ಚಿಕ್ಕಬಳ್ಳಾಪುರ: ಕೇಂದ್ರ ಮತ್ತು ರಾಜ್ಯ ಸರ್ಕಾರ ವಿವಿಧ ಕಾಯ್ದೆಗಳ ತಿದ್ದುಪಡಿ ಮಾಡಲು ಹೊರಟಿರುವುದನ್ನು ವಿರೋಧಿಸಿ ಸೋಮವಾರ ಕರೆ ನೀಡಿರುವ ಕರ್ನಾಟಕ ಬಂದ್ ಬೆಂಬಲಿಸಿ ನಗರದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನಾ ಮೆರವಣಿಗೆ ನಡೆಸಿದವು.

ರಾಜ್ಯ ರೈತ ಸಂಘದ ವಿವಿಧ ಬಣಗಳು, ಕೇಂದ್ರಿಯ ಕಾರ್ಮಿಕ ಸಂಘಟನೆಗಳಾದ ಎಐಟಿಯುಸಿ ( ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್), ರೈತ–ದಲಿತ–ಕಾರ್ಮಿಕ ಸಂಘಟನೆಗಳ ಐಕ್ಯ ವೇದಿಕೆ, ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ, ಕನ್ನಡಪರ ಸಂಘಟನೆಗಳು ಸೇರಿ 20ಕ್ಕೂ ಹೆಚ್ಚು ಸಂಘಟನೆಗಳು ಬಂದ್ನಲ್ಲಿ ಪಾಲ್ಗೊಂಡಿವೆ. ಸಿಪಿಎಂ, ಕಾಂಗ್ರೆಸ್, ಜೆಡಿಎಸ್, ಪ್ರಜಾ ಸಂಘರ್ಷ ಸಮಿತಿ ಪಕ್ಷಗಳು ಕೂಡ ಬಂದ್ಗೆ ಬೆಂಬಲ ವ್ಯಕ್ತಪಡಿಸಿವೆ.

ನಗರದಲ್ಲಿ ಸೋಮವಾರ ಬೆಳಿಗ್ಗೆ 5.3O ರ ಸುಮಾರಿಗೆ ಪಂಜಿನ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಬಳಿಕ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ಸಾಗಿದರು.

ಚಿಕ್ಕಬಳ್ಳಾಪುರದಲ್ಲಿ ಪ್ರತಿಭಟನಾಕಾರರು ಪಂಜಿನ ಮೆರವಣಿಗೆ ನಡೆಸಿದರು.

ಬಂದ್ ಬೆಂಬಲಿಸಿ ಸ್ವಯಂಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚುವಂತೆ ಭಾನುವಾರ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಆಟೋದಲ್ಲಿ ಪ್ರಚಾರ ನಡೆಸಿ ಮನವಿ ಮಾಡಿದ್ದಾರೆ.

ಭದ್ರತೆ: ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ಜರುಗದಂತೆ ತಡೆಯುವ ಸಲುವಾಗಿ ಪೊಲೀಸ್ ಇಲಾಖೆ ಅಗತ್ಯ ಕ್ರಮ ಕೈಗೊಂಡಿದ್ದು, 650 ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ, ಎರಡು ಕೆಎಸ್ಆರ್ಪಿ ತುಕಡಿಗಳು, 8 ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ತುಕಡಿಗಳು ಹಾಗೂ 12 ಸೆಕ್ಟರ್ ಸಂಚಾರಿ ತಂಡಗಳನ್ನು ನಿಯೋಜಿಸಲಾಗಿದೆ.

ನಗರದಲ್ಲಿ ಕೆಎಸ್ಆರ್ಟಿಸಿ ಬಸ್ಗಳ ಸಂಚಾರ ಎಂದಿನಂತೆ ಆರಂಭಗೊಂಡಿದೆ. ಆಟೊಗಳ ಸಂಚಾರ ವಿರಳವಾಗಿದೆ. ಮೊದಲೇ ಲಾಕ್ಡೌನ್, ಕೋವಿಡ್ 19 ನಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ವಿವಿಧ ಉದ್ಯಮಗಳ ವರ್ತಕರು, ಆಟೋ ಚಾಲಕರು ಬಂದ್ ಕುರಿತು ಸ್ಪಷ್ಟ ನಿಲುವು ತಳೆದಿಲ್ಲ. ಕೆಲವರು ಬಂದ್ ಬೆಂಬಲಿಸುವುದಾಗಿ ತಿಳಿಸಿದರೆ, ಕೆಲವರು ಬಂದ್ಗೆ ನೈತಿಕ ಬೆಂಬಲ ಮಾತ್ರ ವಹಿವಾಟು ನಡೆಸುತ್ತೇವೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.