ಚೇಳೂರು: ತಹಶೀಲ್ದಾರ್ ಕಚೇರಿಯಲ್ಲಿ ಶುಕ್ರವಾರ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅಧ್ಯಕ್ಷತೆಯಲ್ಲಿ ಅಕ್ರಮ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ ಜರುಗಿತು. ಸಭೆ ನಂತರ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.

ತಾಲ್ಲೂಕಿನಲ್ಲಿರುವ ಬಡ ಮತ್ತು ಮಧ್ಯಮ ವರ್ಗದ ಭೂ ರಹಿತರಿಗೆ ಜಮೀನು ನೀಡಲಿದ್ದೇವೆ. ಅರ್ಹ ಫಲಾನುಭವಿಗಳಿಗೆ ನ್ಯಾಯ ಒದಗಿಸುವುದೇ ನಮ್ಮ ಸರ್ಕಾರದ ಮೊದಲ ಆದ್ಯತೆ ಎಂದು ಸುಬ್ಬಾರೆಡ್ಡಿ ಭರವಸೆ ನೀಡಿದರು.

ಸಭೆಯಲ್ಲಿ ತಾಲ್ಲೂಕಿನಾದ್ಯಂತ ಸಲ್ಲಿಕೆಯಾಗಿರುವ ಅಕ್ರಮ ಸಾಗುವಳಿ ಸಕ್ರಮೀಕರಣದ ಅರ್ಜಿಗಳ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು. ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರತಿಯೊಂದು ಅರ್ಜಿಯ ವಸ್ತುಸ್ಥಿತಿಯನ್ನು ಪರಿ ಶೀಲಿಸಿದ ಶಾಸಕರು, ಯಾವುದೇ ಕಾರಣಕ್ಕೂ ಶ್ರೀಮಂತರು ಅಥವಾ ಅನರ್ಹರು ಈ ಯೋಜನೆಯ ದುರುಪಯೋಗ ಪಡಿಸಿಕೊಳ್ಳದಂತೆ ಎಚ್ಚರಿಕೆ ವಹಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಹಲವು ವರ್ಷಗಳಿಂದ ಭೂಮಿ ನಂಬಿ ಬದುಕುತ್ತಿರುವ, ಸ್ವಂತ ಜಮೀನಿಲ್ಲದ ಬಡ ಕೃಷಿಕರು ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಆದ್ಯತೆ ನೀಡಲಾಗುವುದು. ತಹಶೀಲ್ದಾರ್ ಹಾಗೂ ಕಂದಾಯ ನಿರೀಕ್ಷಕರು ಸ್ಥಳ ಪರಿಶೀಲನೆ ನಡೆಸಿ, ಅರ್ಹರಿಗಷ್ಟೇ ಸಾಗುವಳಿ ಚೀಟಿ ಸಿಗುವಂತೆ ಪಾರದರ್ಶಕವಾಗಿ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ಆದೇಶಿಸಿದರು.

ಸಭೆ ನಂತರ ಸಾರ್ವಜನಿಕರನ್ನು ಶಾಸಕರು ಖುದ್ದಾಗಿ ಭೇಟಿ ಮಾಡಿದರು. ಸಾರ್ವಜನಿಕರು ತಮಗಿರುವ ಭೂಮಿ ಸಮಸ್ಯೆ, ಪೋಡಿ ಮುಕ್ತ ಗ್ರಾಮ ಯೋಜನೆ, ಪಹಣಿ ತಿದ್ದುಪಡಿ ಹಾಗೂ ಇತರೆ ಕಂದಾಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಮನವಿ ಸಲ್ಲಿಸಿದರು.

ತಹಶೀಲ್ದಾರ್ ಶ್ವೇತಾ ಬಿ.ಕೆ, ಇಒ ಜಿ.ವಿ. ರಮೇಶ್, ಆರ್ಐ ಈಶ್ವರ್, ಚಂದ್ರಶೇಖರರೆಡ್ಡಿ, ಬೂರಗಮಡುಗು ನರಸಿಂಹಪ್ಪ, ಪರಿಮಳ, ಎಡಿಎಲ್ಆರ್ ಮಂಜುನಾಥ, ಅರಣ್ಯ ಇಲಾಖೆಯ ಅಭಿಷೇಕ್, ಕಂದಾಯ ಅಧಿಕಾರಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-16-983065815

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.