ಚೇಳೂರು: ಕಲ್ಯಾಣಿ ಸ್ವಚ್ಛತಾ ಅಭಿಯಾನದ ಅಂಗವಾಗಿ ತಾಲ್ಲೂಕಿನ ಚಾಕವೇಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಿಗವಪ್ಯಾಯಲವಾರಿಪಲ್ಲಿ ಗ್ರಾಮದ ಐತಿಹಾಸಿಕ ಕಲ್ಯಾಣಿಯನ್ನು ಶ್ರಮದಾನದ ಮೂಲಕ ಸೋಮವಾರ ಸ್ವಚ್ಛಗೊಳಿಸಲಾಯಿತು.

ಜಿಲ್ಲೆಯಾದ್ಯಂತ ಮಾರ್ಚ್ 23 ರಿಂದ ಏ.3ರವರೆಗೆ ಕಲ್ಯಾಣಿ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿದೆ.

ದಿಗವಪ್ಯಾಯಲವಾರಿಪಲ್ಲಿಯ ಕಲ್ಯಾಣಿಯು ಶತಮಾನಗಳ ಇತಿಹಾಸ ಹೊಂದಿದೆ. ನಿರ್ವಹಣೆಯಿಲ್ಲದೆ ಗಿಡಗಂಟಿಗಳು ಹಾಗೂ ಹೂಳಿನಿಂದ ತುಂಬಿತ್ತು. ಸೋಮವಾರ ನಡೆದ ಶ್ರಮದಾನದಲ್ಲಿ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.

ಬೆಳಿಗ್ಗೆಯಿಂದಲೇ ಕಾರ್ಯಪ್ರವೃತ್ತರಾದ ಸಿಬ್ಬಂದಿ ಕಲ್ಯಾಣಿಯ ಸುತ್ತಮುತ್ತ ಬೆಳೆದಿದ್ದ ಮುಳ್ಳಿನ ಪೊದೆಗಳನ್ನು ತೆರವುಗೊಳಿಸಿದರು. ಒಳಭಾಗದಲ್ಲಿದ್ದ ಪ್ಲಾಸ್ಟಿಕ್ ಹಾಗೂ ಹೂಳನ್ನು ವಿಲೇವಾರಿ ಮಾಡಲಾಯಿತು.

ಪಂಚಾಯತಿ ಸಿಬ್ಬಂದಿಗಳ ಈ ಕಾರ್ಯವನ್ನು ಕಂಡ ಗ್ರಾಮಸ್ಥರು ಕೂಡ ಶ್ರಮದಾನದಲ್ಲಿ ಕೈಜೋಡಿಸಿದರು. ಕಲ್ಯಾಣಿಯನ್ನು ಸ್ವಚ್ಛಗೊಳಿಸುವುದಷ್ಟೇ ಅಲ್ಲದೆ, ಅದನ್ನು ಮುಂದಿನ ದಿನಗಳಲ್ಲಿ ಕಲುಷಿತಗೊಳಿಸದಂತೆ ಕಾಪಾಡಿಕೊಳ್ಳುವ ಸಂಕಲ್ಪವನ್ನು ಗ್ರಾಮಸ್ಥರು ಮಾಡಿದರು. ಪ್ಲಾಸ್ಟಿಕ್ ಮುಕ್ತ ಗ್ರಾಮ ಮತ್ತು ಜಲ ಸಂರಕ್ಷಣೆಯ ಬಗ್ಗೆ ಈ ಸಂದರ್ಭದಲ್ಲಿ ಜಾಗೃತಿ ಮೂಡಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-16-614327933

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.