ಚಿಕ್ಕಬಳ್ಳಾಪುರ: ನಗರದ ಕೆಇಬಿ ಸಮುದಾಯ ಭವನದಲ್ಲಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ ಎಫ್ ಐ) ರಾಜ್ಯ ಮಟ್ಟದ 16ನೇ ಸಮ್ಮೇಳನಕ್ಕೆ ಗುರುವಾರ ಚಾಲನೆ ನೀಡಲಾಯಿತು.
ಪದ್ಮಶ್ರೀ ಪಿಂಡಿಪಾಪನಹಳ್ಳಿ ಮುನಿ ವೆಂಕಟಪ್ಪ ಮತ್ತು ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್ ತಮಟೆ ಬಾರಿಸುವ ಮೂಲಕ ಸಮ್ಮೇಳನ ಉದ್ಘಾಟಿಸಿದರು.
ಶನಿವಾರ (ಸೆ.28)ರವರೆಗೆ ಸಮ್ಮೇಳನ ನಡೆಯಲಿದೆ. ರಾಜ್ಯದ ವಿವಿಧ ಜಿಲ್ಲೆಗಳ 300ಕ್ಕೂ ಹೆಚ್ಚು ಪ್ರತಿನಿಧಿಗಳು ಸಮ್ಮೇಳನದಲ್ಲಿ ಭಾಗವಹಿಸಿದ್ದಾರೆ.
ನಗರದ ಒಕ್ಕಲಿಗರ ಸಮುದಾಯ ಭವನದಿಂದ ಮೆರವಣಿಗೆ ಆರಂಭಿಸಿದ ಸಂಘಟನೆ ಸದಸ್ಯರು ಹಾಗೂ ವಿದ್ಯಾರ್ಥಿಗಳು ಕೆಇಒ ಸಮುದಾಯ ಭವನದ ಬಳಿ ಸಮಾವೇಶಗೊಂಡರು.
ಗ.ನ.ಅಶ್ವತ್ಥ್ ಕ್ರಾಂತಿಗೀತೆಗಳನ್ನು ಹಾಡಿದರು.
ಎಸ್ ಎಫ್ ಐ ರಾಷ್ಟ್ರೀಯ ಅಧ್ಯಕ್ಷ ವಿ.ಪಿ.ಸಾನು, ಕಾರ್ಯದರ್ಶಿ ಆದರ್ಶ್, ಉಪಾಧ್ಯಕ್ಷ ನಿತೀಶ್ ನರೇನ್, ಸರ್ದಾರ್ ಚಾಂದ್ ಪಾಷ, ಡಾ.ಅನಿಲ್ ಕುಮಾರ್, ರಾಷ್ಟ್ರೀಯ ಮತ್ತು ರಾಜ್ಯ ಪದಾಧಿಕಾರಿಗಳು ಭಾಗಿಯಾಗಿದ್ದಾರೆ.