಯಲ್ಲಿ ₹ 16.5 ಲಕ್ಷ ವೆಚ್ಚದಲ್ಲಿ 2 ಪ್ಲೋಟಿಂಗ್ ನ್ನು ನಿರ್ಮಿಸಲಾಗಿದ್ದು, ಶನಿವಾರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಕೆ.ಸುಧಾಕರ್ ಕಂದವಾರ ಕೆರೆಯಲ್ಲಿ ನಿರ್ಮಿಸಲಾದ ಪ್ಲೋಟಿಂಗ್ ಗೆ ಚಾಲನೆ
ನೀಡಿದರು.

ನಂತರ ಮುದ್ದೇನಹಳ್ಳಿ ಗ್ರಾಮ ಪಂಚಾಯಿತಿ ಚೀಗಟೇನಹಳ್ಳಿ ಗ್ರಾಮದ ಮಾದರಿ ಸರ್ಕಾರಿ ಪ್ರೌಢಶಾಲೆಯಲ್ಲಿ ವಿವಿಧ ಸೌಲಭ್ಯಗಳನ್ನು ಉದ್ಘಾಟಿಸಿದರು.

ಮುದ್ದೇನಹಳ್ಳಿ ಗ್ರಾಮ ಪಂಚಾಯಿತಿ ನಶಿಕುಂಟೆ ಹಾಗೂ ಹೊಸೂರು ಗ್ರಾಮದಲ್ಲಿ ಕಾಂಕ್ರಿಟ್ ರಸ್ತೆ ಮತ್ತು ಚರಂಡಿ ಕಾಮಗಾರಿಯ ಭೂಮಿ ಪೂಜೆ ನೆರವೇರಿಸಿದರು. ದೊಡ್ಡಪೈಲಗುರ್ಕಿ ಗ್ರಾಮ ಪಂಚಾಯಿತಿಯ ರೆಡ್ಡಿಗೊಲ್ಲವಾರಹಳ್ಳಿ ಗ್ರಾಮದ ಉನ್ನತೀಕರಿಸಿದ ಮಾದರಿ ಅಂಗನವಾಡಿ ಕೇಂದ್ರ, ಆರೂರು-ಪೆರೇಸಂದ್ರ ಗ್ರಾಮ ಪಂಚಾಯಿತಿಯ ಜಂಟಿ ಸಹಭಾಗಿತ್ವದಲ್ಲಿ ಅವುಲನಾಗೇನಹಳ್ಳಿಯಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ ಹಾಗೂ ದೇವಸ್ಥಾನ ಹೊಸಹಳ್ಳಿ ಅಂಗನವಾಡಿ ಕೇಂದ್ರ ಉದ್ಘಾಟಿಸಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ, ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಫೌಜಿಯಾ ತರನ್ನುಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ರಾಮಸ್ವಾಮಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಾರಾಯಣಸ್ವಾಮಿ, ಸಣ್ಣ ನೀರಾವರಿ ಇಲಾಖೆಯ ಎಂಜಿನಿಯರ್ ನರೇಂದ್ರಬಾಬು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT