ಚಿಂತಾಮಣಿ: ತಾಲ್ಲೂಕಿನ ತಿನಕಲ್ ಗ್ರಾಮದ ಬೆಟ್ಟದ ತಪ್ಪಲಿನಲ್ಲಿ ಅಂದರ್-ಬಾಹರ್ ಜೂಜಾಟದಲ್ಲಿ ತೊಡಗಿದ್ದ ಗುಂಪಿನ ಮೇಲೆ ದಾಳಿ ನಡೆಸಿದ ಗ್ರಾಮಾಂತರ ಠಾಣೆ ಪೊಲೀಸರು, ಐವರನ್ನು ಬಂಧಿಸಿದ್ದಾರೆ.

ಬಂಧಿತರ ಬಳಿ ಇದ್ದ ₹1,500 ನಗದು ಮತ್ತು 52 ಇಸ್ಪೀಟ್ ಎಲೆಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದರು. ಪೊಲೀಸರನ್ನು ಕಂಡ ಕೂಡಲೇ ಇಸ್ಪೀಟ್ ಆಟದಲ್ಲಿ ತೊಡಗಿದ್ದವರು ಗಾಬರಿಯಿಂದ ಚೆಲ್ಲಾಪಿಲ್ಲಿಯಾಗಿ ಓಡಲು ಯತ್ನಿಸಿದರು. ಆರೋಪಿಗಳ ವಿರುದ್ಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೈವಾರ ಹೋಬಳಿಯ ಬೊಮ್ಮೆಕಲ್ ಗ್ರಾಮದ ಚೆನ್ನಪ್ಪ, ಕೇಶವ, ಆಂಜನಪ್ಪ, ಅನಿಲ್ ಕುಮಾರ್ ಹಾಗೂ ಗುಟ್ಟಹಳ್ಳಿ ಚಿಕ್ಕಣ್ಣ ಬಂಧಿತರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-16-1285036027

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.