ಬಾಗೇಪಲ್ಲಿ: ಭಾಗ್ಯನಗರ ಕಟ್ಟಡ ಕಾರ್ಮಿಕರ ಒಕ್ಕೂಟದಿಂದ ಕಾರ್ಮಿಕರ ದಿನಾಚರಣೆ ಪ್ರಯುಕ್ತ ಮಂಗಳವಾರ ಪಟ್ಟಣದ ಡಿವಿಜಿ ಮುಖ್ಯರಸ್ತೆಯಲ್ಲಿ ಕಟ್ಟಡ ಕಾರ್ಮಿಕರು ಮೆರವಣಿಗೆ ನಡೆಸಿದರು.

ಪಟ್ಟಣದ ಹೊಸಜೀವನ ನಿಲಯ ಚರ್ಚ್ನ ಬಳಿ ಭಾಗ್ಯನಗರ ಕಟ್ಟಡ ಕಾರ್ಮಿಕರ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಭಾಗ್ಯನಗರ ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಶಿವಶಂಕರ್ ಮಾತನಾಡಿ, ಕಟ್ಟಡ ಮತ್ತು ಇತರೆ ಕಾರ್ಮಿಕರು ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು. ಸರ್ಕಾರದ ಯೋಜನೆಗಳನ್ನು ಪಡೆಯಬೇಕು. ಶ್ರಮಿಕ ವರ್ಗದ ಕಾರ್ಮಿಕರು ಪ್ರತಿದಿನ ಕೂಲಿಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಕೆಲಸದಲ್ಲಿ ಅಭದ್ರತೆ ಮತ್ತು ಆರೋಗ್ಯದ ಸಮಸ್ಯೆ ಹೆಚ್ಚಾಗಿವೆ. ಕಾರ್ಮಿಕರಿಗೆ ಸೇವಾ ಭದ್ರತೆ, ಸಾಲ ಸೌಲಭ್ಯ ಕಲ್ಪಿಸಬೇಕು. ಮಕ್ಕಳ ಶಿಕ್ಷಣಕ್ಕೆ ಉದ್ಯೋಗ, ಶಿಕ್ಷಣದಲ್ಲಿ ಮೀಸಲಾತಿ ಕಲ್ಪಿಸಬೇಕು ಎಂದು ತಿಳಿಸಿದರು.

ಸಂಘಟನೆಯ ಉಪಾಧ್ಯಕ್ಷ ಚಿನ್ನಪ್ಪಯ್ಯ, ಕಾರ್ಯದರ್ಶಿ ವಿಶ್ವನಾಥ್, ಚಲಪತಿ, ಖಾಜಾಫೀರ್, ಚಂದ್ರಶೇಖರ, ಬಾಷಾ, ಬಶೀರ್ಸಾಬ್, ನರಸಿಂಹಮೂರ್ತಿ, ಆಂಜಿ, ರವಿ, ನಯಾಜ್, ಹರೀಶ್, ವಿನಯ್, ಮೂರ್ತಿ, ಮಂಜುನಾಥ, ಆಸಿಫ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.