ಶಿಡ್ಲಘಟ್ಟ: ಸರ್ಕಾರ ತಮ್ಮ ರಾಜಕೀಯ ಲಾಭಕ್ಕಾಗಿ ಮರಾಠ ಅಭಿವೃದ್ಧಿ ನಿಗಮ ಸ್ಥಾಪಿಸಿದ್ದು ಕೂಡಲೇ ಇದನ್ನು ಕೈಬಿಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಎ. ನಾಗರಾಜ್ ಒತ್ತಾಯಿಸಿದರು.

ಮರಾಠ ನಿಗಮ ವಿರೋಧಿಸಿ ರಾಜ್ಯದಾದ್ಯಂತ ಬಂದ್ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ತಾಲ್ಲೂಕು ಕನ್ನಡ ರಕ್ಷಣಾ ವೇದಿಕೆಯಿಂದ ನಗರದ ತಾಲ್ಲೂಕು ಕಚೇರಿ ಮುಂಭಾಗ ಶನಿವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ರಾಜ್ಯದ ಸುಮಾರು ಆರೂವರೆ ಕೋಟಿ ಕನ್ನಡಿಗರ ಭಾವನೆಗಳನ್ನು ಬದಿಗಿಟ್ಟು ಕೇವಲ ತಮ್ಮ ಸ್ವಾರ್ಥ ರಾಜಕೀಯ ಲಾಭಕ್ಕಾಗಿ ಸರ್ಕಾರ ಮರಾಠ ಅಭಿವೃದ್ಧಿ ನಿಗಮ ರಚಿಸಿದೆ. ಸಾಲದ್ದಕ್ಕೆ ತಾವು ಮಾಡಿರುವ ಕೆಲಸವನ್ನು ಸಮರ್ಥಿಸಿಕೊಳ್ಳಲು ತಮ್ಮದೇ ಪಕ್ಷದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಂದ ಕನ್ನಡಪರ ಸಂಘಟನೆಗಳು ಹಾಗೂ ಹೋರಾಟಗಾರರನ್ನು ಅವಮಾನಿಸುವ ಕೆಲಸಕ್ಕೆ ಸರ್ಕಾರ ಮುಂದಾಗಿದೆ ಎಂದು ದೂರಿದರು.

ಮರಾಠ ನಿಗಮವನ್ನು ಕೂಡಲೇ ಸರ್ಕಾರ ಕೈ ಬಿಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಉಗ್ರ ಹೋರಾಟಗಳನ್ನು ರೂಪಿಸಲಾಗುವುದು ಎಂದು ಎಚ್ಚರಿಸಿ ತಹಶೀಲ್ದಾರ್ ಕೆ. ಅರುಂಧತಿ ಅವರ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.

ಕರವೇ ಜಿಲ್ಲಾ ಉಪಾಧ್ಯಕ್ಷ ತಮೀಮ್ ಅನ್ಸಾರಿ, ತಾಲ್ಲೂಕು ಕಾರ್ಯದರ್ಶಿ ನಾಗರಾಜ್, ನಗರಾಧ್ಯಕ್ಷ ಅಕ್ರಂ ಪಾಷಾ, ಪದಾಧಿಕಾರಿಗಳಾದ ನ್ಯಾಮತ್ ಉಲ್ಲಾ, ಅಖಿಲ್ಖಾನ್, ಇಶ್ರತ್ ಖಾನ್, ಶ್ರೀನಾಥ್
ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.