ದೊಡ್ಡಗಂಜೂರು (ಚಿಂತಾಮಣಿ): ತಾಲ್ಲೂಕಿನ ಕಸಬಾ ಹೋಬಳಿಯ ದೊಡ್ಡಗಂಜೂರು ಗ್ರಾಮದ ಸಮೀಪ ಭಾನುವಾರ ರಾತ್ರಿ ಅಪರಿಚಿತ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಮಹ್ಮದ್ ನ್ಯಾಮತ್ ಉಲ್ಲಾ ಖಾನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾದಿಗೆರೆ ಗ್ರಾಮದ ಮಸೀದಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸರ್ದಾರ್ ಖಾನ್(55) ಮೃತಪಟ್ಟಿವರು.

ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಲ್ಲೂಕಿನ ಗೊಲ್ಲಹಳ್ಳಿ ಗ್ರಾಮದ ಮಸೀದಿಯಲ್ಲಿ ಧರ್ಮಗುರುಗಳಾಗಿದ್ದ ಮಹ್ಮದ್ ನ್ಯಾಮತ್ ಉಲ್ಲಾ ಖಾನ್ ಮತ್ತು ಸರ್ದಾರ್ ಖಾನ್ ಇಬ್ಬರು ಕೆಲಸದ ನಿಮಿತ್ತ ದ್ವಿಚಕ್ರ ವಾಹನದಲ್ಲಿ ಚಿಂತಾಮಣಿಯಿಂದ ಶ್ರೀನಿವಾಸಪುರ ರಸ್ತೆ ಕಡೆ ತೆರಳುತ್ತಿದ್ದರು. ಹಿಂಬದಿಯಿಂದ ಅತಿ ವೇಗ ಮತ್ತು ಅಜಾಗರೂಕತೆಯಿಂದ ಬಂದ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಅಲ್ಲದೆ, ಕಾರಿನ ಚಾಲಕ ವಾಹನ ನಿಲ್ಲಿಸದೆ ಪರಾರಿಯಾಗಿದ್ದಾನೆ. ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಕೆಳಗೆ ಬಿದ್ದಿದೆ.

ದ್ವಿಚಕ್ರ ವಾಹನ ಸವಾರ ಮತ್ತು ಹಿಂಬದಿ ಸವಾರ ಇಬ್ಬರು ಬೈಕ್ನಿಂದ ಬಿದ್ದಿದ್ದು, ಗಾಯಗೊಂಡಿದ್ದರು. ಹಿಂಬದಿ ಸವಾರ ಸರ್ದಾರ್ ಖಾನ್ ಅವರ ತಲೆಗೆ ತೀವ್ರ ಪೆಟ್ಟಾಗಿ, ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಹ್ಮದ್ ನ್ಯಾಮತ್ ಉಲ್ಲ ಖಾನ್ಗೆ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರದ ಎಸ್.ಎನ್.ಆರ್ ಆಸ್ಪತ್ರೆಗೆ ರವಾನಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260331-16-2097278997

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.