ಮಕ್ಕಳ ಆರೋಗ್ಯದ ಮೇಲೆ ನಿಗಾ ಇರಲಿ

7
‘ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ’ದಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಗುರುದತ್ ಹೆಗಡೆ ಸಲಹೆ

ಮಕ್ಕಳ ಆರೋಗ್ಯದ ಮೇಲೆ ನಿಗಾ ಇರಲಿ

Published:
Updated:
Deccan Herald

ಚಿಕ್ಕಬಳ್ಳಾಪುರ: ‘ಉತ್ತಮ ಆರೋಗ್ಯದ ದೃಷ್ಟಿಯಿಂದ ಮಕ್ಕಳಿಗೆ ಸ್ವಚ್ಛತೆಯ ಪಾಠ ಹೇಳಿಕೊಡುವ ಜತೆಗೆ ಅವರ ಆರೋಗ್ಯದ ಮೇಲೆ ಪೋಷಕರು ನಿಗಾ ಇಡಬೇಕು. ದೈಹಿಕ ಬೆಳವಣಿಗೆ ಕುಂಠಿತಗೊಳಿಸುವ ಜಂತು ಹುಳು ಸಮಸ್ಯೆಯನ್ನು ನಿರ್ಲಕ್ಷಿಸಬಾರದು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗುರುದತ್ ಹೆಗಡೆ ಹೇಳಿದರು.

ನಗರದಲ್ಲಿ ಶುಕ್ರವಾರ ಆರೋಗ್ಯ ಇಲಾಖೆ ವತಿಯಿಂದ ಆಯೋಜಿಸಿದ್ದ ‘ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ’ದಲ್ಲಿ ಅವರು ಮಾತನಾಡಿದರು.

‘ಮಕ್ಕಳಲ್ಲಿ ಜಂತು ಹುಳುಗಳು ಆಹಾರದಲ್ಲಿನ ಪೌಷ್ಠಿಕಾಂಶ ಹೀರಿಕೊಂಡು ದೇಹಕ್ಕೆ ದೊರೆಯದಂತೆ ಮಾಡುತ್ತವೆ. ಇದರಿಂದ ಆದ್ದರಿಂದ ಮಕ್ಕಳ ದೈಹಿಕ ಬೆಳವಣಿಗೆ ಕುಂಠಿತಗೊಳ್ಳುತ್ತದೆ. ಹೀಗಾಗಿ ಆರೋಗ್ಯ ಇಲಾಖೆ ಅಂಗನವಾಡಿ, ಶಾಲಾ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಜಂತು ಹುಳುಗಳ ನಿವಾರಿಸುವ ಅಲ್ಬಂಡಜೋಲ್ ಮಾತ್ರೆ ವಿತರಿಸುತ್ತದೆ. ಆ ಮಾತ್ರೆಗಳನ್ನು ಮಕ್ಕಳು ತಪ್ಪದೆ ಸೇವಿಸಬೇಕು’ ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಅಧಿಕಾರಿ ಬಿ.ಎಂ.ರವಿಶಂಕರ್ ಮಾತನಾಡಿ, ‘ಕೈಗಳನ್ನು ತೊಳೆದುಕೊಳ್ಳದೆ ಊಟ ಸೇವಿಸಿದರೆ ಕ್ರಿಮಿಗಳು ದೇಹವನ್ನು ಸೇರಿ, ಜಂತುಹುಳುಗಳಾಗಿ ಪರಿವರ್ತನೆಯಾಗುತ್ತವೆ. ಹಾಗಾದಾಗ ರಕ್ತ ಹೀನತೆ, ಅಪೌಷ್ಠಿಕತೆ, ಹಸಿವಾಗದಿರುವುದು, ನಿಶ್ಯಕ್ತಿ ಮತ್ತು ಆತಂಕ, ಹೊಟ್ಟೆ ನೋವು, ವಾಂತಿ, ಅತಿಸಾರ, ತೂಕ ಕಡಿಮೆಯಾಗುವಿಕೆ ಸೇರಿದಂತೆ ಹಲವು ಸಮಸ್ಯೆಗಳು ಕಾಣಿಸಿಕೊಳ್ಳಲಿವೆ. ಹೀಗಾಗಿ ಸ್ವಚ್ಛತೆ ಹೆಚ್ಚಿನ ಆದ್ಯತೆ ನೀಡಬೇಕು’ ಎಂದರು.

‘ವಿದ್ಯಾರ್ಥಿಗಳು ಶುದ್ದ ನೀರು, ತಾಜಾ ಆಹಾರ, ಹಣ್ಣು, ತರಕಾರಿ ಸೇವನೆ ಮಾಡುವುದನ್ನು ರೂಡಿಸಿಕೊಳ್ಳಬೇಕು. ಶೌಚಾಲಯಕ್ಕೆ ಹೋಗಿ ಬಂದ ಬಳಿಕ ಕಡ್ಡಾಯವಾಗಿ ಸಾಬೂನಿನಿಂದ ಕೈತೊಳೆಯಬೇಕು. ಬಯಲಲ್ಲಿ ಬರ್ಹಿದೆಸೆ ಮಾಡಬಾರದು. ಸದಾ ಚಪ್ಪಲಿ ಧರಿಸಿಯೇ ನಡೆದಾಡಬೇಕು’ ಎಂದು ತಿಳಿಸಿದರು.

ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಮಿತ್ರಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಶಾಂತಲಾ, ಮಾನಸಿಕ ಆರೋಗ್ಯಾಧಿಕಾರಿ ಡಾ.ಚಂದ್ರಮೋಹನ್, ಆರೋಗ್ಯ ಶಿಕ್ಷಣಾಧಿಕಾರಿ ಸುಧಾ ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !