ಚಿಕ್ಕಬಳ್ಳಾಪುರ: ಬಾಗೇಪಲ್ಲಿ ವಿಧಾನಸಭಾ ವ್ಯಾಪ್ತಿಯ ಸರ್ಕಾರಿ ಆಸ್ಪತ್ರೆಗಳು, ಶಾಲೆಗಳು, ಅಂಗನವಾಡಿಗಳು, ರಸ್ತೆಗಳು, ಸಮುದಾಯ ಭವನಗಳು ಸೇರಿದಂತೆ ಇತರ ಸಾರ್ವಜನಿಕ ಕಚೇರಿಗಳನ್ನು ನಿರ್ಮಿಸುವ ಸಂಬಂಧ ಭೂ ಮಂಜೂರಾತಿ ಕುರಿತಂತೆ ಜಿಲ್ಲಾಧಿಕಾರಿ ಜಿ.ಪ್ರಭು, ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರೊಂದಿಗೆ ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿದರು.

ಜಿಲ್ಲಾಧಿಕಾರಿ ಜಿ.ಪ್ರಭು ಮಾತನಾಡಿ, ಸಾರ್ವಜನಿಕ ಕಚೇರಿಗಳನ್ನು ನಿರ್ಮಿಸಲು ಅಗತ್ಯವಿರುವ ಭೂಮಿ ಮಂಜೂರು ಮಾಡಲು ಮತ್ತು ಸಂಬಂಧಪಟ್ಟ ಇಲಾಖೆಗೆ ಹಸ್ತಾಂತರಿಸಲು ಜಿಲ್ಲಾಡಳಿತ ಕ್ರಮವಹಿಸಲಿದೆ. ಯಾವ ಉದ್ದೇಶಕ್ಕೆ ಭೂ ಮಂಜೂರಾತಿ ಆಗಿರುತ್ತದೋ ಆ ಉದ್ದೇಶದ ರೀತಿ ಭೂ ಮಂಜೂರಾತಿ ಆದ ಮೂರು ತಿಂಗಳ ಒಳಗಾಗಿ ಪ್ರಾರಂಭಿಕ ಕಾಮಗಾರಿ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದರು.

ಇಲ್ಲವಾದಲ್ಲಿ ಸಂಬಂಧಪಟ್ಟ ಭೂ ಮಂಜೂರಾತಿಯನ್ನು ಹಿಂಪಡೆಯಲು ಕ್ರಮವಹಿಸಲಾಗುತ್ತದೆ. ಈ ನಿಟ್ಟಿನಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು ನಿಗಾ ವಹಿಸಿ ಜಿಲ್ಲಾಡಳಿತಕ್ಕೆ ಕಾಲೋಚಿತವಾಗಿ ವರದಿ ನೀಡಬೇಕು ಎಂದರು.

ಮುಂದಿನ ಒಂದು ವಾರದ ಒಳಗಾಗಿ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ 17 ಆಯುಷ್ಮಾನ್ ಆಸ್ಪತ್ರೆಗಳನ್ನು ನಿರ್ಮಿಸಲು ಆಯಕಟ್ಟಿನ ಜನಸಂದಣಿ ಕೇಂದ್ರಿತ ಪ್ರದೇಶಗಳಲ್ಲಿ 60x40 ನಿವೇಶನಗಳನ್ನು ಗುರುತಿಸಿ ಮಂಜೂರು ಮಾಡಲು ಆಗತ್ಯ ಕ್ರಮ ಕೈಗೊಳ್ಳಬೇಕು. ಅದೇ ರೀತಿ ಜಿಲ್ಲೆಯ ಇತರ ತಾಲ್ಲೂಕುಗಳಲ್ಲೂ ಜಾಗ ಗುರುತಿಸಲು ಮುಂದಾಗಬೇಕು ಎಂದು ಸೂಚನೆ ನೀಡಿದರು.

ನಿವೇಶನ ಹಂಚಿಕೆ, ಕಂದಾಯ ಗ್ರಾಮ ಅನುಷ್ಠಾನ, ರಸ್ತೆ ನಿರ್ಮಾಣ ಸೇರಿದಂತೆ ಬಾಗೇಪಲ್ಲಿ ವಿಧಾನಸಭಾ ವ್ಯಾಪ್ತಿಯಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಶಾಸಕರು ನೀಡಿರುವ ಪಟ್ಟಿಯಲ್ಲಿನ ಎಲ್ಲಾ ವಿಷಯಗಳನ್ನು ಕುಲಂಕಷವಾಗಿ ಪರಿಶೀಲಿಸಿ ಕಾನೂನು ರೀತಿ ಅನುಷ್ಠಾನಗೊಳಿಸಲಾಗುವುದು ಎಂದು ಭರವಸೆ ನೀಡಿದರು.

ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಮಾತನಾಡಿ, ಬಾಗೇಪಲ್ಲಿ, ಗುಡಿಬಂಡೆ ಮತ್ತು ಚೇಳೂರು ತಾಲ್ಲೂಕು ವ್ಯಾಪ್ತಿಯಲ್ಲಿ ಎತ್ತಿನಹೊಳೆ ಯೋಜನೆಯಡಿ ಲಭ್ಯವಾಗುವ ಕುಡಿಯುವ ನೀರನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಈ ನಿಟ್ಟಿನಲ್ಲಿ ಪೂರ್ವ ಸಿದ್ಧತಾ ಕಾಮಗಾರಿಗಳನ್ನು ಸಮರ್ಪಕ ನಿರ್ವಹಿಸಲು ಜಿಲ್ಲಾಧಿಕಾರಿಗೆ ಮನವಿ ಮಾಡಿದರು. ಬಾಗೇಪಲ್ಲಿ ವಿಧಾನಸಭಾ ವ್ಯಾಪ್ತಿಯಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿ ಹಾಗೂ ಸಾರ್ವಜನಿಕ ಉದ್ದೇಶದ ಕಚೇರಿಗಳ ನಿರ್ಮಾಣಕ್ಕೆ ಭೂ ಮಂಜೂರಾತಿಗೆ ಸಂಬಂಧಪಟ್ಟಂತೆ ಹಲವು ಕಾರ್ಯಗಳ ಕುರಿತು ಪಟ್ಟಿಯನ್ನು ಜಿಲ್ಲಾಧಿಕಾರಿ ಅವರಿಗೆ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್, ಉಪವಿಭಾಗಾಧಿಕಾರಿ ಡಿ.ಎಚ್. ಅಶ್ವಿನ್ ತಹಶೀಲ್ದಾರರು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು, ಸ್ಥಳೀಯಾಡಳಿತ ಸಂಸ್ಥೆಗಳ ಪೌರಾಯುಕ್ತರು, ಮುಖ್ಯಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-16-1478109748

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.