ಚಿಂತಾಮಣಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾಗಿರುವ ‘ಆಶಾಕಿರಣ’ ಯೋಜನೆಯಡಿ ತಾಲ್ಲೂಕಿನಲ್ಲಿ 2024–25ನೇ ಸಾಲಿನಲ್ಲಿ 11,500 ಮಂದಿಗೆ ಹಾಗೂ 2025–26ನೇ ಸಾಲಿನ ಫೆಬ್ರುವರಿವರೆಗೆ 9,500 ಮಂದಿಗೆ ಕಣ್ಣಿನ ತಪಾಸಣೆ ನಡೆಸಲಾಗಿದೆ. ಈ ಪೈಕಿ ಕ್ರಮವಾಗಿ 1,562 ಮತ್ತು 1,262 ಮಂದಿಯಲ್ಲಿ ಕಣ್ಣಿನ ಸಮಸ್ಯೆ ಇರುವುದು ಅಂಕಿಅಂಶಗಳಿಂದ ದೃಢಪಟ್ಟಿದೆ.

ಆರಂಭಿಕ ಹಂತದಲ್ಲೇ ಕಣ್ಣಿನ ಸಮಸ್ಯೆ ಕಂಡುಹಿಡಿದು ಚಿಕಿತ್ಸೆ ನೀಡುವ ಉದ್ದೇಶದಿಂದ ರಾಷ್ಟ್ರೀಯ ಅಂಧತ್ವ ಮತ್ತು ದೃಷ್ಟಿ ಮಾಂದ್ಯತೆ ನಿಯಂತ್ರಣ ಕಾರ್ಯಕ್ರಮದಡಿ 2022ರಲ್ಲಿ ಆಶಾಕಿರಣ ಯೋಜನೆ ಪ್ರಾರಂಭಿಸಲಾಗಿತ್ತು. ಮೊದಲ ಎರಡು ಹಂತದಲ್ಲಿ ಆಯ್ದ ಜಿಲ್ಲೆಗಳಲ್ಲಿ ಮಾತ್ರ ಯೋಜನೆ ಜಾರಿಗೆ ತರಲಾಗಿತ್ತು. ಆ ನಂತರ ರಾಜ್ಯದಾದ್ಯಂತ ವಿಸ್ತರಿಸಲಾಯಿತು. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮೊದಲ ಹಂತದಲ್ಲೇ ಯೋಜನೆ ಅನುಷ್ಠಾನಗೊಳಿಸಲಾಗಿತ್ತು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರಾಮಚಂದ್ರಾರೆಡ್ಡಿ ‘ಪ್ರಜಾವಾಣಿ’ಗೆ ತಿಳಿಸಿದರು.

ಆಧುನಿಕ ತಾಂತ್ರಿಕ ಯುಗದಲ್ಲಿ ಡಿಜಿಟಲ್ ಸಾಧನೆಗಳ ಅತಿಯಾದ ಬಳಕೆ, ಅದರಲ್ಲೂ ಟಿವಿ ಮತ್ತು ನಿರಂತರ ಮೊಬೈಲ್ ಬಳಕೆ, ವಾಯು ಮಾಲಿನ್ಯ ಮತ್ತಿತರ ಕಾರಣಗಳಿಂದ ಚಿಕ್ಕ ವಯಸ್ಸಿನಲ್ಲೇ ದೃಷ್ಟಿದೋಷ ಸಮಸ್ಯೆಗೆ ಸಿಲುಕುವವರ ಸಂಖ್ಯೆ ಹೆಚ್ಚುತ್ತಿದೆ. ಚಿಕ್ಕ ಮಕ್ಕಳು ಮತ್ತು ವಿದ್ಯಾರ್ಥಿಗಳಲ್ಲಿ ದೃಷ್ಟಿದೋಷವುಳ್ಳವರ ಸಂಖ್ಯೆ ಅಧಿಕವಾಗುತ್ತಿದೆ.

ಕಣ್ಣಿನ ಸಮಸ್ಯೆಯನ್ನು ಪತ್ತೆಮಾಡಿ ಚಿಕಿತ್ಸೆ ವಿಳಂಬವಾದರೆ, ಸಮಸ್ಯೆ ಗಂಭೀರವಾಗಿ ದೃಷ್ಟಿಯೇ ಕಳೆದುಕೊಳ್ಳುವ ಸಂಭವವಿರುತ್ತದೆ. ಆರಂಭಿಕ ಹಂತದಲ್ಲಿ ಸಮಸ್ಯೆಯನ್ನು ಪತ್ತೆ ಮಾಡಿ, ಸೂಕ್ತ ಚಿಕಿತ್ಸೆ ನೀಡದೆ ಸಮಸ್ಯೆ ಪರಿಹಾರವಾಗುತ್ತದೆ. ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಆರಂಭದಲ್ಲಿ ಮನೆಗಳಿಗೆ ಭೇಟಿ ನೀಡಿ, ಕಣ್ಣಿನ ತಪಾಸಣೆ ನಡೆಸಿ, ಸಮಸ್ಯೆ ಪತ್ತೆ ಹಚ್ಚಲಿ ದ್ದಾರೆ.

ರಾಷ್ಟ್ರೀಯ ಅಂಧತ್ವ ಮತ್ತು ದೃಷ್ಟಿ ಮಾಂದ್ಯತೆ ನಿಯಂತ್ರಣದಡಿ ವಿದ್ಯಾರ್ಥಿಗಳು ಸೇರಿ ಎಲ್ಲ ವಯಸ್ಸಿವರಿಗೂ ಕ್ಯಾಂಪ್ ಮೂಲಕ ಕಣ್ಣಿನ ತಪಾಸಣೆ ನಡೆಸಲಾಗುತ್ತದೆ. ಲಯನ್ಸ್ ಕ್ಲಬ್ ಮತ್ತಿತರ ಸ್ವಯಂ ಸೇವಾ ಸಂಸ್ಥೆಗಳ ಮೂಲಕವೂ ತಪಾಸಣೆ ನಡೆಸಿ ಸಮಸ್ಯೆ ಇರುವವರಿಗೆ ತಾಲ್ಲೂಕು, ಜಿಲ್ಲಾ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ, ಶಸ್ತ್ರ ಚಿಕಿತ್ಸೆ ಮಾಡಿಸಲಾಗುತ್ತದೆ.

