ಚಿಕ್ಕಬಳ್ಳಾಪುರ: ಆಹಾರ ಸಚಿವ ಹಾಗೂ ಮಾದಿಗ ಸಮಾಜದ ಮುಖಂಡ ಕೆ.ಎಚ್. ಮುನಿಯಪ್ಪ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಆದಿ ಜಾಂಬವ ಮಠದ ಷಡಕ್ಷರಮುನಿ ಸ್ವಾಮೀಜಿ ಆಗ್ರಹಿಸಿದರು.

ನಗರದಲ್ಲಿ ಶುಕ್ರವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಆಯಾ ಸಮುದಾಯದ ಹಿತ ಕಾಪಾಡಬೇಕಾದದ್ದು ಆಯಾ ಸಮಾಜದ ಸ್ವಾಮೀಜಿ ಕರ್ತವ್ಯ. ಆ ದಿಕ್ಕಿನಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ ಅವರು ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎಂದಿದ್ದಾರೆ. ಅದೇ ರೀತಿಯಲ್ಲಿ ಮಾದಿಗ ಸಮುದಾಯದ ಸ್ವಾಮೀಜಿಯಾಗಿ ಸಮುದಾಯದ ಪರವಾಗಿ ಹಕ್ಕೊತ್ತಾಯ ಮಾಡುತ್ತಿದ್ದೇನೆ’ ಎಂದರು.

ಮುಖ್ಯಮಂತ್ರಿ ಬದಲಾವಣೆ ವಿಚಾರ ಚರ್ಚೆಯಲ್ಲಿದೆ. ದಲಿತ ಮುಖ್ಯಮಂತ್ರಿ ವಿಚಾರ ಬಂದರೆ ಮಾದಿಗ ಸಮುದಾಯಕ್ಕೆ ಅವಕಾಶ ನೀಡಬೇಕು ಎಂದು ಹೇಳಿದರು. ಮುಖ್ಯಮಂತ್ರಿ ಸ್ಥಾನ ನೀಡಲು ಸಾಧ್ಯವಾಗದಿದ್ದರೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.