ಮಂಗಳವಾರ, ಮಾರ್ಚ್ 2, 2021
19 °C

ಶಿವಸೇನೆ, ಎಂಇಎಸ್ ನಿಷೇಧಕ್ಕೆ ಕರವೇ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಾಗೇಪಲ್ಲಿ: ‘ಕನ್ನಡಿಗರನ್ನು ಕೆಣಕುತ್ತಿರುವ ಎಂಇಎಸ್ ಹಾಗೂ ಶಿವಸೇನೆ ಸಂಘಟನೆಗಳನ್ನು ನಿಷೇಧ ಮಾಡಬೇಕು. ಮಹಾರಾಷ್ಟ್ರದ ಸಿಎಂ ಹಾಗೂ ಸಚಿವರು ಬೆಳಗಾವಿ ಗಡಿಗಳ ಬಗ್ಗೆ ನೀಡಿರುವ ಹೇಳಿಕೆಯನ್ನು ಹಿಂಪಡೆಯಬೇಕು’ ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಚಲಪತಿಗೌಡ ಬಣ) ಕಾರ್ಯಕರ್ತರು ತಾಲ್ಲೂಕು ಕಚೇರಿ ಮುಂದೆ ಪ್ರತಿಭಟಿಸಿದರು.

ವೇದಿಕೆಯ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಎ.ಬಾಬಾಜಾನ್ ಮಾತನಾಡಿ, ‘ನಾಡಿನ ಜನರು ಬಹಳ ಶಾಂತಿಪ್ರಿಯರು. ಮಹಾರಾಷ್ಟ್ರದ ಶಿವಸೇನೆ ಹಾಗೂ ಎಂಇಎಸ್‌ನ ಕೆಲವರು ಇಲ್ಲಸಲ್ಲದ ಗಡಿ ಕ್ಯಾತೆಗಳ ಬಗ್ಗೆ ಮಾತನಾಡುತ್ತಿದ್ದಾರೆ. ಮಹಾರಾಷ್ಟ್ರದ ಸಿಎಂ ರಾಜ್ಯ ಆಕ್ರಮಿತ ಮರಾಠಿ ಭಾಷಿಕ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ವಿಲೀನಗೊಳಿಸಲಾಗುವುದು ಎಂದು ಹೇಳಿಕೆ ನೀಡಿರುವ ಖಂಡನೀಯವಾಗಿದೆ’ ಎಂದರು.

ಪ್ರತಿಭಟನಾ ಸ್ಥಳಕ್ಕೆ ಶಿರಸ್ತೇದಾರ್ ಸೂರ್ಯನಾರಾಯಣ ಬಂದು ಪ್ರತಿಭಟನಾಕಾರರಿಂದ ಮನವಿ ಪತ್ರ ಸ್ವೀಕರಿಸಿದರು.

ಕರವೇ ಮುಖಂಡರಾದ ಸುಧಾಕರ್, ಬಿ.ಕೆ.ಸಲೀಂ, ಜೆ.ಸಂತೋಷ್, ವೆಂಕಟೇಶ್, ರಂಗನಾಥ್, ಜಿ.ವಿ.ವೆಂಕಟಶಿವಪ್ಪ, ಷೇಕ್ ಹಿದಾಯುತುಲ್ಲಾ, ಶಾಂತಿ ಹಾಜರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು