ಗುರುವಾರ, 28 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಾಯುಕ್ತ ದಾಳಿ: ಡೇಟಾ ಎಂಟ್ರಿ ಅಪರೇಟರ್ ವಶ

Published 29 ಆಗಸ್ಟ್ 2023, 14:08 IST
Last Updated 29 ಆಗಸ್ಟ್ 2023, 14:08 IST
ಅಕ್ಷರ ಗಾತ್ರ

ಬಾಗೇಪಲ್ಲಿ: ಲೇಬರ್ ಅನುಮತಿ ಪಡೆಯಲು ವ್ಯಕ್ತಿಯೊಬ್ಬರಿಂದ ಲಂಚ ಪಡೆಯುವಾಗ ಇಲ್ಲಿನ ಕಾರ್ಮಿಕ ನಿರೀಕ್ಷಕರ ಕಚೇರಿಯ ಡಾಟಾ ಏಂಟ್ರಿ ಅಪರೇಟರ್ ಚಿಕ್ಕಬಳ್ಳಾಪುರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. 

ಪಟ್ಟಣದ ಜೆಸಿ ಫ್ಯಾಷನ್ಸ್ ಬಟ್ಟೆ ಅಂಗಡಿ ಮಾಲೀಕ ಚಂದ್ರಶೇಖರ್ ಎಂಬುವರು ಕಾರ್ಮಿಕ ಅನುಮತಿ ಪಡೆಯಲು ಅರ್ಜಿ ಸಲ್ಲಿಸಿದ್ದಾರೆ. ಕಾರ್ಮಿಕ ಅನುಮತಿಗಾಗಿ ಪಟ್ಟಣದ ನೇತಾಜಿ ವೃತ್ತದ ಬಳಿ ಕಾರ್ಮಿಕ ನಿರೀಕ್ಷಕರ ಕಚೇರಿಯ ಡೇಟಾ ಎಂಟ್ರಿ ಅಪರೇಟರ್ ನಾಗೇಶ್ ಎಂಬುವರು ₹4,500 ಲಂಚ ಕೇಳಿದ್ದರು. ಮುಂಗಡವಾಗಿ ಒಂದು ಸಾವಿರ ರೂಪಾಯಿ ಪಡೆದಿದ್ದು, ಉಳಿದ ₹3500 ಲಂಚ ಪಡೆಯುತ್ತಿದ್ದರು. 

ಈ ವೇಳೆ ಚಿಕ್ಕಬಳ್ಳಾಪುರ ಜಿಲ್ಲಾ ಲೋಕಾಯುಕ್ತ ಪೊಲೀಸ್ ಉಪ ಅಧೀಕ್ಷಕ ವೀರೇಂದ್ರ ಕುಮಾರ್ ಹಾಗೂ ಪೊಲೀಸ್ ಇನ್‌ಸ್ಪೆಕ್ಟರ್ ಮೋಹನ್ ಹಾಗೂ ಸಿಬ್ಬಂದಿ ದಾಳಿ ನಡೆಸಿ ಲಂಚದ ಹಣ ಹಾಗೂ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ನಾಗೇಶ್ ವಿರುದ್ಧ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT