ಶುಕ್ರವಾರ, ಫೆಬ್ರವರಿ 28, 2020
19 °C
ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ವಿರುದ್ಧ ಶಾಸಕ ವಿ.ಮುನಿಯಪ್ಪ ಟೀಕೆ

ಆಕಾಂಕ್ಷಿಗಳ ಪಟ್ಟಿಯಲ್ಲಿ ಕೆ.ಎಚ್.ಮುನಿಯಪ್ಪ ಹೆಸರಿಲ್ಲ: ಶಾಸಕ ವಿ.ಮುನಿಯಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ‘ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳ ಪಟ್ಟಿಯಲ್ಲಿ ಎಲ್ಲಿಯೂ ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಅವರು ಹೆಸರು ಪ್ರಸ್ತಾಪಕ್ಕೆ ಬಂದಿಲ್ಲ. ಅದನ್ನು ಅವರಷ್ಟಕ್ಕೆ ಅವರೇ ಹೇಳಿಕೊಳ್ಳುತ್ತಿದ್ದಾರೆ’ ಎಂದು ಶಾಸಕ ವಿ.ಮುನಿಯಪ್ಪ ಟೀಕಿಸಿದರು.

ಶಿಡ್ಲಘಟ್ಟದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೆ.ಎಚ್.ಮುನಿಯಪ್ಪ ಇನ್ನೂ ಆ ಮಟ್ಟಕ್ಕೆ ಬೆಳೆದಿಲ್ಲ. ಹಾಗೇನಾದರೂ ಅಂದುಕೊಳ್ಳುವಂತಿದ್ದರೆ ಅವರಷ್ಟಕ್ಕೆ ಅವರೇ ಹೇಳಿಕೊಳ್ಳಬೇಕು. ಹೈಕಮಾಂಡ್‌ ಮಟ್ಟದಲ್ಲಿ ಆಗಲಿ, ರಾಜ್ಯ ಮಟ್ಟದಲ್ಲಿ ಆಗಲಿ ಅವರು ಹೆಸರು ಪ್ರಸ್ತಾಪವೇ ಆಗಿಲ್ಲ. ಅವರಷ್ಟಕ್ಕೆ ಅವರೇ ಆಕಾಂಕ್ಷಿ ಎಂದು ಹೇಳಿಕೊಳ್ಳುತ್ತಿದ್ದಾರೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘ಸಿದ್ದರಾಮಯ್ಯ ಅವರ ವರ್ಚಸ್ಸು ಕುಗ್ಗಿದೆಯೇ’ ಎಂಬ ಪ್ರಶ್ನೆಗೆ, ‘ಹಾಗೇನು ಇಲ್ಲ. ಕೆಲವೊಮ್ಮೆ ನಮ್ಮಲ್ಲಿ ಹಾಗೇ ಕಾಣುತ್ತದೆ. ಶೀಘ್ರದಲ್ಲಿಯೇ ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿ ಹೋಗುತ್ತದೆ’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು