ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಿಸಾನ್ ಸಭಾ ಜಾಥಾ ನಾಳೆ ರಾಜ್ಯಕ್ಕೆ

ಟೋಲ್ ಗೇಟ್‌ನಿಂದ ಪಟ್ಟಣದವರೆಗೆ ಬೈಕ್ ರ‍್ಯಾಲಿ, ಬಹಿರಂಗ ಸಭೆ
Last Updated 6 ಡಿಸೆಂಬರ್ 2022, 4:59 IST
ಅಕ್ಷರ ಗಾತ್ರ

ಬಾಗೇಪಲ್ಲಿ: ಅಖಿಲ ಭಾರತ ಕಿಸಾನ್ ಸಭಾ ಸಂಘಟನೆಯ 35ನೇ ರಾಷ್ಟ್ರ ಮಟ್ಟದ ಸಮ್ಮೇಳನ ಅಂಗವಾಗಿ ತೆಲಂಗಾಣದಿಂದ ಹಮ್ಮಿಕೊಳ್ಳಲಾಗಿರುವ ಜಾಥಾ ಆಂಧ್ರಪ್ರದೇಶದ ಮೂಲಕ ಇದೇ 7ರಂದು ರಾಜ್ಯದ ಗಡಿ ಪ್ರವೇಶಿಸಲಿದೆ ಎಂದು ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಹಾಗೂ ಜಿಲ್ಲಾ ಅಧ್ಯಕ್ಷ ಪಿ. ಮಂಜುನಾಥರೆಡ್ಡಿ ತಿಳಿಸಿದರು.

ಈ ಸಮ್ಮೇಳನದಲ್ಲಿಕೃಷಿ ಕಾಯ್ದೆಗಳ ಜಾರಿಯಿಂದ ಕೃಷಿಕರು ಮತ್ತು ಕೃಷಿ ಕ್ಷೇತ್ರದ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲಾಗುತ್ತದೆ. ಡಿ. 7ರ ಬುಧವಾರ ಬೆಳಿಗ್ಗೆ 10 ಗಂಟೆಗೆ ರಾಷ್ಟ್ರೀಯ ಹೆದ್ದಾರಿ ರಸ್ತೆ- 44 ರ ರಾಜ್ಯದ ಗಡಿಯ ಟೋಲ್ ಗೇಟ್‌ಗೆ ಜಾಥಾ ಆಗಮಿಸಲಿದೆ ಎಂದು ತಿಳಿಸಿದರು.

ಈ ಪ್ರಯುಕ್ತ ತಾಲ್ಲೂಕು ಪತ್ರಕರ್ತರ ಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೃಷಿಕರು ಹಾಗೂ ಕೃಷಿ ಕ್ಷೇತ್ರವನ್ನು ಖಾಸಗಿಕರಣ, ಉದಾರಿಕರಣದ ಮೂಲಕ ಕಾರ್ಪೊರೇಟ್ ಕಂಪನಿಗಳಿಗೆ ಮಾರಾಟ ಮಾಡಲು ಹೊರಟಿದೆ’ ಎಂದು ದೂರಿದರು.

ಟೋಲ್ ಗೇಟ್‌ನಿಂದ ಪಟ್ಟಣದವರೆಗೆ ಸಾವಿರಾರು ರೈತರು, ಕಾರ್ಯಕರ್ತರು ಬೈಕ್ ರ‍್ಯಾಲಿಯಲ್ಲಿ ಭಾಗವಹಿಸಲಿದ್ದಾರೆ. ಪಟ್ಟಣದ ಅಂಬೇಡ್ಕರ್ ಪುತ್ಥಳಿ ಬಳಿ ಬೃಹತ್ ಬಹಿರಂಗ ಸಭೆ ಹಮ್ಮಿಕೊಳ್ಳಲಾಗಿದ್ದು, ಕಿಸಾನ್ ಸಭಾದ ನಾಯಕ ಪಿ. ಕೃಷ್ಣಪ್ರಸಾದ್
ಮಾತನಾಡಲಿದ್ದಾರೆ.

ಟಿ. ಸಾಗರ್, ರಾಜ್ಯ ಕಾರ್ಯದರ್ಶಿ ಜಿ.ಸಿ. ಬಯ್ಯಾರೆಡ್ಡಿ, ಯು. ಬಸವರಾಜು, ಯಶ್ವಂತ್ ಸೇರಿದಂತೆ ರಾಜ್ಯ, ಜಿಲ್ಲಾ, ತಾಲ್ಲೂಕು ಮಟ್ಟದ ಮುಖಂಡರು ಬಹಿರಂಗ ಸಭೆಯಲ್ಲಿ ಭಾಗವಹಿಸಲಿದ್ದಾರೆ. ತಾಲ್ಲೂಕಿನ ರೈತರು, ಕೂಲಿ ಕಾರ್ಮಿಕರು, ಮಹಿಳೆಯರು, ಯುವಕರು, ಬುದ್ಧಿಜೀವಿಗಳು, ಸಂಘ-ಸಂಸ್ಥೆಗಳು ಸಭೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಗೋಷ್ಠಿಯಲ್ಲಿ ಪ್ರಾಂತ ರೈತ ಸಂಘದ ಗೌರವಾಧ್ಯಕ್ಷ ಎ.ಎನ್. ಶ್ರೀರಾಮಪ್ಪ, ಅಧ್ಯಕ್ಷ ಶ್ರೀರಾಮನಾಯಕ್, ಕಾರ್ಯದರ್ಶಿ ಹೇಮಚಂದ್ರ, ಆರ್. ರಾಮಪ್ಪ, ರಾಮಚಂದ್ರ, ಗಂಗರಾಜಪ್ಪ, ರಾಮರೆಡ್ಡಿ, ನಡಿಪಣ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT