ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಡಿಬಂಡೆ | ಬಜೆಟ್‌: ಸಾರ್ವಜನಿಕ ಅಭಿಪ್ರಾಯ ಸಂಗ್ರಹಿಸಲು ಸಭೆ

Published 13 ಫೆಬ್ರುವರಿ 2024, 14:17 IST
Last Updated 13 ಫೆಬ್ರುವರಿ 2024, 14:17 IST
ಅಕ್ಷರ ಗಾತ್ರ

ಗುಡಿಬಂಡೆ: ಪಟ್ಟಣ ಪಂಚಾಯಿತಿ 2024-25ನೇ ಸಾಲಿನ ಬಜೆಟ್‌ ಸಿದ್ಧಪಡಿಸುವ ಸಲುವಾಗಿ ಇದೇ ಮೋದಲು ಬಾರಿಗೆ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲು ಸಭೆ ನಡೆಸಿತು.

ಸೋಮುವಾರ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ನಗೀನ್ ತಾಜ್ ಉಪಸ್ಥಿತಿಯಲ್ಲಿ ಸಭೆ ನಡೆಯಿತು. ಮುಖ್ಯಾಧಿಕಾರಿ ಸಭಾ ಶೀರಿನಾ ಮಾತನಾಡಿ, ಗುಡಿಬಂಡೆ ಅಭಿವೃದ್ಧಿಗಾಗಿ ಬಜೆಟ್‌ ಸಿದ್ಧಪಡಿಸುವ ಸಲುವಾಗಿ ಸಾರ್ವಜನಿಕರಿಂದ ಸಲಹೆ ಸೂಚನೆ ನೀಡಬೇಕೆಂದು ತಿಳಿಸಿದರು.

ಬೀದಿದೀಪ, ರಸ್ತೆ, ಕುಡಿಯುವ ನೀರು ಸೌಲಭ್ಯ ಒದಗಿಸಲು ಸಾರ್ವಜನಿಕರು ಒಕ್ಕೊರಲಿನಿಂದ ಆಗ್ರಹಿಸಿದರು.

ಸುರಸದ್ಮಗಿರಿ ಬೆಟ್ಟ, ಅಮಾನಿ ಭೈರಸಾಗರ ಕೆರೆ ವಿಕ್ಷಣೆಗೆ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದ್ದು ಮೂಲಸೌಲಭ್ಯ ಒದಗಿಸಬೇಕಾಗಿದೆ. ಪಟ್ಟಣದ ಹಲವು ಉದ್ಯಾನಗಳಲ್ಲಿ ಸಾರ್ವಜನಿಕರಿಗೆ ಪ್ರವೇಶ ಕಲ್ಪಿಸಬೇಕಾಗಿದೆ ಎಂದು ಮನವಿ ಮಾಡಿದರು.

ಸಭೆಯಲ್ಲಿ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ವಿಕಾಸ, ಸದಸ್ಯರಾದ ವೀಣ, ಅನುಷಾ, ಬಷೀರ್‌ ಅಹಮದ್, ರಾಜೇಶ, ರಾಜು, ಜೆ.ಇ. ಚಕ್ರಪಾಣಿ, ಅರೋಗ್ಯ ನಿರೀಕ್ಷಕ ಶಿವಣ್ಣ, ಸಾರ್ವಜನಿಕರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT