ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನರಿಗಾಗಿ ಹೋರಾಡಿದ ಕಿತ್ತೂರು ಚನ್ನಮ್ಮ: ಕೃಷ್ಣಪ್ಪ

Last Updated 24 ಅಕ್ಟೋಬರ್ 2021, 4:28 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಬ್ರಿಟಿಷರ ಅನ್ಯಾಯದ ವಿರುದ್ಧ ಹೋರಾಡಿದ ದಿಟ್ಟ ಮಹಿಳೆ ಕಿತ್ತೂರು ರಾಣಿ ಚನ್ನಮ್ಮ. ತನ್ನ ಮನೆತನಕ್ಕಾಗಿ ಹೋರಾಟ ಮಾಡದೆ ಜನರ ರಕ್ಷಣೆಗಾಗಿ, ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದರು ಎಂದು ಜಿಲ್ಲಾಧಿಕಾರಿ ಕಾರ್ಯಾಲಯದ ಕಚೇರಿ ಸಹಾಯಕ ಅಧಿಕಾರಿ ಕೃಷ್ಣಪ್ಪ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಅಖಿಲ ಭಾರತ ವೀರಶೈವ ಮಹಾಸಭಾ ಮತ್ತು ವೀರಶೈವ ಮಹಿಳಾ ಸಮಾಜದ ಸಹಯೋಗದಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಕಿತ್ತೂರು ರಾಣಿ ಚನ್ನಮ್ಮ ಜಯಂತಿಯಲ್ಲಿ ಅವರು ಮಾತನಾಡಿದರು.

ಸ್ವಾತಂತ್ರ್ಯಕ್ಕೆ ಹೋರಾಡಿದ ಮಹಿಳೆಯರು ನಮಗೆ ಸ್ಫೂರ್ತಿ ಆಗಬೇಕು. ಚನ್ನಮ್ಮ ಅವರಂತೆ ಪ್ರತಿಯೊಬ್ಬರಲ್ಲಿ ದೇಶದ ಬಗ್ಗೆ ಗೌರವ ಬೆಳೆಯಬೇಕು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT