ಚೇಳೂರು: 2025-26ನೇ ಸಾಲಿನ ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ, ಚೇಳೂರು ತಾಲ್ಲೂಕಿನ ಪಿಬಿಆರ್ಸಿಪಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶುಕ್ರವಾರ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಭೂಮಿಪೂಜೆ ನೆರವೇರಿಸಿದರು.

ಗ್ರಾಮೀಣ ಭಾಗದ ಸಾರ್ವಜನಿಕರ ಹಾಗೂ ವಾಹನ ಸವಾರರ ಮನವಿಗೆ ಸ್ಪಂದಿಸಿರುವ ಶಾಸಕ, ರಸ್ತೆ ನಿರ್ಮಾಣಕ್ಕಾಗಿ ₹4.75ಕೋಟಿ ಅನುದಾನ ಮಂಜೂರು ಮಾಡಿಸಿದ್ದಾರೆ.

ನಿಗದಿತ ಅವಧಿಯೊಳಗೆ ಗುಣಮಟ್ಟದ ವಸ್ತುಗಳನ್ನು ಬಳಸಿ ರಸ್ತೆ ನಿರ್ಮಿಸಬೇಕು. ಕಾಮಗಾರಿಯಲ್ಲಿ ಲೋಪದೋಷ ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ದಿನನಿತ್ಯ ನೂರಾರು ವಾಹನ ಸಂಚರಿಸುವ ಈ ರಸ್ತೆಗಳು ಕನಿಷ್ಠ ಹತ್ತಾರು ವರ್ಷಗಳ ಕಾಲ ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳುವುದು ಅಧಿಕಾರಿಗಳ ಜವಾಬ್ದಾರಿ ಎಂದರು.

ರಾಶ್ಚರುವು ಗ್ರಾಮದಿಂದ ಕುರುಬವಾಂಡ್ಲಪಲ್ಲಿ ಗ್ರಾಮದವರೆಗೆ ಹಾಗೂ ಚಾಕವೇಲು ಗ್ರಾಮದಿಂದ ವಡ್ಡಿವಾಂಡ್ಲಪಲ್ಲಿ ಗ್ರಾಮದವರೆಗೆ ರಸ್ತೆ ಅಭಿವೃದ್ಧಿಯಾಗಲಿದೆ.

ವಕೀಲ ಚಂದ್ರಶೇಖರರೆಡ್ಡಿ, ಬಾಬುರೆಡ್ಡಿ, ಎಚ್.ಶಾಮೀರ್ ಬಾಷ, ವೆಂಕಟೇಶ್, ಡೈರಿ ನಾಗರಾಜ್, ನರಸಿರಾಮ, ರಾಮು, ಶಫಿ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-16-1621267172

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.