ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ: ₹6 ಕೋಟಿ ವೆಚ್ಚದ ಕಾಮಗಾರಿಗೆ ಸಚಿವ ಡಾ.ಕೆ.ಸುಧಾಕರ್ ಭೂಮಿಪೂಜೆ

Last Updated 16 ಫೆಬ್ರುವರಿ 2020, 10:06 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಕ್ಷೇತ್ರದಾದ್ಯಂತ ಲೋಕೋಪಯೋಗಿ ಇಲಾಖೆ, ಸಣ್ಣ ನೀರಾವರಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ₹6 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಂಡ ವಿವಿಧ ಕಾಮಗಾರಿಗಳಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಭೂಮಿಪೂಜೆ ನೆರವೇರಿಸಿದರು.

₹2 ಕೋಟಿ ವೆಚ್ಚದ ತಾಲ್ಲೂಕಿನ ಕಸಬಾ ಹೋಬಳಿ ಮಾರೇಗಾನಹಳ್ಳಿ ಗ್ರಾಮದಿಂದ ಚೀಮನಹಳ್ಳಿ ಪಾತೂರು ಮಾರ್ಗವಾಗಿ ಹಿರಿಯಣ್ಣನಹಳ್ಳಿ ಸೇರುವ ರಸ್ತೆ ಅಭಿವೃದ್ಧಿ ಕಾಮಗಾರಿ, ₹2.50 ಕೋಟಿ ವೆಚ್ಚದ ಹರಿಸ್ಥಳ ಗ್ರಾಮದಿಂದ ಚಿಕ್ಕ ಅರೂರು ಮಾರ್ಗವಾಗಿ ಲಕ್ಷ್ಮೀ ಸಾಗರ ಕೆರೆ ವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿ,

₹1.20 ಕೋಟಿ ವೆಚ್ಚದ ಸಣ್ಣ ನೀರಾವರಿ ಇಲಾಖೆ ವತಿಯಿಂದ ಬೋಯಿನಹಳ್ಳಿ ಹಾಗೂ ನಲ್ಲಗಟ್ಟು ಬಳಿ ಬರುವ ಹಳ್ಳಕ್ಕೆ ಚೆಕ್ ಡ್ಯಾಂ ನಿರ್ಮಿಸುವ ಕಾಮಗಾರಿಗಳು ಮತ್ತು ಸಮಾಜ ಕಲ್ಯಾಣ ಇಲಾಖೆಯಿಂದ ಬೋಯಿನಹಳ್ಳಿ ಮತ್ತು ಶೆಟ್ಟಿವಾರಹಳ್ಳಿ ಗ್ರಾಮಗಳಲ್ಲಿ ತಲಾ ₹12 ಲಕ್ಷ ವೆಚ್ಚದ ಅಂಬೇಡ್ಕರ್ ಭವನಗಳ ನಿರ್ಮಾಣ ಕಾಮಗಾರಿಗಳಿಗೆ ಸಚಿವರು ಭೂಮಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಎಪಿಎಂಸಿ ಅಧ್ಯಕ್ಷ ನಾರಾಯಣಸ್ವಾಮಿ, ಮುಖಂಡರಾದ ಮರಳಕುಂಟೆ ಕೃಷ್ಣಮೂರ್ತಿ, ರವೀಂದ್ರರೆಡ್ಡಿ, ಗರಿಗರೆಡ್ಡಿ, ಅಶ್ವತ್ಥಪ್ಪ, ಎಇಇ ರಘುನಾಥ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT