ಚೇಳೂರು: ತಾಲ್ಲೂಕು ಕೇಂದ್ರವಾಗಿ ವೇಗವಾಗಿ ಬೆಳೆಯುತ್ತಿರುವ ಚೇಳೂರು ಪಟ್ಟಣವು ಮೂಲ ಸೌಕರ್ಯಗಳ ಕೊರತೆಯಿಂದಾಗಿ ಅಕ್ಷರಶಃ ನಲುಗುತ್ತಿದೆ.

ಇಲ್ಲಿನ ಮುಖ್ಯರಸ್ತೆಗಳಲ್ಲಿ ವಾಹನಗಳ ದಟ್ಟಣೆ ಮಿತಿಮೀರಿದ್ದು, ಸಮರ್ಪಕ ಪಾರ್ಕಿಂಗ್ ವ್ಯವಸ್ಥೆ ಇಲ್ಲದ ಕಾರಣ ಪಟ್ಟಣದ ರಸ್ತೆಗಳು ವಾಹನಗಳ ನಿಲುಗಡೆ ತಾಣಗಳಾಗಿ ಮಾರ್ಪಟ್ಟಿವೆ. ಜೊತೆಗೆ ರಸ್ತೆ ಬದಿ ಅತಿಕ್ರಮಣವು ಸಾರ್ವಜನಿಕರ ಸುಗಮ ಸಂಚಾರಕ್ಕೆ ದೊಡ್ಡ ಕಂಟಕವಾಗಿದೆ.

ಪಟ್ಟಣದ ಮುಖ್ಯ ರಸ್ತೆಗಳ ಎರಡೂ ಬದಿಗಳಲ್ಲಿ ಅನಧಿಕೃತವಾಗಿ ತಲೆ ಎತ್ತಿರುವ ಕೃತಕ ಅಂಗಡಿಗಳು ರಸ್ತೆಯನ್ನು ಆಕ್ರಮಿಸಿಕೊಂಡಿವೆ. ಪಾದಚಾರಿಗಳಿಗಾಗಿ ಮೀಸಲಿರುವ ಜಾಗದಲ್ಲಿ ಇಂದು ಅಂಗಡಿಗಳ ಮುಂದುವರಿದ ಭಾಗ ಮತ್ತು ಜಾಹೀರಾತು ಫಲಕಗಳು ರಾರಾಜಿಸುತ್ತಿವೆ. ಕೆಲವು ವ್ಯಾಪಾರಿಗಳು ತಮ್ಮ ವ್ಯಾಪಾರದ ವಸ್ತುಗಳನ್ನು ಪ್ರದರ್ಶನಕ್ಕಿಡಲು ರಸ್ತೆಯ ಬಹುಪಾಲು ಜಾಗವನ್ನು ಬಳಸಿಕೊಳ್ಳುತ್ತಿರುವುದು ಸಂಚಾರ ದಟ್ಟಣೆಗೆ ಕಾರಣವಾಗಿದೆ.

ಪಟ್ಟಣಕ್ಕೆ ಬರುವ ನೂರಾರು ವಾಹನಗಳಿಗೆ ನಿಗದಿತ ಪಾರ್ಕಿಂಗ್ ವ್ಯವಸ್ಥೆ ಇಲ್ಲದಿರುವುದು ದೊಡ್ಡ ಸಮಸ್ಯೆಯಾಗಿದೆ. ದ್ವಿಚಕ್ರ ಮತ್ತು ಕಾರುಗಳು ಸೇರಿದಂತೆ ಇನ್ನಿತರ ವಾಹನಗಳನ್ನು ರಸ್ತೆ ಮೇಲೆ ಸಾಲಾಗಿ ನಿಲ್ಲಿಸಲಾಗುತ್ತಿದೆ. ಇದರಿಂದ ವಾಹನಗಳು ಮತ್ತು ಬಸ್ಸುಗಳ ಸಂಚಾರಕ್ಕೆ ಅಡ್ಡಿಯಾಗುತ್ತಿದ್ದು, ಸಂಚಾರ ದಟ್ಟಣೆ ಉಂಟಾಗುವುದು ಸಾಮಾನ್ಯ ಎಂಬಂತಾಗಿದೆ.

ರಸ್ತೆ ಬದಿಗಳಲ್ಲಿ ಅಂಗಡಿಗಳು ಹಾಗೂ ವಾಹನಗಳ ಪಾರ್ಕಿಂಗ್ನಿಂದಾಗಿ ಜನಸಾಮಾನ್ಯರು ಓಡಾಡಲು ಪಾದಚಾರಿ ಮಾರ್ಗವೇ ಇಲ್ಲದಂತಾಗಿದೆ. ಶಾಲಾ-ಕಾಲೇಜಿಗೆ ಹೋಗುವ ಮಕ್ಕಳು ಅನಿವಾರ್ಯವಾಗಿ ನಡುರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ತೆರಳುವ ದುಃಸ್ಥಿತಿ ಎದುರಾಗಿದೆ. ವೇಗವಾಗಿ ಬರುವ ವಾಹನಗಳ ಭಯದ ನಡುವೆಯೇ ರಸ್ತೆ ದಾಟುವುದು ವೃದ್ಧರಿಗೆ ದೊಡ್ಡ ಸವಾಲಾಗಿದೆ.

ಚೇಳೂರು ಪಟ್ಟಣವು ತಾಲ್ಲೂಕು ಕೇಂದ್ರವಾಗಿ ಘೋಷಣೆಯಾದ ನಂತರ ಸಂಚಾರ ದಟ್ಟಣೆ ಹೆಚ್ಚಾಗಿದೆ. ಆದರೆ, ಸಂಬಂಧಪಟ್ಟ ಅಧಿಕಾರಿಗಳು ಅತಿಕ್ರಮಣ ತೆರವುಗೊಳಿಸಲು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಅಂಗಡಿ ಮಾಲೀಕರು ಫುಟ್ಪಾತ್ಗಳನ್ನು ತಮ್ಮ ಸ್ವಂತ ಆಸ್ತಿಯಂತೆ ಬಳಸಿಕೊಳ್ಳುತ್ತಿದ್ದಾರೆ ಎಂದು ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಟ್ಟಣದ ಸುವ್ಯವಸ್ಥೆ ಕಾಪಾಡಲು ಆಡಳಿತ ಮಂಡಳಿಯು ಈ ಕೂಡಲೇ ಎಚ್ಚೆತ್ತುಕೊಂಡು ಪಾದಚಾರಿ ಮತ್ತು ರಸ್ತೆ ಬದಿಗಳನ್ನು ಅತಿಕ್ರಮಿಸಿಕೊಂಡ ಅಂಗಡಿಗಳನ್ನು ತಕ್ಷಣವೇ ತೆರವುಗೊಳಿಸಬೇಕು. ಪಟ್ಟಣದ ಪ್ರಮುಖ ವೃತ್ತಗಳ ಸಮೀಪ ನಿರ್ದಿಷ್ಟ ಪಾರ್ಕಿಂಗ್ ಸ್ಥಳ ಗುರುತಿಸಬೇಕು. ರಸ್ತೆಗಳಲ್ಲಿ ಸಂಚಾರಕ್ಕೆ ಅಡ್ಡಿಪಡಿಸುವ ಜಾಹೀರಾತು ಫಲಕಗಳನ್ನು ತೆರವುಗೊಳಿಸಬೇಕುಎಂದು ಸಾರ್ವಜನಿಕರು ಒತ್ತಾಯಿಸುತ್ತಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-16-1460216109

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.