ಶಸ್ತ್ರ ಚಿಕಿತ್ಸೆ: ತಾಲ್ಲೂಕಿನಲ್ಲಿ 2024-25ರಲ್ಲಿ 1,562 ಮಂದಿಗೆ ಹಾಗೂ 2025-26ರ ಫೆಬ್ರುವರಿವರೆಗೆ 1,262 ಮಂದಿಗೆ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ. ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಸರ್ಕಾರಿ ಮತ್ತು ಖಾಸಗಿ ಅಸ್ಪತ್ರೆಗಳಲ್ಲಿ ಉಚಿತವಾಗಿ ಶಸ್ತ್ರ ಚಿಕಿತ್ಸೆ ನಡೆಸಲಾಗುತ್ತದೆ. ಕಣ್ಣಿನ ಪೊರೆ ದೃಢಪಟ್ಟರೆ ಉನ್ನತ ಅಸ್ಪತ್ರೆಗಳಿಗೆ ಕಳುಹಿಸಿ ಹೆಚ್ಚಿನ ಚಿಕಿತ್ಸೆ ನೀಡಲಾಗುವುದು. ಇದಕ್ಕೆ ಸ್ವಯಂಸೇವಾ ಸಂಸ್ಥೆಗಳ ಸಹಕಾರ ಪಡೆಯಲಾಗುತ್ತದೆ.

ಆಶಾಕಿರಣ ಯೋಜನೆಯಲ್ಲದೆ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದಡಿ(ಆರ್.ಬಿ.ಎಸ್.ಕೆ) ಮಕ್ಕಳಿಗೆ ತಪಾಸಣೆ ಮಾಡಲಾಗುವುದು. ಸಮಸ್ಯೆ ಕಂಡುಬಂದ ಮಕ್ಕಳಿಗೆ ಹೆಚ್ಚಿನ ನೇತ್ರ ತಪಾಸಣೆ ಮಾಡಿಸಿ ಕನ್ನಡಕ ವಿತರಿಸಲಾಗುತ್ತದೆ.

ಆಶಾಕಿರಣ ದೃಷ್ಟಿ ಕೇಂದ್ರಗಳಲ್ಲಿ ಎಲ್ಲ ಕಾಲದಲ್ಲೂ ನೇತ್ರ ತಪಾಸಣೆ ನಡೆಸಿ ಸಮಸ್ಯೆ ಪತ್ತೆ ಮಾಡಲಾಗುತ್ತದೆ. ಸಾರ್ವಜನಿಕರು ಹತ್ತಿರದ ಕೇಂದ್ರಗಳಿಗೆ ತೆರಳಿ ತಪಾಸಣೆ ಮಾಡಿಸಿಕೊಳ್ಳಬಹುದು. ಸಮಸ್ಯೆ ಇದ್ದರೆ ತಾಲ್ಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಿಗೆ ಶಿಫಾರಸು ಮಾಡುತ್ತಾರೆ ಎಂದು ನೇತ್ರಾಧಿಕಾರಿ ರಾಧಾಕೃಷ್ಣ ತಿಳಿಸಿದರು.

2024-25 ರಲ್ಲಿ 1,300 ಹಿರಿಯರಿಗೆ ಮತ್ತು 902 ಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಕನ್ನಡಕಗಳನ್ನು ವಿತರಿಸಲಾಗಿದೆ. 2025-26ನೇ ಸಾಲಿನ ಕನ್ನಡಕ ವಿತರಣೆ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಶೀಘ್ರವೇ ವಿತರಿಸಲಾಗುವುದು ಎಂದು ಇಲಾಖೆಯ ಮೂಲಗಳು ತಿಳಿಸಿವೆ.

ತಾಲ್ಲೂಕು ಆರೋಗ್ಯ ಕೇಂದ್ರದಲ್ಲಿ ಆಶಾಕಿರಣ ದೃಷ್ಟಿ ಕೇಂದ್ರ

2025ರ ಜುಲೈನಲ್ಲಿ ಈ ಯೋಜನೆಯನ್ನು ಮರು ವಿನ್ಯಾಸಗೊಳಿಸಿ ಸಮುದಾಯ ಆರೋಗ್ಯ ಕೇಂದ್ರಗಳು, ತಾಲ್ಲೂಕು ಅಸ್ಪತ್ರೆಗಳು, ಜಿಲ್ಲಾ ಆಸ್ಪತ್ರೆಗಳಲ್ಲಿ ಆಶಾಕಿರಣ ದೃಷ್ಟಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಚಿಂತಾಮಣಿ ಸಾರ್ವಜನಿಕ ಅಸ್ಪತ್ರೆ ಹಾಗೂ ಬಟ್ಲಹಳ್ಳಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ದೃಷ್ಟಿ ಕೇಂದ್ರಗಳನ್ನು ತೆರೆಯಲಾಗಿದೆ. ನಗರದ ಸಾರ್ವಜನಿಕ ಆಸ್ಪತ್ರೆ, ಬಟ್ಲಹಳ್ಳಿ ಮತ್ತು ಕೈವಾರದ ಸಮುದಾಯ ಕೇಂದ್ರಗಳಲ್ಲಿ ನೇತ್ರಾಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.