ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ: ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಕೇಶವರೆಡ್ಡಿ ನಾಮಪತ್ರ

ಉಪ ಚುನಾವಣೆ ಹಿನ್ನೆಲೆಯಲ್ಲಿ ದಿಢೀರ್ ಬೆಳವಣಿಗೆ
Last Updated 23 ಸೆಪ್ಟೆಂಬರ್ 2019, 10:00 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎನ್.ಕೇಶವರೆಡ್ಡಿ ಅವರು ಸೋಮವಾರ ನಾಮಪತ್ರ ಸಲ್ಲಿಸಿದರು.

ಶಾಸಕರಾಗಿದ್ದ ಡಾ.ಕೆ.ಸುಧಾಕರ್ ಅವರ ರಾಜೀನಾಮೆಯಿಂದ ತೆರವಾಗಿರುವ ಹುದ್ದೆಗೆ ಏರಲು ಕಾಂಗ್ರೆಸ್‌ ಪಾಳೆಯದಲ್ಲಿ ತೆರೆಮರೆಯಲ್ಲಿ ಪೈಪೋಟಿ ನಡೆದಿದ್ದು, ಮುಖಂಡರಾದ ನಂದಿ ಆಂಜನಪ್ಪ, ಕೆ.ವಿ.ನವೀನ್ ಕಿರಣ್, ಜಿ.ಎಚ್‌.ನಾಗರಾಜ್, ಯಲುವಹಳ್ಳಿ ರಮೇಶ್ ಮತ್ತು ಗಂಗರೇಕಾಲುವೆ ನಾರಾಯಣಸ್ವಾಮಿ ಅವರು ಪ್ರಬಲ ಟಿಕೆಟ್‌ ಆಕಾಂಕ್ಷಿಗಳಾಗಿದ್ದಾರೆ ಎನ್ನಲಾಗಿದೆ.

ಶಾಸಕ ಎನ್.ಎಚ್‌.ಶಿವಶಂಕರರೆಡ್ಡಿ ಅವರ ಆಪ್ತರಾಗಿರುವ ಕೇಶವರೆಡ್ಡಿ ನಿನ್ನೆಯವರೆಗೂ ತಾನು ಸಹ ಒಬ್ಬ ಆಕಾಂಕ್ಷಿ ಎಂಬ ಗುಟ್ಟು ಬಿಟ್ಟುಕೊಡದೆ ಉಳಿದವರೆಲ್ಲರ ಹೆಸರು ಹೇಳುತ್ತ ಬಂದಿದ್ದರು. ಸೋಮವಾರ ಬೆಳಿಗ್ಗೆ ದಿಢೀರ್‌ ಅವರು ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿರುವುದು ಕಾಂಗ್ರೆಸ್‌ ಪಾಳೆಯ ಮತ್ತು ಸ್ಥಳೀಯ ರಾಜಕೀಯ ವಲಯದಲ್ಲಿ ಚರ್ಚೆಗೆ ಎಡೆಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT