ಚೇಳೂರು: ತಾಲ್ಲೂಕಿನ ಮೂಗಿರೆಡ್ಡಿಪಲ್ಲಿ ಕ್ರಾಸ್ ಬಳಿ ಭಾನುವಾರ ಸಂಜೆ ನಡೆದ ಕೆಎಸ್ಆರ್ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವಿನ ಭೀಕರ ಅಪಘಾತದಲ್ಲಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತಪಟ್ಟ ಯುವಕನನ್ನು ಆಂಧ್ರಪ್ರದೇಶದ ಪುಲಿಕಲ್ಲು ಗ್ರಾಮದ ಅಭಿಷೇಕ್ (23) ಎಂದು ಗುರುತಿಸಲಾಗಿದೆ. ಇವರು ತಮ್ಮ ಸಂಬಂಧಿ ಪ್ರವರ್ಧನ ಅವರೊಂದಿಗೆ ದ್ವಿಚಕ್ರ ವಾಹನದಲ್ಲಿ ಚೇಳೂರಿನಿಂದ ತಮ್ಮ ತಾಯಿಯ ತವರೂರು ರಾಮಾನುಪಡಿಗೆ ತೆರಳುತ್ತಿದ್ದರು. ಈ ವೇಳೆ ಮೂಗಿರೆಡ್ಡಿಪಲ್ಲಿ ಕ್ರಾಸ್ ಬಳಿ ಎದುರಿನಿಂದ ಬಂದ ಕೆಎಸ್ಆರ್ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿಯಾಗಿವೆ.

ಅಪಘಾತದ ತೀವ್ರತೆಗೆ ಅಭಿಷೇಕ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಮೃತ ಅಭಿಷೇಕ್ಗೆ ಮದುವೆಯಾಗಿ ಕೇವಲ ಒಂದು ತಿಂಗಳು ಕಳೆದಿತ್ತು. ಸಂಭ್ರಮದಲ್ಲಿದ್ದ ಕುಟುಂಬದಲ್ಲಿ ಈ ಘಟನೆ ಬರಸಿಡಿಲಿನಂತೆ ಎರಗಿದ್ದು, ಮೃತರ ಗ್ರಾಮದಲ್ಲಿ ಶೋಕ ಮಡುಗಟ್ಟಿದೆ.

ಅಪಘಾತದಲ್ಲಿ ಗಾಯಗೊಂಡಿರುವ ಹಿಂಬದಿ ಸವಾರ ಪ್ರವರ್ಧನ ಚೇಳೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬಾಗೇಪಲ್ಲಿ ಸಾರ್ವಜನಿಕ ಆಸ್ಪತ್ರೆಗೆ ಕಳುಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-15-2036681374

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.