ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾವ ಚಿರತೆ ಬಂದರೂ ಘರ್ಜಿಸುವುದಿಲ್ಲ: ಆನಂದರೆಡ್ಡಿ

Last Updated 26 ಜನವರಿ 2023, 4:46 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಪ್ರಚಾರಕ್ಕಾಗಿ ಚಿಂತಾಮಣಿ ಮಾಜಿ ಶಾಸಕ ಎಂ.ಸಿ. ಸುಧಾಕರ್ ಅವರು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ವಿರುದ್ಧ ಮಾತನಾಡಿದ್ದಾರೆ. ಸಚಿವರ ವಿರುದ್ಧ ಚಿರತೆಯಂತಹ ಅಭ್ಯರ್ಥಿ ಕಣಕ್ಕಿಳಿಸುವುದಾಗಿ ಹೇಳಿದ್ದಾರೆ. ಆದರೆ ಯಾವ ಚಿರತೆ ಬಂದರೂ ಇಲ್ಲಿ ಘರ್ಜಿಸುವುದಿಲ್ಲ ಎಂದು ನಗರಸಭೆ ಅಧ್ಯಕ್ಷ ಡಿ.ಎಸ್. ಆನಂದರೆಡ್ಡಿ ಬಾಬು ತಿಳಿಸಿದರು.

ನಗರದಲ್ಲಿ ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಚುನಾವಣೆಯಲ್ಲಿ ಸೋಲುವ ಭಯದಿಂದ ವಿರೋಧ ಪಕ್ಷದವರು ಸಚಿವ ಡಾ.ಕೆ. ಸುಧಾಕರ್ ಅವರ ವಿರುದ್ಧ ಇಲ್ಲ ಸಲ್ಲದ, ಆಧಾರ ರಹಿತ ಆರೋಪಗಳನ್ನು ಮಾಡುತ್ತಿದ್ದಾರೆ ಎಂದರು.

ಈ ಹಿಂದೆ ಸಿದ್ದರಾಮಯ್ಯ ಅವರು ಕ್ಷೇತ್ರಕ್ಕೆ ಭೇಟಿ ನೀಡಿದಾಗ ಎಸ್‍ಪಿ ಕಚೇರಿ, ಜಿಲ್ಲಾಡಳಿತ ಭವನ, ಬಸ್ ನಿಲ್ದಾಣ, ಗ್ರಂಥಾಲಯ, ಜಿಲ್ಲಾಸ್ಪತ್ರೆ, ಎಚ್.ಎನ್ ವ್ಯಾಲಿ ಯೋಜನೆ ಸೇರಿದಂತೆ ಅನೇಕ ಕೊಡುಗೆಗಳನ್ನು ನೀಡಿದ್ದು ಡಾ.ಕೆ.ಸುಧಾಕರ್ ಎಂದು ಸಾರ್ವಜನಿಕ ಸಭೆಯಲ್ಲಿ ಹೇಳಿದ್ದಾರೆ. ಆದರೆ, ಈಗ ಚುನಾವಣೆ ಸಮೀಸುತ್ತಿರುವುದರಿಂದ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ದೂರಿದರು.

ನಗರಸಭೆಯಿಂದ ನಗರದ 8, 9, 10, 12 ನೇ ವಾರ್ಡ್‍ನಲ್ಲಿ ಯುಜಿಡಿ ಕಾಮಗಾರಿ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಗಿದೆ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಅಭಿವೃದ್ಧಿ ವೇಗ ಪಡೆದಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT