ಭಾನುವಾರ, ನವೆಂಬರ್ 27, 2022
26 °C

ಎಂಜಿನಿಯರಿಂಗ್ ಓದಿ ರಾಜಕಾರಣಕ್ಕೆ ಬಂದವನಲ್ಲ: ಬೊಮ್ಮಾಯಿಗೆ ಸಿದ್ದರಾಮಯ್ಯ ತಿರುಗೇಟು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗೌರಿಬಿದನೂರು: ‘ನಾನು ಎಂಜಿನಿಯರಿಂಗ್‌ ಪದವಿ ಪಡೆದು ರಾಜಕಾರಣಕ್ಕೆ ಬಂದವನಲ್ಲ. ಕಾನೂನು ಓದಿ ರಾಜಕಾರಣಕ್ಕೆ ಬಂದವನು.  ಬಿಜೆಪಿಯವರಿಂದ ಕಾನೂನು ಕಲಿಯುವ ಅಗತ್ಯವಿಲ್ಲ’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ. 

‘ರಾಜ್ಯದಲ್ಲಿ ಶೇ 40ರಷ್ಟು ಕಮಿಷನ್ ಪಡೆಯುವ ಸರ್ಕಾರವಿದೆ. ಇದನ್ನು ಸಾಕ್ಷಿ ಸಮೇತ ಜನರ ಮುಂದಿಡಲು ಮುಂದಾಗಿದ್ದೇವೆ. ಇದಕ್ಕೆ ಪ್ರತಿಯಾಗಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ. ನನಗೂ ಕಾನೂನು ಚೆನ್ನಾಗಿ ಗೊತ್ತು’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು