ಚಿಂತಾಮಣಿ: ತಾಲ್ಲೂಕಿನ ಕೈವಾರ ಹೋಬಳಿಯ ಕೆಂದನಹಳ್ಳಿ ಗ್ರಾಮದಲ್ಲಿ ಭಾನುವಾರ ಮನೆ ಪಕ್ಕದ ನೀರಿನ ತೊಟ್ಟಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ.

ಮೃತನ ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡರು.

ಸಂತೋಷ್ ಅವರು ತಮ್ಮ ಹೆಂಡತಿ ತವರೂರು ಕೋಲಾರ ತಾಲ್ಲೂಕಿನ ತಾವರೆಕೊಪ್ಪದಲ್ಲಿ ವಾಸವಾಗಿದ್ದರು. ಮೂರು ದಿನಗಳ ಹಿಂದಷ್ಟೇ ತಮ್ಮ ಸ್ವಗ್ರಾಮ ಕೆಂದನಹಳ್ಳಿ ಗ್ರಾಮಕ್ಕೆ ಬಂದಿದ್ದರು. ಶುಕ್ರವಾರ ಪತ್ನಿಯೊಡನೆ ಫೋನ್ನಲ್ಲಿ ಮಾತನಾಡಿದ್ದರು. ಭಾನುವಾರ ಮನೆ ಪಕ್ಕದಲ್ಲಿ ನಿರ್ಮಾಣ ಹಂತದಲ್ಲಿದ್ದ ಮನೆ ಕಾಂಪೌಂಡ್ನ ನೀರಿನ ಸಂಪ್ ಬಳಿ ಹೆಚ್ಚಿನ ನೊಣಗಳು ಕಂಡುಬಂದಿದ್ದವು. ಅನುಮಾನಗೊಂಡು ಸಂಪ್ನಲ್ಲಿ ನೋಡಿದಾಗ ಸಂತೋಷ್ ಅವರ ಶವ ಕಂಡುಬಂದಿದೆ. ಈ ಕುರಿತು ಗ್ರಾಮಸ್ಥರು ಕುಟುಂಬಸ್ಥರು ಮತ್ತು ಕೈವಾರ ಹೊರ ಠಾಣೆಗೆ ಮಾಹಿತಿ ನೀಡಿದರು.

ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ಸಂಪ್ನಲ್ಲಿದ್ದ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದರು. ಆ ಬಳಿಕ ವಾರಸುದಾರರಿಗೆ ಒಪ್ಪಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-16-904081959

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.