ಸ್ವಾಗತ ಕಮಾನು ಸ್ಥಾಪಿಸಬೇಕು ನಗರೋತ್ಥಾನ ಯೋಜನೆಯಡಿ ಚಿಕ್ಕಬಳ್ಳಾಪುರ ನಗರದ ನಾಲ್ಕು ಕಡೆ ಸ್ವಾಗತ ಕಮಾನು ನಿರ್ಮಿಸಬೇಕು. ಈ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಡಾ.ಕೆ.ಸುಧಾಕರ್ ಅವರ ಪ್ರಯತ್ನದ ಫಲವಾಗಿದೆ ಎಚ್.ಎನ್.ವ್ಯಾಲಿ ನೀರನ್ನು ಮೂರು ಹಂತದಲ್ಲಿ ಶುದ್ಧೀಕರಿಸಲು ಮುಂದಾಗಿತ್ತು. ಆದರೆ ಆ ನಂತರ ಈ ಯೋಜನೆ ಜಾರಿಯಾಗಲೇ ಇಲ್ಲ. ಈ ಬಾರಿಯ ಬಜೆಟ್‌ನಲ್ಲಿ ಈ ಬಗ್ಗೆ ನಿರೀಕ್ಷೆಗಳು ಇವೆ. ರಾಜ್ಯದಲ್ಲಿಯೇ ಅತಿ ಹೆಚ್ಚು ಹೂ ಬೆಳೆಯುವ ತಾಲ್ಲೂಕುಗಳಲ್ಲಿ ಚಿಕ್ಕಬಳ್ಳಾಪುರವೂ ಒಂದು. ಆದ್ದರಿಂದ ಇಲ್ಲಿ ಹೈಟೆಕ್ ಹೂ ಮಾರುಕಟ್ಟೆ ನಿರ್ಮಿಸಬೇಕು.
ಡಿ.ಎಸ್.ಆನಂದಬಾಬು ರೆಡ್ಡಿ ನಗರಸಭೆ ಮಾಜಿ ಅಧ್ಯಕ್ಷ
ಕ್ರೀಡಾಂಗಣಕ್ಕೆ ಸೌಲಭ್ಯ ಕಲ್ಪಿಸಿ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರ ಕ್ರೀಡಾಂಗಣ ಅಭಿವೃದ್ಧಿ ಆಗಬೇಕು. ಅಂತರಾಷ್ಟ್ರೀಯ ಮಟ್ಟದ ವ್ಯವಸ್ಥೆಗಳು ಕಲ್ಪಿಸದಿದ್ದರೂ ಪರವಾಗಿಲ್ಲ ಇತರ ಜಿಲ್ಲೆಗಳಲ್ಲಿ ಇರುವ ಕನಿಷ್ಠ ಮಟ್ಟದ ಕ್ರೀಡಾಂಗಣ ಅಗತ್ಯವಾಗಿದೆ. ಹೂ ಮಾರುಕಟ್ಟೆ ಅತ್ಯಗತ್ಯವಾಗಿದೆ. ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕೆ ವೇಗ ದೊರೆಯಬೇಕು. ಕೆ.ಸಿ ವ್ಯಾಲಿ ಎಚ್.ಎನ್ ವ್ಯಾಲಿ ಮತ್ತು ವೃಷಭಾವತಿ ವ್ಯಾಲಿ ನೀರು ಮೂರು ಹಂತದಲ್ಲಿ ಶುದ್ಧೀಕರಣವಾಗಬೇಕು. ಕೈಗಾರಿಕಾ ವಲಯಗಳ ಸ್ಥಾಪನೆ ಆಮೆಗತಿಯಲ್ಲಿದೆ. ಕೈಗಾರಿಕೆಗಳ ಅಭಿವೃದ್ಧಿ ಮೂಲಕ ಸರ್ ಎಂ. ವಿಶ್ವೇಶ್ವರಯ್ಯ ಅವರ ಜನ್ಮಭೂಮಿಗೆ ನ್ಯಾಯ ದೊರಕಿಸಿಕೊಡಬೇಕು.